ಎಸ್​ಸಿ ಎಸ್​ಟಿ ಎಂದು ಸುಳ್ಳು ದಾಖಲೆ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ ಎಚ್ಚರಿಕೆ

ಈ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಕೆಲಸಗಳಿಗೆ ವರ್ಗಾಯಿಸುವಂತಿಲ್ಲ ಎಂದು ಸಹ ಅವರು ಸೂಚಿಸಿದರು.

ಎಸ್​ಸಿ ಎಸ್​ಟಿ ಎಂದು ಸುಳ್ಳು ದಾಖಲೆ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ ಎಚ್ಚರಿಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: guruganesh bhat

Updated on:Aug 30, 2021 | 7:33 PM

ಬೆಂಗಳೂರು: ಎಸ್​ಸಿ, ಎಸ್​ಟಿ​ ಎಂದು ಸುಳ್ಳು ದಾಖಲೆಗಳನ್ನು ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ವಿಧಿಸಿದರು. ಎಸ್​ಸಿ, ಎಸ್​ಟಿ​ ಸಮುದಾಯಕ್ಕೆ ಸಂಬಂಧಿಸಿ ದೌರ್ಜನ್ಯ ಪ್ರಕರಣಗಳ ತನಿಖೆ ವಿಳಂಬವಾಗುತ್ತಿದೆ. ಅವುಗಳನ್ನು ಈಕೂಡಲೇ ಇತ್ಯರ್ಥಪಡಿಸಲು ಗೃಹ, ಕಾನೂನು ಇಲಾಖೆಗೆ ಸೂಚನೆ ನೀಡಿದ್ದೇನೆ. ಪ್ರಧಾನ ಕಾರ್ಯದರ್ಶಿ ಮಟ್ಟದಲ್ಲಿ ಮೂರು ತಿಂಗಳಿಗೊಮ್ಮೆ ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಸಂಬಂಧಿಸಿದ ಪ್ರಕರಣಗಳ ಸಾಕ್ಷಿದಾರರಿಗೆ ರಕ್ಷಣೆ ನೀಡುವ ಕೆಲಸ ಆಗಬೇಕು. 1.8 ಲಕ್ಷ ಪ್ರಕರಣಗಳನ್ನು ಪುನರ್ ಪರಿಶೀಲನೆ ಮಾಡಬೇಕು. ಎಸ್​ಸಿ, ಎಸ್​ಟಿ​ ಸಮುದಾಯಕ್ಕೆ ಸಂಬಂಧಿಸಿ ಮಂಜೂರಾದ ಬೋರ್ವೆಲ್ ಹಂಚಿಕೆ ತ್ವರಿತವಾಗಿ ಆಗಬೇಕು.  ಈ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಕೆಲಸಗಳಿಗೆ ವರ್ಗಾಯಿಸುವಂತಿಲ್ಲ ಎಂದು ಸಹ ಅವರು ಸೂಚಿಸಿದರು.

ಮದುವೆ ಸಮಾರಂಭಗಳಲ್ಲಿ 400 ಜನ ಸೇರಬಹುದು; ಕೊಡಗು, ದ.ಕ. ಹೊರತುಪಡಿಸಿ ಕೊರೊನಾ ನಿರ್ಬಂಧ ಸಡಿಲಿಕೆ ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ವಿಧಿಸಿದ್ದ ಕೊರೊನಾ ನಿರ್ಬಂಧ ಸಡಿಲಿಕೆ ಮಾಡಲಾಗುವುದು. ಕೊಡಗು, ದಕ್ಷಿಣ ಕನ್ನಡ ಹೊರತುಪಡಿಸಿ ಉಳಿದೆಡೆ ಕೊರೊನಾ ನಿರ್ಬಂಧ ಸಡಿಲಿಸಲಾಗುವುದು ಎಂದು ತಿಳಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯುತ್ತಿದ್ದೇವೆ. ಛತ್ರಗಳ ಮಾಲೀಕರು ಸಿಎಂ ಭೇಟಿಯಾಗಿ ಮನವಿ ಮಾಡಿದ್ದರು. ಹೀಗಾಗಿ, ಮದುವೆ, ಮತ್ತಿತರೆ ಸಮಾರಂಭಗಳಲ್ಲಿ 400 ಜನ ಸೇರಬಹುದು ಎಂದು ಹೇಳಲಾಗಿದೆ. ಆರ್. ಅಶೋಕ್ ಮಾಹಿತಿ ನೀಡಿದ್ಧಾರೆ.

ಕಲ್ಯಾಣ ಮಂಟಪಗಳಲ್ಲಿ ಸಭೆ, ಸಮಾರಂಭಗಳಿಗೆ ಅವಕಾಶ ನೀಡಲಾಗುವ ಬಗ್ಗೆ ಆರ್. ಅಶೋಕ್ ಹೇಳಿದ್ದಾರೆ. ಸಣ್ಣಪುಟ್ಟ ಛತ್ರಗಳಲ್ಲಿ ಶೇಕಡಾ 50 ರಷ್ಟು ಜನ ಸೇರಲು ಅವಕಾಶ ನೀಡಲಾಗುವುದು. ದೊಡ್ಡ ಛತ್ರಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ಅವರು ತಿಳಿಸಿದ್ದಾರೆ. ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ವಿಧಿಸಿದ್ದ ನಿರ್ಬಂಧ ಸಡಿಲಿಕೆ ಮಾಡಲಾಗುವುದು. ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಥಾಸ್ಥಿತಿ ಮುಂದುವರಿಯಲಿದೆ. ಉಳಿದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯುತ್ತಿದ್ದೇವೆ ಎಂದು ಅಶೋಕ್ ಹೇಳಿದ್ದಾರೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಮುಂದುವರಿಯಲಿದೆ. ರಾತ್ರಿ 9 ರಿಂದ ಮುಂಜಾನೆ 5 ಗಂಟೆವರೆಗೆ ನೈಟ್​ಕರ್ಫ್ಯೂ ಜಾರಿಯಲ್ಲಿ ಇರಲಿದೆ.

ತಜ್ಞರ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ತಜ್ಞರ ಜತೆ ಸಭೆ ನಡೆಸಲಾಗಿದೆ. ಸಚಿವರಾದ ಕೆ. ಸುಧಾಕರ್, ಬಿ.ಸಿ.ನಾಗೇಶ್, ಆರ್.ಅಶೋಕ್, ಸಿಎಸ್​ಪಿ ರವಿಕುಮಾರ್, ಡಿಜಿ & ಐಜಿಪಿ ಪ್ರವೀಣ್ ಸೂದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸಭೆಯಲ್ಲಿ ಭಾಗಿ ಆಗಿದ್ದಾರೆ.

ದಕ್ಷಿಣ ಕನ್ನಡ: ಸೆಪ್ಟೆಂಬರ್ 1ರಿಂದ ದ್ವಿತೀಯ ಪಿಯು ಆರಂಭ; ಮಾರ್ಗಸೂಚಿ ಪ್ರಕಟ ಸೆಪ್ಟೆಂಬರ್ 1 ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ಈ ಸಂಬಂಧ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅಧಿಕೃತ ಆದೇಶ ಹೊರಡಿಸಿದ್ದಾರೆ. ದ್ವಿತೀಯ ಪಿಯು ಭೌತಿಕ ತರಗತಿ ಆರಂಭಿಸಲು ಮಾರ್ಗಸೂಚಿ ಹೊರಡಿಸಲಾಗಿದೆ. ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ 7 ದಿನ ಕ್ವಾರಂಟೈನ್ ಮಾಡಬೇಕು. ಕಾಲೇಜು ಹಾಸ್ಟೆಲ್‌ಗಳಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆಯಬೇಕು. ಕೊರೊನಾ ಸೋಂಕು ದೃಢವಾದರೆ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡಿಸಬೇಕು ಎಮದು ತಿಳಿಸಲಾಗಿದೆ.

ಬೋಧಕ, ಬೋಧಕೇತರ ಸಿಬ್ಬಂದಿಗೆ ಕೊವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಆಗಿರಲಿದೆ. ವಸತಿ ನಿಲಯ, ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿ ಮಾಡಲಾಗುವುದು. ಸೆಪ್ಟೆಂಬರ್ 15 ರ ಬಳಿಕ ಪ್ರಥಮ ಪಿಯು ತರಗತಿ ಆರಂಭಿಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: 

Krishna Janmashtami 2021: ಕೃಷ್ಣ ಜನ್ಮಾಷ್ಟಮಿ ವಿಶೇಷ: ತುಂಟ ಬಾಲಕ, ಕೊಳಲು ವಾದಕ, ಪ್ರೇಮಿ ಯುವಕ, ರಾಜತಂತ್ರ ನಿಪುಣ, ಧರ್ಮ ರಕ್ಷಕ ಶ್ರೀಕೃಷ್ಣ

(CM Basavaraj Bommai says Strict action against false record makers as SC ST)

Published On - 2:47 pm, Mon, 30 August 21