ಸಂಗೊಳ್ಳಿ ರಾಯಣ್ಣಗೆ ಅವಮಾನ ಮಾಡಿದವರ ವಿರುದ್ಧ ದೇಶದ್ರೋಹ, ಗೂಂಡಾ ಕಾಯ್ದೆ ದಾಖಲು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಶಕ್ತಿಸೌಧದ ಒಳಗೆ ಪ್ರಮುಖ ಸ್ಥಾನದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣರ ಪ್ರತಿಮೆ ಸ್ಥಾಪಿಸಲಾಗುವುದು ಎಂದರು

ಸಂಗೊಳ್ಳಿ ರಾಯಣ್ಣಗೆ ಅವಮಾನ ಮಾಡಿದವರ ವಿರುದ್ಧ ದೇಶದ್ರೋಹ, ಗೂಂಡಾ ಕಾಯ್ದೆ ದಾಖಲು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 20, 2021 | 5:58 PM

ಬೆಳಗಾವಿ: ಕರ್ನಾಟಕದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿರುವವರ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಪ್ರಕರಣ ದಾಖಲಿಸುತ್ತೇವೆ. ಭಾಷೆಯ ನೆಪದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಮೊಕದ್ದಮೆ ಹೂಡಲಾಗುವುದು. ಶಿವಾಜಿ ಮಹಾರಾಜರ ಪ್ರತಿಮೆಗೆ ಅವಮಾನ ಮಾಡಿದವರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಘೋಷಿಸಿದರು. ಶಕ್ತಿಸೌಧದ ಒಳಗೆ ಪ್ರಮುಖ ಸ್ಥಾನದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣರ ಪ್ರತಿಮೆ ಸ್ಥಾಪಿಸಲಾಗುವುದು ಎಂದರು.

ಸದನದಲ್ಲಿ ಖಂಡನಾ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಶಿವಾಜಿ ಪ್ರತಿಮೆಗೆ ಅವಮಾನವನ್ನು ಸದನವು ಗಂಭೀರವಾಗಿ ಖಂಡಿಸುತ್ತದೆ. ಇಂಥ ಕೃತ್ಯಗಳನ್ನು ದೇಶದ್ರೋಹ ಎಂದು ಪರಿಗಣಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ವಿವರಗಳನ್ನು ಕೇಂದ್ರ ಗೃಹ ಇಲಾಖೆಗೆ ಕಳಿಸಿಕೊಡಲಾಗುವುದು. ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಇರಬೇಕೆಂದು ಕರ್ನಾಟಕ ಸರ್ಕಾರ ಬಯಸುತ್ತಿದೆ. ಆದರೆ ಗಡಿಯಾಚೆಗೂ ಪುಂಡಾಟಿಕೆಗೆ ಪ್ರೋತ್ಸಾಹ ಸಿಗುತ್ತಿದೆ. ಅದನ್ನು ನಿಲ್ಲಿಸಬೇಕೆಂದು ಸದನ ನಿರ್ಣಯ ಮಾಡುತ್ತದೆ. ಇನ್ನು ಮುಂದೆ ಇಂಥ ಪ್ರಕರಣಗಳನ್ನು ದೇಶದ್ರೋಹ ಎಂದು ಪರಿಗಣಿಸಿ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುತ್ತೇವೆ. ಸದನದ ಎಲ್ಲ ಪಕ್ಷಗಳೂ ಈ ವಿಚಾರದಲ್ಲಿ ಸರ್ಕಾರದ ಜೊತೆಗೆ ಇವೆ ಎಂದು ನಿರ್ಣಯ ಮಂಡಿಸಿದರು.

ಖಂಡನಾ ನಿರ್ಣಯವನ್ನು ಸದನವು ಸರ್ವಾನುಮತದಿಂದ ಅಂಗೀಕರಿಸಿತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸದನದ ಸದಸ್ಯರನ್ನು ಅಭಿನಂದಿಸಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ​ ಜೊತೆಗೆ ನಾನು ಮಾತನಾಡುತ್ತೇನೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ತೊಂದರೆ ಇದ್ದರೆ ಆ ಕ್ಷೇತ್ರವನ್ನು ಕರ್ನಾಟಕಕ್ಕೆ ಸೇರಿಸಲು ನಾವು ಸಿದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಘೋಷಿಸಿದರು. ಹಿರಿಯ ಸದಸ್ಯರಾದ ಎಚ್​.ಕೆ.ಪಾಟೀಲ ಇಂಥ ಹೇಳಿಕೆಯಿಂದ ಯಥಾಸ್ಥಿತಿಯ ನಿಲುವಿಗೆ ತೊಂದರೆಯಾಗಬಹುದು ಎಂದು ಎಚ್ಚರಿಸಿದ ನಂತರ ಈ ಹೇಳಿಕೆಯನ್ನು ಹಿಂಪಡೆಯಲು ಮುಖ್ಯಮಂತ್ರಿ ಒಪ್ಪಿದರು.

ಪ್ರತಿಬಾರಿಯೂ ಬೆಳಗಾವಿಯಲ್ಲಿ ಅಧಿವೇಶನ ನಡೆಯುವಾಗಲೇ ಶಾಂತಿ ಕದಡುವ ಪ್ರಯತ್ನಗಳು ಏಕೆ ನಡೆಯುತ್ತದೆ ಎಂಬ ಬಗ್ಗೆ ತನಿಖೆ ನಡೆಸುತ್ತೇವೆ. ಪುಂಡರ ಟ್ರಾಕ್​ ರೆಕಾಡ್​ ತೆಗೆಸುತ್ತೇನೆ. ಇಂಥವರನ್ನು ಗುರುತಿಸಿ ಗೂಂಡಾ ಕಾಯ್ದೆ ಹಾಕಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ಸಾಮಾನ್ಯ ಜನರ ನಡುವೆ ವಿಶ್ವಾಸಕ್ಕೆ ಯಾವುದೇ ಕೊರತೆಯಿಲ್ಲ. ನಮ್ಮದು ಶಾಂತಿಪ್ರಿಯ ರಾಜ್ಯ. ಶಾಂತಿ ಕದಡಲು ಕೆಲವರು ಪ್ರಯತ್ನಿಸುತ್ತಲೇ ಇದ್ದಾರೆ. ಹೀಗೆ ಮಾಡಿದರೆ ಗಡಿ ವಿಚಾರವನ್ನು ಜೀವಂತವಾಗಿಡಬಹುದು, ಪ್ರಭಾವ ಬೀರಬಹುದು ಎಂದು ಕನಸು ಕಾಣುತ್ತಿದ್ದಾರೆ. ಆದರೆ ಅದು ಭ್ರಮೆ. ಇಂಥ ವಿಚಾರಕ್ಕೆ ಶಾಶ್ವತ ಸೋಲು ಗ್ಯಾರೆಂಟಿ ಎಂದರು.

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಷೇಧದ ಬಗ್ಗೆ ಹಲವರು ಸಲಹೆ ಮಾಡಿದ್ದಾರೆ. ಈ ಬಗ್ಗೆ ಕಾನೂನಾತ್ಮಕವಾಗಿ ಚಿಂತನೆ ನಡೆಸುತ್ತೇವೆ. ನಿಷೇಧಿಸಲು ಆಗದಿದ್ದರೂ ನಿಯಂತ್ರಣಕ್ಕೆ ಕ್ರಮಕೈಗೊಳ್ಳುತ್ತೇವೆ. ಗಡಿಭಾಗವನ್ನು ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಪ್ರಯತ್ನಿಸುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಕಲಾಪ ಬಹಿಷ್ಕರಿಸಿ ಹೊರನಡೆದ ಕಾಂಗ್ರೆಸ್: ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇದನ್ನೂ ಓದಿ: Karnataka Anti Conversion Bill 2021: ಮತಾಂತರ ನಿಷೇಧ ಮಸೂದೆಗೆ ಸಂಪುಟ ಒಪ್ಪಿಗೆ

Published On - 5:41 pm, Mon, 20 December 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್