ಕೇಂದ್ರದಿಂದ ಕರ್ನಾಟಕಕ್ಕೆ 12 ಸಾವಿರ ಕೋಟಿ ಸಾಲ; ಸದ್ಯದಲ್ಲೇ ಘೋಷಣೆ: ಸಿಎಂ ಬೊಮ್ಮಾಯಿ

| Updated By: guruganesh bhat

Updated on: Oct 08, 2021 | 3:11 PM

ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿಗೆ ಬಂದಾಗ ಈ ಘೋಷಣೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಎಂದು ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.

ಕೇಂದ್ರದಿಂದ ಕರ್ನಾಟಕಕ್ಕೆ 12 ಸಾವಿರ ಕೋಟಿ ಸಾಲ; ಸದ್ಯದಲ್ಲೇ ಘೋಷಣೆ: ಸಿಎಂ ಬೊಮ್ಮಾಯಿ
ನಿರ್ಮಲಾ ಸೀತಾರಾಮನ್ ಮತ್ತು ಬಸವರಾಜ ಬೊಮ್ಮಾಯಿ
Follow us on

ದೆಹಲಿ: ಕರ್ನಾಟಕಕ್ಕೆ ಬರಬೇಕಾದ ಜಿಎಸ್ಟಿ ಪಾಲಿನ ಬಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಳಿ ಮಾತುಕತೆ ನಡೆಸಿದ್ದೇನೆ. ನಬಾರ್ಡ್ ವತಿಯಿಂದ ರಾಜ್ಯಕ್ಕೆ ಹೆಚ್ಚಿನ ನೆರವಿಗೆ ಮನವಿ ಮಾಡಿದ್ದೇನೆ. ಈ ಯೋಜನೆಯಿಂದ ರಾಜ್ಯದ ಸಣ್ಣ ಕೈಗಾರಿಕೆ, ಕೃಷಿಕರಿಗೆ ಅನುಕೂಲವಾಗಲಿದೆ. ನವೆಂಬರ್ ಮೊದಲ ವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೇಂದ್ರ ಸರ್ಕಾರ 12,000 ಕೋಟಿ ಹಣವನ್ನು ಕರ್ನಾಟಕಕ್ಕೆ ಸಾಲದ ರೂಪದಲ್ಲಿ ಒದಗಿಸಲಿದೆ, ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿಗೆ ಬಂದಾಗ ಈ ಘೋಷಣೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಎಂದು ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.

ಸರಕು ಸೇವಾ ಸುಂಕ (Goods Service Tax – GST) ಪಾವತಿಯಲ್ಲಿ ಹಲವರು ಕಳ್ಳಮಾರ್ಗ ಕಂಡುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನಿಖೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸಭೆಯಲ್ಲಿ ಎರಡನೇ ಪೂರಕ ಅಂದಾಜು ವೆಚ್ಚ ವಿಧೇಯಕದ ಮೇಲಿನ ಚರ್ಚೆಗೆ ಉತ್ತರಿಸುತ್ತಾ ಆರ್ಥಿಕ ನಿರ್ವಹಣೆ ಬಗ್ಗೆ ವಿವರಣೆ ನೀಡಿದರು. ಮುದ್ರಾಂಕ ಸುಂಕ, ಮೋಟಾರ್ ವಾಹನ ಸುಂಕ ಹಾಗೂ ಅಬಕಾರಿ ಸುಂಕ ಪಾವತಿಯಲ್ಲಿ ಆಗುತ್ತಿರುವ ಸೋರಿಕೆ ತಪ್ಪಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನುಡಿದರು.

ಐದು ವರ್ಷದಿಂದ ಸಾಧಿಸಿದ್ದ ಆರ್ಥಿಕ ಪ್ರಗತಿಯು ಕೊಡಿಡ್ ಕಾರಣದಿಂದ ಮಂಕಾಗಿದೆ. ಆದಾಯ ಸೋರಿಕೆ ತಡೆಯ ಜೊತೆಗೆ ಆಡಳಿತಾತ್ಮಕ ವೆಚ್ಚಗಳನ್ನೂ ಕಡಿಮೆ ಮಾಡಿಕೊಳ್ಳುತ್ತಿದ್ದೇವೆ. ಜಿಎಸ್​ಟಿ ಪರಿಹಾರವನ್ನು ಇನ್ನೂ 3 ವರ್ಷ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇವೆ. ರಾಜ್ಯದ ಆರ್ಥಿಕ‌ ಪರಿಸ್ಥಿತಿ ಸರಿದಾರಿಗೆ ತರಲು ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಚರ್ಚೆಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸರ್ಕಾರವು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಆರ್ಥಿಕ ವೆಚ್ಚ ಹೆಚ್ಚಾಗುತ್ತದೆ. ವೆಚ್ಚ ನಿಭಾಯಿಸಲಾಗದೇ ಕಷ್ಟ ಆಗಬಹುದು, ಈಗಲೇ ಮುನ್ನೆಚ್ಚರಿಕೆ ತೆಗೆದುಕೊಳ್ಳಿ ಎಂದು ಸಲಹೆ ಮಾಡಿದರು. ಒಟ್ಟು ₹ 10,265 ಕೋಟಿ‌ ಪೂರಕ ಅಂದಾಜು ವೆಚ್ಚದಲ್ಲಿ ತೋರಿಸಿದ್ದೀರಿ ಇದರಲ್ಲಿ ₹ 6.5 ಸಾವಿರ ಕೋಟಿ ಹಣ ಹೊರಗಿನ ವೆಚ್ಚಗಳಿಗೆ ಖರ್ಚು ಮಾಡುತ್ತೇವೆ ಅಂದಿದ್ದೀರಿ. ಈ ಹಣವನ್ನು ಎಲ್ಲಿಂದ ತರ್ತೀರಿ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: 

GST: ಸದ್ಯ ಪೆಟ್ರೋಲ್ ಡೀಸೆಲ್ ಜಿಎಸ್​ಟಿ ವ್ಯಾಪ್ತಿಗೆ ತರುವುದಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Pandora Papers ಗಣ್ಯ ವ್ಯಕ್ತಿಗಳ ಹಣಕಾಸು ವ್ಯವಹಾರದ ರಹಸ್ಯ ದಾಖಲೆ ಸೋರಿಕೆ; ಏನಿದು ಪಂಡೋರಾ ಪೇಪರ್ಸ್?

Published On - 3:05 pm, Fri, 8 October 21