ಬೆಂಗಳೂರು: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕೈಮಗ್ಗ ಅಭಿವೃದ್ಧಿ ನಿಗಮದ 2 ಎಕರೆ 34 ಗುಂಟೆ ಜಮೀನಿನನ್ನು ಮೈಸೂರು ಮಿನರಲ್ಸ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಿ, ಆದಾಯ ತರುವಂತೆ ಮಾಡಬೇಕು. ನಗರ ಪ್ರದೇಶದ ಗ್ರಾಹಕರನ್ನು ಆಕರ್ಷಿಸಲು ವಿನ್ಯಾಸ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಮಾರುಕಟ್ಟೆ ಅವಕಾಶ ವಿಸ್ತರಿಸಬೇಕು. ಕೈಮಗ್ಗ ಉತ್ಪನ್ನಗಳು ಹಾಗೂ ಕರಕುಶಲ ವಸ್ತುಗಳು ಒಂದೇ ಸೂರಿನಡಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಆನ್ ಲೈನ್ ಮಾರಾಟ ವ್ಯವಸ್ಥೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಕೈಮಗ್ಗ ಅಭಿವೃದ್ಧಿ ನಿಗಮದ ಸಭೆಯಲ್ಲಿ ಅವರು ಅಧಿಕಾರಿಳಿಗೆ ಈ ಸೂಚನೆ ನೀಡಿದ್ದಾರೆ. ನಿಗಮದ ಪುನಶ್ಚೇತನಕ್ಕೆ ಕೂಡಲೇ ವಹಿವಾಟು ಅಭಿವೃದ್ಧಿಗೆ ಯೋಜನೆ ರೂಪಿಸಬೇಕು. ನಿಗಮದ ವಾಣಿಜ್ಯ ಚಟುವಟಿಕೆಗಳನ್ನು ವಿಸ್ತರಿಸುವ ಮೂಲಕ ನಷ್ಟ ಭರಿಸಬೇಕು. ಶಿಕ್ಷಣ ಇಲಾಖೆಯ ಸಮವಸ್ತ್ರ ಪೂರೈಕೆಯಲ್ಲಿ ನಿಗಮಕ್ಕೆ ಆಗಿರುವ 10 ಕೋಟಿ ನಷ್ಟದಲ್ಲಿ 5 ಕೋಟಿ ಸರ್ಕಾರ ಭರಿಸಲಿದ್ದು, ಉಳಿದ 5 ಕೋಟಿಯನ್ನು ನಿಗಮದ ವಹಿವಾಟಿನ ಮೂಲಕ ಭರಿಸಬೇಕು. ಸರ್ಕಾರದ ವಿವಿಧ ಇಲಾಖೆಗಳು ತಮ್ಮ ಅಗತ್ಯದ ಕನಿಷ್ಠ ಶೇ. 25 ರಷ್ಟು ವಸ್ತ್ರವನ್ನು ಕೈಮಗ್ಗ ನಿಗಮದಿಂದ ಖರೀದಿಸುವಂತೆ ಸುತ್ತೋಲೆ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ.
ಜಲ ಜೀವನ್ ಮಿಷನ್ ಪ್ರಗತಿ ಪರಿಶೀಲನಾ ಸಭೆಯನ್ನೂ ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನಡೆಸಿದರು. ಬಹುಗ್ರಾಮ ಯೋಜನೆಗಳ ಮೇಲ್ವಿಚಾರಣೆಗೆ ಸಮಿತಿ ರಚನೆ ಮಾಡಬೇಕು. ಪ್ರತಿ 15 ದಿನಕ್ಕೊಮ್ಮೆ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಕಾಲ ಕಾಲಕ್ಕೆ ಸ್ಥಳ ಪರಿಶೀಲನೆ ನಡೆಸಬೇಕು. ಪ್ರತಿ ತಿಂಗಳು ನಾನು ಖುದ್ದು ಪ್ರಗತಿ ಪರಿಶೀಲನೆ ಮಾಡುತ್ತೇನೆ. 2022-23ರ ಸಾಲಿಗೆ ಯೋಜನೆ ರೂಪಿಸಿ, ಅನುಮೋದನೆ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಪ್ರಸಕ್ತ ಸಾಲಿನ ಎಲ್ಲಾ ಡಿಪಿಆರ್ ಗಳ ಅನುಮೋದನಾ ಪ್ರಕ್ರಿಯೆ ಅಕ್ಟೋಬರ್ ಒಳಗೆ ಪೂರ್ಣಗೊಳ್ಳಬೇಕು ಎಂದು ಅಅವರು ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ:
ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ಏರ್ಲಿಫ್ಟ್ಗೆ ನೆರವಾಗುತ್ತಿದೆ ತಜಕಿಸ್ತಾನದಲ್ಲಿರುವ ಭಾರತದ ವಾಯುನೆಲೆ
TV9 Kannada Exclusive: ಅಫ್ಘಾನಿಸ್ತಾನದಲ್ಲಿಯೂ ಕೊವಿಡ್ ಇದೆ, ನಿಮಗೆ ನೆನಪಿದೆಯೇ?
(CM Basavaraj Bommai instructs to set up an online marketing system for handloom products)
Published On - 9:07 pm, Tue, 24 August 21