AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪಷ್ಟ ದಿಕ್ಸೂಚಿ, ನಿರ್ದಿಷ್ಟ ಗುರಿ, ಸಮಸ್ಯೆ ಬಗೆಹರಿಸುವ ಬದ್ಧತೆ ಇದೆ: ಜನಸೇವಕ ಕಾರ್ಯಕ್ರಮದ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿಕೆ

Basavaraj Bommai: ಸ್ಪಷ್ಟ ದಿಕ್ಸೂಚಿ ನಿರ್ದಿಷ್ಟ ಗುರಿ ಸಮಸ್ಯೆ ಬಗೆಹರಿಸುವ ಬದ್ದತೆ ಮೂಲಕ ನಾವು ಮುನ್ನಡೆಯುತ್ತೇವೆ. ಕೇವಲ ರಾಜ್ಯೋತ್ಸವ ಮಾಡಿದ್ರೆ ಸಾಲದು ಅದು ಜನೋತ್ಸವ ಆಗಬೇಕು. ಆಡಳಿತ ಸುಧಾರಣೆ ಆದಾಗ ರಾಜ್ಯೋತ್ಸವ ಜನೋತ್ಸವ ಆಗುತ್ತದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸ್ಪಷ್ಟ ದಿಕ್ಸೂಚಿ, ನಿರ್ದಿಷ್ಟ ಗುರಿ, ಸಮಸ್ಯೆ ಬಗೆಹರಿಸುವ ಬದ್ಧತೆ ಇದೆ: ಜನಸೇವಕ ಕಾರ್ಯಕ್ರಮದ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 01, 2021 | 2:46 PM

Share

ಬೆಂಗಳೂರು: ಜನಸೇವಕ ಕಾರ್ಯಕ್ರಮ ನಗರದಲ್ಲಿ ಯಶಸ್ವಿಯಾಗಬೇಕು. ಹೆಚ್ಚು ಜನಸಂಖ್ಯೆ ಇರುವ ಬೆಂಗಳೂರಲ್ಲಿ ಯಶಸ್ವಿಯಾಗಬೇಕು. ಇಲ್ಲಿ ಯಶಸ್ವಿಯಾದರೆ ಜಿಲ್ಲೆಗಳಿಗೆ ವಿಸ್ತರಿಸುವುದು ಸುಲಭ. ಜನವರಿ 26 ರಿಂದ ಈ ಕಾರ್ಯಕ್ರಮವನ್ನು ಗ್ರಾಮೀಣ ಪ್ರದೇಶಗಳಿಗೆ ವಿಸ್ತರಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ನವೆಂಬರ್ 1) ಹೇಳಿಕೆ ನೀಡಿದ್ದಾರೆ.

ಕ್ರಾಂತಿಕಾರಿ ಬದಲಾವಣೆ ಆಗುವ ದಿನ ಇದು. ಬೆಂಗಳೂರಲ್ಲಿ ಮಾಡುತ್ತಿರುವ ಈ ಪ್ರಯೋಗ ಯಶಸ್ವಿ ಆಗಬೇಕು. ಶಕ್ತಿಕೇಂದ್ರದ ಹತ್ತಿರವೇ ಮಾಡುತ್ತಿರುವ ಈ ಯೋಜನೆ ಯಶಸ್ವಿ ಆಗಲೇಬೇಕು. ಮುಂದಿನ ದಿನಗಳಲ್ಲಿ ಇಡೀ ವ್ಯವಸ್ಥೆ ಬದಲಾವಣೆಗೆ ಇದು ಭದ್ರಬುನಾದಿ ಆಗುತ್ತೆ. ಸ್ಪಷ್ಟ ದಿಕ್ಸೂಚಿ ನಿರ್ದಿಷ್ಟ ಗುರಿ ಸಮಸ್ಯೆ ಬಗೆಹರಿಸುವ ಬದ್ದತೆ ಮೂಲಕ ನಾವು ಮುನ್ನಡೆಯುತ್ತೇವೆ. ಕೇವಲ ರಾಜ್ಯೋತ್ಸವ ಮಾಡಿದ್ರೆ ಸಾಲದು ಅದು ಜನೋತ್ಸವ ಆಗಬೇಕು. ಆಡಳಿತ ಸುಧಾರಣೆ ಆದಾಗ ರಾಜ್ಯೋತ್ಸವ ಜನೋತ್ಸವ ಆಗುತ್ತದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪಡಿತರ ಆಹಾರ ಧಾನ್ಯ ವಿತರಣೆ ಕೂಡ ಪ್ರಾರಂಭ ಮಾಡಿದ್ದೇವೆ. ಬಿಬಿಎಂಪಿ ಖಾತಾ ಕೊಡುವಂತದ್ದು ಕಷ್ಟದ ಕೆಲಸ, ಜನ ಸುಸ್ತಾಗಿ ಹೋಗಿದ್ದಾರೆ. ಸಾರಿಗೆ ಇಲಾಖೆಯಲ್ಲಿ ಬಹಳ ದೊಡ್ಡ ಬದಲಾವಣೆ ಮಾಡಲು ಸಾರಿಗೆ ಸಚಿವರು ಮುಂದಾಗಿದ್ದಾರೆ. ಬಹಳ ಜನ ಸಾರಿಗೆ ಕಚೇರಿಗೆ ಹೋಗ್ತಾರೆ. ಅದನ್ನು ತಪ್ಪಿಸಬೇಕು. 30 ಹೊಸ ಸೇವೆಗಳನ್ನು ತರುತ್ತಿದ್ದೇವೆ. ವಾಹನವನ್ನು ಯಾರು ಮಾರುತ್ತಾರೋ ಅವರೇ ರಿಜಿಸ್ಟ್ರೇಷನ್ ನೀಡುವ ವ್ಯವಸ್ಥೆ ತರುತ್ತಿದ್ದೇವೆ. 10 ಸಂಸ್ಥೆಗಳಿಗೆ ಮಾತ್ರ ಇದೀಗ ರಿಜಿಸ್ಟ್ರೇಷನ್ ಅವಕಾಶ ನೀಡುತ್ತಿದ್ದೇವೆ. ಇವೆಲ್ಲವೂ ಜನಪರವಾದ ಸರ್ಕಾರದ ನಿರ್ಣಯ ಎಂದು ತಿಳಿಸಿದ್ದಾರೆ.

2.66 ಲಕ್ಷ ಬಿಪಿಎಲ್, 1.45 ಲಕ್ಷ ಎಪಿಎಲ್ ಕಾರ್ಡ್ ಗಳಿಗೆ ಸಿಎಂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. 4.11 ಲಕ್ಷ ಪಡಿತರ ಕಾರ್ಡ್ ಗಳಿಗೆ ಅನುಮೋದನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಎಲ್ಲ ಸೇವೆಗಳ ಪರಿಶೀಲನೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಕಾರ್ಯಕ್ರಮ ಬಿಬಿಎಂಪಿ ಚುನಾವಣೆಗೆ ತಯಾರಿ ಅಲ್ಲ. ಆಡಳಿತದಲ್ಲಿ ಸುಧಾರಣೆ ತರುವುದಾಗಿ ಮೊದಲೇ ಹೇಳಿದ್ದೆ. ನಾನು ಸಿಎಂ ಆಗುವಾಗಲೇ ಹೇಳಿದ್ದೆ. ಅದಕ್ಕೆ ಪೂರಕವಾಗಿ ಈ ಕಾರ್ಯಕ್ರಮಗಳು ನಡೆಯುತ್ತಿವೆ. ಚುನಾವಣೆ ದೃಷ್ಟಿಯಿಂದ ಈ ಕಾರ್ಯಕ್ರಮ ನಡೆಯುತ್ತಿಲ್ಲ. ಜನಸೇವೆಯ ದೃಷ್ಟಿಯಿಂದ ಈ ಜನ ಸೇವೆ ತಂದಿದ್ದೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಬಂದ ಕಡೆ ಮಾತ್ರ ರಸ್ತೆ ಗುಂಡಿ ಮುಚ್ಚಿದ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಆ ರೀತಿ ಏನೂ ಇಲ್ಲ. ಮಳೆ ಬಂದ ಕಾರಣ ಗುಂಡಿ ಮುಚ್ಚುವುದು ತಡವಾಗ್ತಿದೆ. 28 ಕ್ಷೇತ್ರಗಳಲ್ಲೂ ಗುಂಡಿ ಮುಚ್ಚುವ ಕೆಲಸ ನಡೆಯುತ್ತಿದೆ‌. ವಾರ, ಹದಿನೈದು ದಿನಗಳ ಕಾಲ ಟೈಮ್ ಕೊಟ್ಟಿದ್ದೇನೆ. ಅದಾದ ಮೇಲೆ ನಾನೇ ಹೋಗಿ ಮತ್ತೆ ವೀಕ್ಷಣೆ ಮಾಡ್ತೇನೆ ಎಂದು ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಜನ ಸ್ಪಂದನ ವೆಬ್ ಪೋರ್ಟಲ್ ಉದ್ಘಾಟನೆ

ಇದನ್ನೂ ಓದಿ: ಕನ್ನಡ ನಮ್ಮ ದೇವರು, ಕನ್ನಡಿಗರು ಪ್ರತಿದಿನವೂ ಕನ್ನಡದಲ್ಲೇ ಮಾತನಾಡಬೇಕು; ಬಸವರಾಜ ಬೊಮ್ಮಾಯಿ ಭಾಷಣ

Published On - 2:45 pm, Mon, 1 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!