Cabinet Expansion: ಎಲ್ಲಾ ಶಾಸಕರೂ ಸಚಿವರಾಗಲು ಸಾಧ್ಯವಿಲ್ಲ, ಪ್ರಾದೇಶಿಕವಾಗಿ ಸಂಪುಟ ರಚಿಸುತ್ತೇವೆ: ಸಿಎಂ ಬಸವರಾಜ ಬೊಮ್ಮಾಯಿ

| Updated By: guruganesh bhat

Updated on: Aug 02, 2021 | 11:58 AM

ಬಿಎಸ್‌ವೈ ಪುತ್ರ ವಿಜಯೇಂದ್ರ ಸಂಪುಟ ಸೇರುವ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಂಪುಟದ ಗಾತ್ರ ಆಧರಿಸಿ ಡಿಸಿಎಂಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

Cabinet Expansion: ಎಲ್ಲಾ ಶಾಸಕರೂ ಸಚಿವರಾಗಲು ಸಾಧ್ಯವಿಲ್ಲ, ಪ್ರಾದೇಶಿಕವಾಗಿ ಸಂಪುಟ ರಚಿಸುತ್ತೇವೆ: ಸಿಎಂ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us on

ದೆಹಲಿ: ಇಂದು ಸಂಜೆ ದೆಹಲಿಯಲ್ಲಿ ಪಕ್ಷದ ಸಭೆ ನಡೆಯಲಿದೆ. ಸಭೆಯ ಬಳಿಕ ಸಚಿವ ಸಂಪುಟದ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಅದಾದ ಬಳಿಕ ರಾಜ್ಯ ಸಚಿವ ಸಂಪುಟದ ಬಗ್ಗೆ ಮಾಹಿತಿ ನೀಡುತ್ತೇನೆ. ದೆಹಲಿಗೆ ಬಂದ ಶಾಸಕರ ಜೊತೆಯೂ ಚರ್ಚಿಸುತ್ತೇನೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಲಾಗುವುದು. ಎಲ್ಲ ಶಾಸಕರು ಸಚಿವರಾಗುವುದಕ್ಕೆ ಆಗುವುದಿಲ್ಲ. ಈ ವಿಚಾರ ನಮ್ಮ ಶಾಸಕರಿಗೂ ಗೊತ್ತಿದೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತಿಳಿಸಿದರು.

ಸಚಿವ ಸಂಪುಟ ರಚನೆಯ (Karnataka Cabinet) ವೇಳೆ ಪ್ರಾದೇಶಿಕ ಸಮತೋಲನ ಕಾಪಾಡಬೇಕಿದೆ. ಈ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ. ಪ್ರಾದೇಶಿಕವಾರು ಗಮನದಲ್ಲಿಟ್ಟುಕೊಂಡು ಸಂಪುಟ ರಚನೆ ಮಾಡುತ್ತೇವೆ. ಎಷ್ಟು ಹಂತದಲ್ಲಿ ಸಚಿವ ಸಂಪುಟ ರಚಿಸಬೇಕೆಂಬ ಸೂತ್ರ ರಚಿಸಬಹುದು. ಇಂದು ಸಂಜೆ ಅಥವಾ ನಾಳೆ ಸಚಿವ ಸಂಪುಟ ರಚನೆ ಬಗ್ಗೆ ಅಂತಿಮ ಚಿತ್ರಣ ದೊರೆಯಲಿದೆ ಎಂದು ಅವರು ತಿಳಿಸಿದರು. ಬಿಎಸ್‌ವೈ ಪುತ್ರ ವಿಜಯೇಂದ್ರ ಸಂಪುಟ ಸೇರುವ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಂಪುಟದ ಗಾತ್ರ ಆಧರಿಸಿ ಡಿಸಿಎಂಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

ಇದನ್ನೂ ಓದಿ: 

ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಾವೆಲ್ಲರೂ ಶೇ 100ರಷ್ಟು ಒಪ್ಪಿದ್ದೇವೆ: ಶಾಸಕ ಯತ್ನಾಳ್

ಟಿವಿ9 ಕನ್ನಡ ಫಲಶ್ರುತಿ: ಪುಸ್ತಕ, ಆಟಿಕೆ ಸಾಮಗ್ರಿ ಕಳೆದುಕೊಂಡಿದ್ದ ಬಾಲಕಿಯ ಕಣ್ಣೀರಿಗೆ ಸ್ಪಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ

(CM Basavaraj Bommai says All MLAs cannot become ministers in Delhi)