AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Supply: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಸಮಾನತೆ ಹೋಗಲಾಡಿಸಲು ಸಿಎಂ ಬೊಮ್ಮಾಯಿ ಖಡಕ್ ಸೂಚನೆ

ರಾಜ್ಯದ 15 ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ 7 ಗಂಟೆಗಳ ವಿದ್ಯುತ್ ಪೂರೈಕೆಯಾಗುತ್ತಿದ್ದು, ಉಳಿದ ಜಿಲ್ಲೆಗಳಲ್ಲಿ 5 ಗಂಟೆಗಳ ವಿದ್ಯುತ್ ಪೂರೈಕೆಯೂ ಸರಿಯಾಗಿ ಆಗುತ್ತಿಲ್ಲ.

Power Supply: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಸಮಾನತೆ ಹೋಗಲಾಡಿಸಲು ಸಿಎಂ ಬೊಮ್ಮಾಯಿ ಖಡಕ್ ಸೂಚನೆ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Updated By: guruganesh bhat|

Updated on:Aug 11, 2021 | 5:20 PM

Share

ಬೆಂಗಳೂರು: ವಿದ್ಯುತ್ ಕ್ಷೇತ್ರದಲ್ಲಿ ಸಾವಲಂಬಿ ಆಗುವುದರ ಜೊತೆಗೆ ಸಮರ್ಥವಾಗಿ ವಿದ್ಯುತ್ ನಿರ್ವಹಣೆಯನ್ನು ದೂರದೃಷ್ಟಿಯನ್ನು ಇಟ್ಟುಕೊಂಡು ಕೆಲಸ ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (CM Basavaraj Bommai) ಅವರು ಸೂಚನೆ ನೀಡಿದರು. ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಸಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ವಿದ್ಯುತ್ ಉತ್ಪಾದನೆ ಮತ್ತು ನಿರ್ವಹಣೆ (Power Supply) ಇನ್ನು ಬಹಳ ವ್ಯವಸ್ಥಿತವಾಗಿ ಮಾಡಬೇಕು. ಮಾರುಕಟ್ಟೆ ಸ್ಥಿತಿಗತಿಯನ್ನು ಆಧರಿಸಿ ಹೆಚ್ಚಿನ ದರಕ್ಕೆ ವಿದ್ಯುತ್ತನ್ನು ಮಾರಾಟ ಮಾಡುವಂತಾಗಬೇಕು. ಕರ್ನಾಟಕ ವಿದ್ಯುತ್ ನಿಗಮದಿಂದ ವಿದ್ಯುತ್ ಉತ್ಪಾದನೆ ಅತ್ಯಂತ ದಕ್ಷತೆಯಿಂದ ಆಗಬೇಕು. ಜಲ ಮತ್ತು ವಿದ್ಯುತ್ ಘಟಕಗಳು ಅತಿ ಹೆಚ್ಚು ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸಲಾಗಿರುವ ಬೋರ್​ವೆಲ್​ಗಳಿಗೂ ಯಾವುದೇ ರೀತಿಯ ತಡ ಮಾಡದೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಕೊವಿಡ್ ಸಂದರ್ಭದಲ್ಲಿ ವಿಶೇಷವಾಗಿ ಆಸ್ಪತ್ರೆಗಳಿಗೆ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿರ್ದೇಶನ ನೀಡಿದರು. ರಾಜ್ಯದ 15 ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ 7 ಗಂಟೆಗಳ ವಿದ್ಯುತ್ ಪೂರೈಕೆಯಾಗುತ್ತಿದ್ದು, ಉಳಿದ ಜಿಲ್ಲೆಗಳಲ್ಲಿ 5 ಗಂಟೆಗಳ ವಿದ್ಯುತ್ ಪೂರೈಕೆಯೂ ಸರಿಯಾಗಿ ಆಗುತ್ತಿಲ್ಲ. ಈ ಅಸಮಾನತೆಯನ್ನು ಹೋಗಲಾಡಿಸಲು ನೀಲನಕ್ಷೆಯನ್ನು ಸಿದ್ಧಪಡಿಸಿ ಕಾಲಮಿತಿಯಲ್ಲಿ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು.

ವಿದ್ಯುತ್ ಸೋರಿಕೆಯನ್ನು ತಡೆಗಟ್ಟಿ ಒಟ್ಟಾರೆ ಇಂಧನ ವ್ಯವಸ್ಥೆಯ ಸುಧಾರಣೆಗೆ ಒತ್ತು ನೀಡಬೇಕು. ರಾಜ್ಯದಲ್ಲಿ ನವೀಕೃತ ಮೂಲಗಳ ಸ್ಥಾಪಿತ ಸಾಮರ್ಥ್ಯ 15184.13 ಮೆ. ವ್ಯಾಟ್ಗಳಿದ್ದು ದೇಶದಲ್ಲಿಯೇ ಕರ್ನಾಟಕ ಮುಂಚೂಣಿಯಲ್ಲಿದೆ. ಭವಿಷ್ಯದ ದೃಷ್ಟಿಯಿಂದ ನವೀಕೃತ ಇಂಧನಕ್ಕೆ ಆದ್ಯತೆ ನೀಡುವಂತೆ ಸಲಹೆ ನೀಡಿದರು. ಗಂಗಾ ಕಲ್ಯಾಣ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಲ್ಲಾ ಅಭಿವೃದ್ಧಿ ನಿಗಮಗಳು ಸೇರಿದಂತೆ ಒಟ್ಟು 18569 ಕೊಳವೆಬಾವಿಗಳ ವಿದ್ಯುದೀಕರಣಗೊಳಿಸುವ ಗುರಿ ಇದೆ. ಇದಕ್ಕಾಗಿ ಪ್ರತಿ ಪಂಪ್ ಸೆಟ್ ವಿದ್ಯುದೀಕರಣಕ್ಕೆ ಬಿಡುಗಡೆ ಮಾಡುವ 50 ಸಾವಿರ ರೂ.ಗಳ ವೆಚ್ಚವನ್ನು 1.2 ಲಕ್ಷಕ್ಕೆ ಹೆಚ್ಚಿಸುವ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಇಂಧನ ಸಚಿವ ಸುನೀಲ್ ಕುಮಾರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್,ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕಿ ಡಾ. ಎನ್.ಮಂಜುಳಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: 

ವಿದ್ಯುತ್ ತಿದ್ದುಪಡಿ ಮಸೂದೆಗೆ ರಾಜ್ಯಗಳಿಂದ ವಿರೋಧ ವ್ಯಕ್ತವಾಗುತ್ತಿರುವುದು ಏಕೆ? ವಿದ್ಯುತ್ ವಿತರಣಾ ಕಂಪನಿಗಳ ಭವಿಷ್ಯಕ್ಕೇನು ಅಪಾಯ?

ಶ್ರಾವಣ ಮಾಸದ ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಬೆಂಗಳೂರಿನ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ

(CM Basavaraj Bommai instructs to eliminate inequality in power supply in rural areas of the Karnataka)

Published On - 5:19 pm, Wed, 11 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ