ದೆಹಲಿ: ಶಿರಾಡಿ ಘಾಟ್‌ನಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಮನವಿ ಮಾಡಿದ್ದೇವೆ. ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡುತ್ತೇವೆ. ಬಳಿಕ ಮತ್ತೊಂದು ಸುರಂಗ ಮಾರ್ಗಕ್ಕೆ ಆದ್ಯತೆ ನೀಡುತ್ತೇವೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ರಾಜ್ಯದ 4 ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಪರಿಗಣನೆ ಮಾಡಲಾಗಿದೆ. ಈ ಸಂಬಂಧ ಕೇಂದ್ರ ಹೆದ್ದಾರಿ ಸಚಿವರಿಗೆ ಮನವಿ ಮಾಡಿದ್ದೇವೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿ ಫಲಪ್ರದವಾಗಿದೆ ಎಂದು ಗಡ್ಕರಿ ಭೇಟಿ ಬಳಿಕ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಡ್ರಗ್ಸ್ ಕೇಸ್ ಮತ್ತೆ ಸದ್ದು ಮಾಡುತ್ತಿರುವ ವಿಚಾರವಾಗಿ ಪ್ರಶ್ನೆ ಮಾಡಿದಾಗ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ. ಅದನ್ನೆಲ್ಲ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಹೆಚ್ಚಳ ಹಿನ್ನೆಲೆ, ಕೇರಳ-ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಕೇರಳದಿಂದ ಬರುವವರಿಗೆ ನಿನ್ನೆ ಮಾರ್ಗಸೂಚಿ ಪ್ರಕಟ ಮಾಡಲಾಗಿದೆ. ರಾಜ್ಯ ಸರ್ಕಾರ ನಿನ್ನೆ ಮಾರ್ಗಸೂಚಿ ಹೊರಡಿಸಿದ್ದೇವೆ. ಕೇರಳ ಗಡಿಯಲ್ಲಿ ಮತ್ತಷ್ಟು ಬಿಗಿ ಕ್ರಮಕ್ಕೆ ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.
Called on the Union Minister for Road Transport and National Highways Shri @nitin_gadkari and had discussion regarding on-going roads and Highway projects of Karnataka. State PWD Minister Shri @CCPatilBJP, Revenue Minister Shri @RAshokaBJP were present. pic.twitter.com/xcVnTlIDbo
— Basavaraj S Bommai (@BSBommai) September 8, 2021
ಸಚಿವ ಜಿತೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿದೆ. ಆಡಳಿತ್ಮಾಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದೆ. ಬಳಿಕ ರಾಜೀವ್ ಚಂದ್ರಶೇಖರ್ ಭೇಟಿ ಮಾಡಿದೆ. ಎಲೆಕ್ಟ್ರಾನಿಕ್ ವಸ್ತುಗಳ ಉತ್ಪಾದಕ ಘಟಕ ಸ್ಥಾಪನೆ ಮತ್ತು ರಾಜ್ಯದಲ್ಲಿ ಆಫ್ಟಿಕಲ್ ಫೈಬರ್ ಇಂಟರ್ ನೆಟ್ ಅಳವಡಿಸುವ ಬಗ್ಗೆ, ರಾಜ್ಯ ಮಟ್ಟದ ಕೌಶಲ್ಯ ಅಭಿವೃದ್ಧಿ ಕೇಂದ್ರ ಆರಂಭಿಸುವ ಬಗ್ಗೆ ಚರ್ಚೆ ಮಾಡಿದೆ. ಗಡ್ಕರಿ ಭೇಟಿಯಾಗಿ ದಾಬಸ್ ಪೇಟೆ ಟು ಹೊಸುರು ರೋಡ್ ರಸ್ತೆ ನಿರ್ಮಾಣದ ಬಗ್ಗೆ ಚರ್ಚೆ ಮಾಡಿದೆ. ಯೋಜನೆ ಆರಂಭಿಸಲು ಮನವಿ ಮಾಡಿದೆ. ಈ ರಸ್ತೆಯಿಂದ ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗೆಹರಿಲಿದೆ. ಶಿರಾಡಿ ಘಾಟ್ ನಾಲ್ಕು ಪಥದ ರಸ್ತೆ ಸಂಪೂರ್ಣಗೊಳಿಸಲು ಮನವಿ ಮಾಡಿದೆ. ಬಿಜಾಪುರದಿಂದ ಸಂಕೇಶ್ವರ 80 ರಿಂದ 120 ಕಿಲೋಮೀಟರ್ಗೆ ವಿಸ್ತರಿಸಲು ಮನವಿ ಮಾಡಿದೆ. 5 ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿ ಮಾಡಲು ಮನವಿ ಮಾಡಿದೆ. ಭಾರತ ಮಾಲಾ ಎರಡನೇ ಯೋಜನೆಯಲ್ಲಿ ಸೇರಿಸಲು ಮನವಿ ಮಾಡಿದೆ. ಪ್ರವಾಹ ಪರಿಸ್ಥಿತಿ ವೇಳೆ ಹಾಳಾದ ರಸ್ತೆ ಪರಿಹಾರವಾಗಿ 184 ಕೋಟಿ ಬಿಡುಗಡೆ ಮಾಡಲು ಒಪ್ಪಿದ್ದಾರೆ. ನಿಫಾ ವೈರಸ್ ಬಗ್ಗೆ ಸೂಚನೆ ನೀಡಲಾಗಿದೆ ಎಂದು ನವದೆಹಲಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಉಡುಪಿ, ಮೈಸೂರಿನಲ್ಲಿ ಕೂಡ ನಿಫಾ ಕುರಿತು ಕಟ್ಟೆಚ್ಚರ
ಉಡುಪಿಯಲ್ಲೂ ನಿಫಾ ಕುರಿತು ಕಟ್ಟೆಚ್ಚರ ವಹಿಸಲಾಗುವುದು. ಕೇರಳ ಗಡಿ ಇಲ್ಲವಾದರೂ ಎಚ್ಚರ ಅಗತ್ಯ ಎಂದು ಉಡುಪಿಯ ಆರೋಗ್ಯ ಅಧಿಕಾರಿ ಡಾ. ನಾಗಭೂಷಣ ಉಡುಪ ಹೇಳಿಕೆ ನೀಡಿದ್ದಾರೆ. ನೆರೆಯ ರಾಜ್ಯ ಕೇರಳದಲ್ಲಿ ನಿಫಾ ಪ್ರಕರಣ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ನಾವು ಕಟ್ಟೆಚ್ಚರ ವಹಿಸಿದ್ದೇವೆ. ಕೇರಳದಿಂದ ಎರಡು ತಿಂಗಳು ರಾಜ್ಯ ಪ್ರವೇಶಕ್ಕೆ ನಿರ್ಬಂಧ ಇದೆ. ಜಿಲ್ಲೆಯಿಂದಲೂ ಕೇರಳಕ್ಕೆ ಹೋಗುವುದನ್ನು ನಿರ್ಬಂಧಿಸಲಾಗುತ್ತದೆ. ಸಂಶಯಾಸ್ಪದ ಜ್ವರ ಪ್ರಕರಣಗಳು ಕಂಡುಬಂದರೆ ಪತ್ತೆ ಹಚ್ಚುತ್ತೇವೆ. ಜ್ವರ ತಪಾಸಣೆಗೆ ಯಾರೂ ಹಿಂಜರಿಕೆ ಮಾಡಬೇಡಿ. ನಿಫಾ ವೈರಸ್ ಇದೆ ಎಂದು ಭಯಪಡುವ ಅಗತ್ಯವಿಲ್ಲ. ಶೀಘ್ರ ಜ್ವರ ಪತ್ತೆ ಹಚ್ಚುವ ಎಲ್ಲಾ ಕೆಲಸವನ್ನು ಮಾಡುತ್ತಿದ್ದೇವೆ. ಗ್ರಾಮೀಣ ಮಟ್ಟದಲ್ಲಿ ಟಾಸ್ಕ್ ಫೋರ್ಸ್ಗಳು ಸಕ್ರಿಯವಾಗಿ ಕೆಲಸ ಮಾಡುತ್ತಿವೆ. ಕೇವಲ ಎಚ್ಚರವಿದ್ದರೆ ಸಾಲುವುದಿಲ್ಲ ಕಟ್ಟೆಚ್ಚರವಿರಬೇಕು ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ನಿಫಾ ವೈರಸ್ ಸೋಂಕಿತರು ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿಕೆ ನೀಡಿದ್ದಾರೆ. ಸದ್ಯಕ್ಕೆ ನಿಫಾ ವೈರಸ್‌ನ ಯಾವುದೇ ಆತಂಕ ಮೈಸೂರಲ್ಲಿಲ್ಲ. ಅಕ್ಟೋಬರ್‌ವರೆಗೂ ಕೇರಳ ಪ್ರವಾಸ ಮುಂದೂಡುವುದು ಸೂಕ್ತ. ಕೇರಳ ಪ್ರವಾಸಿಗರು ಮೈಸೂರು ಜಿಲ್ಲೆಗೆ ಬರದಿದ್ದರೆ ಸೂಕ್ತ. ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿದ್ದಾರೆ.
ಇದನ್ನೂ ಓದಿ: ನಮ್ಮ ಸಿನಿಮಾದಲ್ಲಿ ಸಿಎಂ ಬೊಮ್ಮಾಯಿ ಹೀರೋ, ಯಡಿಯೂರಪ್ಪ ನಿರ್ದೇಶಕ: ಸಚಿವ ಶ್ರೀರಾಮುಲು ವ್ಯಾಖ್ಯಾನ
ಇದನ್ನೂ ಓದಿ: ಹುಬ್ಬಳ್ಳಿ-ಅಂಕೋಲಾ ರೈಲುಮಾರ್ಗ, ಕಲಬುರಗಿಗೆ ಪ್ರತ್ಯೇಕ ರೈಲ್ವೆ ವಿಭಾಗ; ಕೇಂದ್ರ ಸಚಿವರ ಜತೆ ಚರ್ಚಿಸಿದ ಸಿಎಂ ಬೊಮ್ಮಾಯಿ
Published On - 3:17 pm, Wed, 8 September 21