CM Bommai Press Meet: ಜಿಲ್ಲಾವಾರು ಕೊವಿಡ್ ತಡೆ ಯೋಜನೆ, ಗಡಿ ಜಿಲ್ಲೆಗಳ ಹಳ್ಳಿಗಳಲ್ಲಿ ಟೆಸ್ಟಿಂಗ್, 6 ಜಿನೋಮ್ ಟೆಸ್ಟಿಂಗ್ ಲ್ಯಾಬ್ ಸ್ಥಾಪನೆ: ಸಿಎಂ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ ಸುದ್ಧಿಗೋಷ್ಠಿ: ದಿನಗೂಲಿ ನೌಕರರು, ಕೂಲಿ ಕಾರ್ಮಿಕರು, ಆಟೋ, ಓಲಾ, ಊಬರ್, ಹೊಟೆಲ್​ಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ದಿನಗೂಲಿ ಕೆಲಸ ಅವಲಂಬಿತರಿಗೆ ಯಾವುದೇ ತೊಂದರೆಯಾಗಬಾರದು ಎಂದು ಸೂಚನೆ ನೀಡಿದರು.

CM Bommai Press Meet: ಜಿಲ್ಲಾವಾರು ಕೊವಿಡ್ ತಡೆ ಯೋಜನೆ, ಗಡಿ ಜಿಲ್ಲೆಗಳ ಹಳ್ಳಿಗಳಲ್ಲಿ ಟೆಸ್ಟಿಂಗ್, 6 ಜಿನೋಮ್ ಟೆಸ್ಟಿಂಗ್ ಲ್ಯಾಬ್ ಸ್ಥಾಪನೆ: ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: guruganesh bhat

Updated on:Aug 14, 2021 | 9:30 PM

ಬೆಂಗಳೂರು: ಕೊರೊನಾ 2ನೇ ಅಲೆ ಸಂಪೂರ್ಣವಾಗಿ ಹೋಗಿಲ್ಲ. ಬಹಳ ಎಚ್ಚರಿಕೆಯಿಂದ ಕೊರೊನಾ ನಿಯಂತ್ರಿಸಬೇಕಾಗಿದೆ. ಮಹಾರಾಷ್ಟ್ರ ಮತ್ತು ಕೇರಳದ ಗಡಿ ಹಳ್ಳಿಗಳಲ್ಲಿ ಸಂಪೂರ್ಣ ಕೊವಿಡ್ ಪರೀಕ್ಷೆ ನಡೆಸಲಾಗುವುದು. ಕೊವಿಡ್ ತಡೆಯಲು ಜಿಲ್ಲಾವಾರು ಯೋಜನೆಗೆ ನಿರ್ಧಾರ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಹಾಸನ, ಬೆಂಗಳೂರು ಗ್ರಾಮೀಣ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಲಸಿಕೆ ವಿತರಣೆ ಇನ್ನೂ ವೇಗ ಪಡೆಯಬೇಕು. ಪಾಸಿಟಿವಿಟಿ  ದರ 2  ಪರ್ಸೆಂಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಓಪನ್ ಮಾಡಬೇಕು. ಪೋಷಕರು ಮತ್ತು ಶಿಕ್ಷಕರು ಕೊರೊನಾ ಲಸಿಕೆ ಪಡೆದಿರಬೇಕು. ಕೊವಿಡ್ ಪಾಸಿಟಿವಿಟಿ ದರ ಶೇಕಡಾ 2ಕ್ಕಿಂತ ಹೆಚ್ಚಾದರೆ ಒಂದು ವಾರ ಶಾಲೆಯನ್ನು ಮುಚ್ಚಿ, ಸ್ಯಾನಿಟೈಸ್ ಮಾಡ್ತೇವೆ. ಸ್ಯಾನಿಟೈಸ್ ಮಾಡಿ ವಾರದ ಬಳಿಕ ಶಾಲೆ ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಯಚೂರು, ಕಲಬುರಗಿ, ಕೊಪ್ಪಳ, ಹಾವೇರಿ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಟೆಸ್ಟಿಂಗ್ ಹೆಚ್ಚಳಕ್ಕೆ ಚಿಂತಿಸಲಾಗಿದೆ. ಡೆಲ್ಟಾ ವೇರಿಯೆಂಟ್ ಪತ್ತೆಗೆ ಜಿನೋಮ್ ಲ್ಯಾಬ್ ಅಗತ್ಯವಾಗಿದ್ದು, ಮುಂದಿನ 3 ವಾರದಲ್ಲಿ 6 ಜಿನೋಮ್ ಟೆಸ್ಟಿಂಗ್ ಲ್ಯಾಬ್ ಸ್ಥಾಪಿಸಲಾಗುವುದು.  ಬೆಂಗಳೂರು, ಮೈಸೂರು, ಶಿವಮೊಗ್ಗ, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿಯಲ್ಲಿ ಜಿನೋಮ್ ಟೆಸ್ಟಿಂಗ್ ಲ್ಯಾಬ್ ಆರಂಭ ಮಾಡಲಾಗುವುದುಎ ಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯದಲ್ಲಿ 2ನೇ ಅಲೆ ಮುಗಿದಿಲ್ಲ, 3ನೇ ಅಲೆ ಆರಂಭವಾಗಿಲ್ಲ. ಹಬ್ಬಗಳಿಗೆ ಕಳೆದ ವರ್ಷದ ಕೊವಿಡ್ ನಿಯಮಗಳೇ ಮುಂದುವರೆಯಲಿದೆ. ಮೊದಲ ಅಲೆ ಆರಂಭವಾಗಿದ್ದು ಕೇರಳ ರಾಜ್ಯದಲ್ಲಿ. ಈಗ ಹೆಚ್ಚು ಕೇಸ್ ಇರುವುದು ಕೂಡ ಕೇರಳದಲ್ಲಿಯೇ. ಕೇರಳ ಹೈಕೋರ್ಟ್‌ನಲ್ಲಿ ಕೇಸ್ ಹಾಕುವ ಬದಲು ಸೋಂಕು ನಿಯಂತ್ರಿಸಲಿ ಎಂದು ಅವರು ಆಶಿಸಿದರು.

ಶೇ.2ಕ್ಕಿಂತ ಹೆಚ್ಚಾದರೆ ಬೆಡ್ ಅಲಾಟ್‌ಮೆಂಟ್‌ಗೆ ಸೂಚನೆ ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.40ರಷ್ಟು ಬೆಡ್ ಪಡೆಯುತ್ತೇವೆ. ಬೆಡ್ ಪಡೆಯುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ದಕ್ಷಿಣ ಕನ್ನಡ, ಹಾಸನ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಪಾಸಿಟಿವಿಟಿ ಹೆಚ್ಚಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಹೆಚ್ಚು ವ್ಯಾಕ್ಸಿನೇಷನ್ ಆಗಬೇಕಿದೆ. ಟೆಸ್ಟಿಂಗ್ ಜೊತೆಗೆ ವ್ಯಾಕ್ಸಿನೇಷನ್‌ ಕೂಡ ಹೆಚ್ಚು ಮಾಡಬೇಕಿದೆ. ರಾಯಚೂರು, ಕಲಬುರಗಿ, ಕೊಪ್ಪಳ, ಹಾವೇರಿ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಟೆಸ್ಟಿಂಗ್ ಹೆಚ್ಚಳಕ್ಕೆ ಚಿಂತನೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ರಾಜ್ಯದಲ್ಲಿ 4 ಕೋಟಿಯಷ್ಟು ವ್ಯಾಕ್ಸಿನೇಷನ್ ಆಗಿದೆ. ರಾಜ್ಯದಲ್ಲಿ ಸದ್ಯ 14,89,000 ಡೋಸ್ ಲಸಿಕೆ ಲಭ್ಯವಿದೆ. ಈ ತಿಂಗಳಾಂತ್ಯಕ್ಕೆ ಮತ್ತಷ್ಟು ಕೊವಿಡ್ ಲಸಿಕೆ ಬರಲಿದೆ. ರಾಜ್ಯಕ್ಕೆ ಸದ್ಯ 68 ಲಕ್ಷ ಲಸಿಕೆಯನ್ನು ಕಳುಹಿಸಲಾಗುತ್ತಿದೆ. ಮತ್ತಷ್ಟು ಲಸಿಕೆ ಪೂರೈಕೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: 

Big Breaking: ಸದ್ಯಕ್ಕೆ ಲಾಕ್​ಡೌನ್ ಬೇಡ, ವೀಕೆಂಡ್ ಕರ್ಫ್ಯೂ ಮಾಡೋಣ: ಸಿಎಂ ಬಸವರಾಜ ಬೊಮ್ಮಾಯಿ

Kareena Kapoor: ಕೊವಿಡ್​ ಮೂರನೆ ಅಲೆ ಭೀತಿ; ಪತಿ ಸೈಫ್ ಮತ್ತು ಮಕ್ಕಳೊಂದಿಗೆ ಮಾಲ್ಡೀವ್ಸ್​ಗೆ ಹಾರಿದ ಕರೀನಾ

(CM Basavaraj Bommai directs Meeting to Prevent Covid 3rd Wave Decides to continue with the rules in force for the next 2 weeks)

Published On - 6:15 pm, Sat, 14 August 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ