AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಗೆ ಬಿಜೆಪಿ ವರಿಷ್ಠರು ನನ್ನನ್ನು ಕರೆಸಿಲ್ಲ, ನಾನೇ ಜೆ.ಪಿ.ನಡ್ಡಾ, ಅಮಿತ್​ ಶಾರನ್ನು ಭೇಟಿಯಾಗುತ್ತೇನೆ: ಬಸವರಾಜ ಬೊಮ್ಮಾಯಿ

ಸಮಾಜದಲ್ಲಿ ಶಾಂತಿ ಕದಡುತ್ತಿರುವ ಬಗ್ಗೆ ಸರ್ಕಾರ ಕೈ ಕಟ್ಟಿ ಕುಳಿತಿದೆ ಏನೂ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು,  ಯಾರು ಏನಾದರೂ ಅಂದುಕೊಳ್ಳಲಿ. ವೈಯಕ್ತಿಕ ವಿಚಾರಗಳನ್ನು ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ದೆಹಲಿಗೆ ಬಿಜೆಪಿ ವರಿಷ್ಠರು ನನ್ನನ್ನು ಕರೆಸಿಲ್ಲ, ನಾನೇ ಜೆ.ಪಿ.ನಡ್ಡಾ, ಅಮಿತ್​ ಶಾರನ್ನು ಭೇಟಿಯಾಗುತ್ತೇನೆ: ಬಸವರಾಜ ಬೊಮ್ಮಾಯಿ
ಸಿಎಂ ಬೊಮ್ಮಾಯಿ
TV9 Web
| Updated By: Lakshmi Hegde|

Updated on:Apr 06, 2022 | 9:41 AM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆಯಿಂದ ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ಇದ್ದಾರೆ. ಅವರ ದೆಹಲಿಯ ಭೇಟಿ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆಯ ಕುತೂಹಲವೂ ಗರಿಗೆದರಿತ್ತು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಡಲೆಂದೇ ಅವರನ್ನು ಹೈಕಮಾಂಡ್ ಕರೆಸಿದೆ ಎಂಬ ಚರ್ಚೆಯೂ ಹುಟ್ಟಿತ್ತು. ಆದರೆ ತನ್ನನ್ನು ದೆಹಲಿಗೆ ಬರುವಂತೆ ಬಿಜೆಪಿ ನಾಯಕರು ಕರೆಸಿಲ್ಲ ಎಂಬುದನ್ನು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿವಿಧ ಯೋಜನೆಗಳ ಬಗ್ಗೆ ಚರ್ಚೆ ನಡೆಸಲು ದೆಹಲಿಗೆ ಬಂದಿದ್ದೆ. ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್​ ಶಾರನ್ನು ಭೇಟಿಯಾಗಲು ನಿರ್ಧರಿಸಿದ್ದೇನೆ. ಆದರೆ ವರಿಷ್ಠರನ್ನು ಭೇಟಿಯಾಗಲು ಇನ್ನೂ ಸಮಯ ನಿಗದಿಯಾಗಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಪುನರ್​ ರಚನೆ ಮಾಡಬೇಕೋ ಎಂಬುದು ಹೈಕಮಾಂಡ್ ಭೇಟಿ ಬಳಿಕವಷ್ಟೇ ಗೊತ್ತಾಗಲಿದೆ ಎಂದೂ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಎದ್ದಿರುವ ಹಲಾಲ್​ ಮತ್ತು ಹಿಜಾಬ್​ ವಿವಾದಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, ಧಾರ್ಮಿಕ ಮತ್ತು ಸಾಮಾಜಿಕ ಆಚರಣೆಗಳು ನಮ್ಮ ಸಮಾಜದಲ್ಲಿ ಯಾವ ರೀತಿ ಇರಬೇಕು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.  ಕಾನೂನು ಎಲ್ಲರಿಗೂ ಒಂದೇ. ಎಲ್ಲರೂ ಅದಕ್ಕೆ ತಲೆಬಾಗಿ ನಡೆಯಬೇಕು. ನಮ್ಮ ಸರ್ಕಾರ, ಕಾನೂನು ಮತ್ತು ಸುವ್ಯವಸ್ಥೆ, ಶಾಂತಿ ಕಾಪಾಡಲು ಪ್ರಾಮುಖ್ಯತೆ ನೀಡುತ್ತದೆ  ಎಂದು ಹೇಳಿದರು.

ಸಮಾಜದಲ್ಲಿ ಶಾಂತಿ ಕದಡುತ್ತಿರುವ ಬಗ್ಗೆ ಸರ್ಕಾರ ಕೈ ಕಟ್ಟಿ ಕುಳಿತಿದೆ ಏನೂ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು,  ಯಾರು ಏನಾದರೂ ಅಂದುಕೊಳ್ಳಲಿ. ವೈಯಕ್ತಿಕ ವಿಚಾರಗಳನ್ನು ಜನ ತೀರ್ಮಾನ ಮಾಡುತ್ತಾರೆ. ಅವರು ಯಾವಾಗ ಮೂಕರಾಗಿದ್ದರು, ಯಾವಾಗ ಏನು ಮಾತನಾಡುತ್ತಾರೆ. ನಾನು ಏನು ಮಾತನಾಡುತ್ತೇನೆ ಎನ್ನುವುದನ್ನು ಜನ ತೀರ್ಮಾನಿಸುತ್ತಾರೆ. ನಾನು ಅದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ನಾವು ಯಾವಾಗ ಕೆಲಸ ಮಾಡಬೇಕಿತ್ತೋ ಆಗ ಮಾಡಿದ್ದೇವೆ. ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇವೆ. ಹಲವಾರು ವಿಚಾರಗಳು ಬಂದಾಗ ಅಧಿಕಾರಿಗಳಿಗೆ ಸೂಚನೆ ಕೊಟ್ಟು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದೇವೆ. ಹೇಳಿಕೆ ಕೊಟ್ಟರಷ್ಟೇ ಆಡಳಿತ ಅಲ್ಲ. ಆಡಳಿತ ಮಾಡಲು ರೀತಿ ನೀತಿಗಳಿವೆ. ಅದರಂತೆ ನಾವು ಆಡಳಿತ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಆಸ್ಕರ್​ ಮತ್ತು ಗ್ರ್ಯಾಮಿ ಪ್ರಶಸ್ತಿ ಬಹಿಷ್ಕಾರ ಮಾಡುವಂತೆ ಕಂಗನಾ ಒತ್ತಾಯ; ಗಂಭೀರ ಆರೋಪ ಮಾಡಿದ ನಟಿ

Published On - 9:33 am, Wed, 6 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ