ಹುಬ್ಬಳ್ಳಿ-ಅಂಕೋಲಾ ರೈಲುಮಾರ್ಗ, ಕಲಬುರಗಿಗೆ ಪ್ರತ್ಯೇಕ ರೈಲ್ವೆ ವಿಭಾಗ; ಕೇಂದ್ರ ಸಚಿವರ ಜತೆ ಚರ್ಚಿಸಿದ ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಒಟ್ಟು ₹4,300 ಕೋಟಿ ವೆಚ್ಚದಲ್ಲಿ ಬ್ರಾಡ್ ಬ್ಯಾಂಡ್ ಸಂಪರ್ಕ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಹುಬ್ಬಳ್ಳಿ-ಅಂಕೋಲಾ ರೈಲುಮಾರ್ಗ, ಕಲಬುರಗಿಗೆ ಪ್ರತ್ಯೇಕ ರೈಲ್ವೆ ವಿಭಾಗ; ಕೇಂದ್ರ ಸಚಿವರ ಜತೆ ಚರ್ಚಿಸಿದ ಸಿಎಂ ಬೊಮ್ಮಾಯಿ
ಬಸವರಾಜ್ ಬೊಮ್ಮಾಯಿ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
Follow us
TV9 Web
| Updated By: guruganesh bhat

Updated on:Sep 07, 2021 | 8:06 PM

ದೆಹಲಿ: ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವೈಷ್ಣವ್ ಜತೆ ಚರ್ಚಿಸಿದ್ದೇನೆ. ಕಲಬುರಗಿಗೆ ರೈಲ್ವೆ ವಿಭಾಗ ನೀಡುವಂತೆ ಮನವಿ ಮಾಡಿದ್ದೇವೆ. ಹುಬ್ಬಳ್ಳಿ-ಅಂಕೋಲಾ ಮಾರ್ಗ ಬಗ್ಗೆಯೂ ಚರ್ಚಿಸಲಾಗಿದೆ. ಬೆಂಗಳೂರು ಸಬ್ಅರ್ಬನ್ ಯೋಜನೆ ಆರಂಭಿಸಲು ಮನವಿ ಸಲ್ಲಿಸಿದ್ದೇನೆ ಎಂದು ದೆಹಲಿಯ ರೈಲ್ವೆ ಭವನದ ಬಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಬ್ರಾಡ್​ಬ್ಯಾಂಡ್​ಗಳನ್ನು ಹೆಚ್ಚಿಸುವ ಕುರಿತು ಚರ್ಚಿಸಿದ್ದೇವೆ. ಅಲ್ಲದೇ ರಾಜ್ಯದಲ್ಲಿ ಒಟ್ಟು ₹4,300 ಕೋಟಿ ವೆಚ್ಚದಲ್ಲಿ ಬ್ರಾಡ್ ಬ್ಯಾಂಡ್ ಸಂಪರ್ಕ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಜತೆಗೆ ಬಿ.ಎಲ್.ಸಂತೋಷ್ ಜತೆ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದಾಗಿಯೂ ಅವರು ಸುದ್ದಿಗಾರರಿಗೆ ತಿಳಿಸಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಚರ್ಚಿಸಿದರು. ನಬಾರ್ಡ್​ನಡಿ ಹಲವು ಯೋಜನೆಗಳಿವೆ. ಇವುಗಳನ್ನು ರಾಜ್ಯದಲ್ಲಿ ಅನುಷ್ಠಾನ ಮಾಡುವ ಬಗ್ಗೆ ಮನವಿ ಮಾಡಿದ್ದೇನೆ. ಯೋಜನೆ ಆರಂಭಿಸಲು ಸಚಿವರು ಸೂಚನೆ ನೀಡಿದ್ದಾರೆ. ಇದರಿಂದ ಕುಶಲಕರ್ಮಿಗಳು, ಮಹಿಳೆಯರಿಗೆ ಉದ್ಯೋಗ ದೊರೆಯಲಿದೆ. ಎಲ್ಲಾ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಜಾರಿಗೆ ಗುರಿ ಹೊಂದಿದ್ದೇವೆ. ಜಿಎಸ್​ಟಿ ಪರಿಹಾರ ಹಣ ಪಡೆದುಕೊಳ್ಳುವ ಬಗ್ಗೆಯೂ ಚರ್ಚಿಸಿದ್ದೇನೆ ಎಂದು ಅವರು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭೇಟಿಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: 

ತಾಲಿಬಾನ್ ಆಡಳಿತಕ್ಕೆ ವಿಶ್ವಸಂಸ್ಥೆ ಅಭಯ: ಅಫ್ಘಾನಿಸ್ತಾನದಲ್ಲಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಮಾರ್ಟಿನ್ ಗ್ರಿಫಿತ್ಸ್​-ಮುಲ್ಲಾ ಬಾರದಾರ್ ಭೇಟಿ

Viral News: ನಿಮಗಿದು ಗೊತ್ತಾ?; ಈ ಕಾಳಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೂಡಲ್ಸ್ ನೀಡಲಾಗುತ್ತೆ!

(CM Basavaraj Bommai discussed Hubballi Ankola Rail Project with Union Rail Minister Ashwini Vaishnav)

Published On - 7:56 pm, Tue, 7 September 21

ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ