6ರಿಂದ ದ್ವಿತೀಯ ಪಿಯುಸಿವರೆಗೆ ಸಂಪೂರ್ಣ ಹಾಜರಾತಿಗೆ ಅವಕಾಶ, ವಾರದಲ್ಲಿ 5 ದಿನ ತರಗತಿ: ಸಿಎಂ ಬೊಮ್ಮಾಯಿ

Karnataka School Reopen: ಶೇಕಡಾ 100ರಷ್ಟು ಮಕ್ಕಳ ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Follow us
| Edited By: guruganesh bhat

Updated on:Sep 24, 2021 | 6:28 PM

ಬೆಂಗಳೂರು: ಅಕ್ಟೋಬರ್ 3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇಕಡಾ 100ರಷ್ಟು ಮಕ್ಕಳ ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಸಭೆ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ನೈಟ್ ಕರ್ಫ್ಯೂ ಸಮಯ ಬದಲಾವಣೆ ಮಾಡಲಾಗಿದ್ದು, ಇನ್ನುಮುಂದೆ ರಾತ್ರಿ 10ರಿಂದ ಮುಂಜಾನೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಅಕ್ಟೋಬರ್ 3ರಿಂದ ಪಬ್‌ಗಳಲ್ಲೂ ನಿರ್ಬಂಧ ತೆರವುಗೊಳಿಸಲಾಗುವುದು ಎಂದು ಅವರು ಘೋಷಿಸಿದರು.

ಕೊವಿಡ್ ಸಭೆಯ ನಿರ್ಣಯಗಳು 1.  ರಾಜ್ಯದಲ್ಲಿ ಪ್ರಸ್ತುತ ಕೊವಿಡ್ ಪಾಸಿಟಿವಿಟಿ ದರ ಶೇಕಡಾ 0.66 ರಷ್ಟಿದೆ. 2. ಅಕ್ಟೋಬರ್ 1 ರಿಂದ ಕೊವಿಡ್ ಪಾಸಿಟಿವಿಟಿ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ 100 ಸೀಟು ಭರ್ತಿಗೆ ಅವಕಾಶ ನೀಡಲಾಗುವುದು. ಪಾಸಿಟಿವಿಟಿ ದರ ಶೇಕಡಾ 1ರಷ್ಟು  ಆದರೆ ಶೇ 50 ರಷ್ಟು ಭರ್ತಿಗೆ ಹಾಗೂ ಶೇಕಡಾ 2ಕ್ಕಿಂತ ಹೆಚ್ಚಾದರೆ ಚಿತ್ರಮಂದಿರ ಬಂದ್ ಮಾಡಲಾಗುವುದು. 3.  ಕನಿಷ್ಠ ಒಂದು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಚಿತ್ರಮಂದಿರಗಳಿಗೆ ಪ್ರವೇಶ 4. ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ. 5. ರಾತ್ರಿ ಕರ್ಫ್ಯೂವನ್ನು ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನಿಗದಿಪಡಿಸಲಾಗುವುದು. 6. ದಸರಾ ಬಗ್ಗೆ ಪ್ರತ್ಯೇಕ ಮಾರ್ಗ ಸೂಚಿ ಹೊರಡಿಸಲಾಗುವುದು. 7. ಗಡಿ ಭಾಗದಲ್ಲಿ ಹೆಚ್ಚು, ನಿಗಾ ವಹಿಸಲಾಗುವುದು. 8. ಯಾದಗಿರಿ, ರಾಯಚೂರು, ಕಲಬುರಗಿ, ಹಾಗೂ ಮೈಸೂರು ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲು, ಜನರಲ್ಲಿ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಯಿತು.

ಇದನ್ನೂ ಓದಿ: 

Analysis: ವಿಧಾನಮಂಡಲ ಉದ್ದೇಶಿಸಿ ಲೋಕಸಭೆ ಸ್ಪೀಕರ್​ ಓಂ ಬಿರ್ಲಾ ಭಾಷಣ: ವಿರೋಧ ಪಕ್ಷ ಬಹಿಷ್ಕಾರ ಎಷ್ಟು ಸರಿ? 

ಪುರಸಭೆಯಲ್ಲಿ ಕಸ ಗುಡಿಸುವ ಮಹಿಳೆಯ ಕೈ ಹಿಡಿದ ಸರ್ಕಾರ! ಏನಿದು ಸ್ಟೋರಿ? ಆ ಮಹಿಳೆ ವಿಶೇಷತೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ

(CM Basavaraj Bommai says By October 3rd 100 percent attendance will be permitted in 6th to 12th standard)

Published On - 6:18 pm, Fri, 24 September 21

ತಾಜಾ ಸುದ್ದಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ