AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ವ್ಯವಸ್ಥೆ ಜನಸ್ನೇಹಿ ಆಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Basavaraj Bommai: ಕೊವಿಡ್ 19 ಸಂಭಾವ್ಯ ಮೂರನೇ ಅಲೆ ತಡೆಗಟ್ಟಲು ಕ್ರಮ ವಹಿಸಬೇಕು. ಗಡಿ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಹಿರಿಯ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗಡಿ ಚೆಕ್ ಪೋಸ್ಟ್​ಗಳ ತಪಾಸಣೆ ನಡೆಸಬೇಕು ಎಂದು ಹೇಳಿದರು.

ಪೊಲೀಸ್ ವ್ಯವಸ್ಥೆ ಜನಸ್ನೇಹಿ ಆಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Aug 10, 2021 | 10:54 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಆಗಸ್ಟ್ 10) ತಿಳಿಸಿದ್ದಾರೆ. ಅವರು ಇಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿ ಇಲಾಖೆಯ ಸುಧಾರಣೆ ಮತ್ತು ಅತ್ಯುತ್ತಮ ಕಾರ್ಯ ನಿರ್ವಹಣೆಗೆ ಬೆಂಬಲ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಿದ್ದಾರೆ. ಇಲಾಖೆಯು ಅಪರಾಧ ಪ್ರಕರಣಗಳ ಶೀಘ್ರ ತನಿಖೆಗೆ ಆದ್ಯತೆ ನೀಡಬೇಕು. ಇದರಲ್ಲಿ ವಿಳಂಬ ಧೋರಣೆ ಸಲ್ಲದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳ ಮುಖ್ಯಾಂಶಗಳು ಹೀಗಿದೆ:

  • ಪೊಲೀಸ್ ಇಲಾಖೆಯಲ್ಲಿ ಹಲವು ಸುಧಾರಣೆಗಳು, ಮೂಲಸೌಕರ್ಯ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು.
  • ಮುಂದಿನ ದಿನಗಳಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಿದೆ. ಕೊವಿಡ್ 19 ಸಂಭಾವ್ಯ ಮೂರನೇ ಅಲೆ ತಡೆಗಟ್ಟಲು ಕ್ರಮ ವಹಿಸಬೇಕು. ಗಡಿ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಹಿರಿಯ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗಡಿ ಚೆಕ್ ಪೋಸ್ಟ್​ಗಳ ತಪಾಸಣೆ ನಡೆಸಬೇಕು ಎಂದು ಹೇಳಿದರು.
  • ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಅಪರಾಧ ವೈರಸ್ ಇದ್ದ ಹಾಗೆ. ಅದನ್ನು ಸಶಕ್ತವಾಗಿ ಸದೆಬಡಿಯಬೇಕು. ಆಗ ಹತೋಟಿಯಲ್ಲಿರುತ್ತದೆ ಎಂದು ಅಭಿಪ್ರಾಯಪಟ್ಟರು.
  • ಸಮಾಜದಲ್ಲಿ ಜೂಜು, ಡಾರ್ಕ್ ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಕಟ್ಟುನಿಟ್ಟಾಗಿ ತಿಳಿಸಿದರು.
  • ಅಪರಾಧವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
  • ಕಾನೂನು, ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಪ್ರಥಮ ಆದ್ಯತೆ ಎಂದು ತಿಳಿಸಿದರು.
  • ಭೂವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು ಎಂದರು.
  • ಮಾದಕ ವಸ್ತುಗಳ ವಿರುದ್ಧದ ಹೋರಾಟ ಮುಂದುವರೆಯಲಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.
  • ಆಂತರಿಕ ಭದ್ರತಾ ವಿಭಾಗವನ್ನು ಬಲಪಡಿಸಬೇಕು ಎಂದು ತಿಳಿಸಿದರು.
  • ಕೈದಿಗಳ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
  • ಪೊಲೀಸ್ ವ್ಯವಸ್ಥೆ ಜನಸ್ನೇಹಿ ಆಗಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿಗಾಗಿ ಕೈಗೊಂಡ ಯೋಜನೆ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

ಕೆಆರ್​ಎಸ್​ ಆಣೆಕಟ್ಟೆಗೆ ಬಾಗಿನ ಅರ್ಪಿಸಲು ಮಂಡ್ಯ ಜೆಡಿಎಸ್​ ಶಾಸಕರಿಂದ ಸಿಎಂ ಬೊಮ್ಮಾಯಿಗೆ ಆಹ್ವಾನ

(CM Basavaraj Bommai Araga Jnanendra on Karnataka Police Department)

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು