AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲವಂತದ ಮತಾಂತರವನ್ನು ಸಂಪೂರ್ಣ ನಿಯಂತ್ರಿಸಲು ಕಾನೂನು ತರಲು ಚಿಂತನೆ: ಸಿಎಂ ಬೊಮ್ಮಾಯಿ

ಯಾದಗಿರಿಯಲ್ಲಿ ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಅವರು ಈ ವಿಷಯ ತಿಳಿಸಿದರು.

ಬಲವಂತದ ಮತಾಂತರವನ್ನು ಸಂಪೂರ್ಣ ನಿಯಂತ್ರಿಸಲು ಕಾನೂನು ತರಲು ಚಿಂತನೆ: ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
TV9 Web
| Updated By: guruganesh bhat|

Updated on:Sep 28, 2021 | 8:59 PM

Share

ಬೆಂಗಳೂರು: ಕರ್ನಾಟಕದಲ್ಲಿ ಬಲವಂತವಾಗಿ ಹಾಗೂ ಆಸೆ ಆಮಿಷಗಳನ್ನು ಒಡ್ಡಿ ಮತಾಂತರ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕಾನೂನು ರೂಪಿಸುವ ಕುರಿತು ಗಂಭೀರ ಚಿಂತನೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾದಗಿರಿಯಲ್ಲಿ ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿ ಬಲವಂತದ ಮತಾಂತರ ನಿಯಂತ್ರಿಸಲು ಬಿಗಿಯಾದ ಕಾನೂನು ರೂಪಿಸುವ ಯೋಚನೆ ಇರುವುದನ್ನು ತಿಳಿಸಿದರು.

ಈಮುನ್ನ ಕೆಲವು ದಿನಗಳ ಹಿಂದೆ ವಿಧಾನಸಭಾ ಅಧಿವೇಶನದಲ್ಲಿಯೂ ಬಲವಂತದ  ಮತಾಂತರದ ಕುರಿತು ಪ್ರಸ್ತಾಪ ಬಂದಿತ್ತು.  ವಿಧಾನಸಭೆಯಲ್ಲಿ ಇಂದು ಕೆಲ ಸದಸ್ಯರು ಈಕುರಿತು ಪ್ರಸ್ತಾಪಿಸಿದ್ದರು. ಒತ್ತಾಯಪೂರ್ವಕವಾಗಿ ಮತಾಂತರ ಕಾನೂನುಬಾಹಿರ ಆಗಿದೆ. ಹಾಗಾಗಿ, ಬೇರೆ ಬೇರೆ ರಾಜ್ಯಗಳ ಕಾಯ್ದೆಯನ್ನು ಪರಿಶೀಲನೆ ಮಾಡಿ ರಾಜ್ಯದಲ್ಲೂ ಕಾಯ್ದೆ ಜಾರಿ ಮಾಡುವ ಬಗ್ಗೆ ಚರ್ಚಿಸ್ತೇವೆ ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದರು.

ಇತ್ತೀಚಿಗಷ್ಟೇ ಬೆಂಗಳೂರು ನಗರದಲ್ಲಿ ಮತಾಂತರದ ಆರೋಪ ಕೇಳಿಬಂದಿದ್ದು, ಆರ್​ಎಸ್​ಎಸ್​ (RSS) ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ನಾರಾಯಣಸ್ವಾಮಿ ಎಂಬುವವರ ಮನೆಯಲ್ಲಿ ಸುಮಾರು 70 ರಿಂದ 80 ಮಕ್ಕಳನ್ನು ಸೇರಿಸಿ ಕ್ರೈಸ್ತ ಪ್ರಾರ್ಥನೆ ಮಾಡಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ ಈ ಕುರಿತು ಕಳೆದ ಭಾನುವಾರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಮತಾಂತರಕ್ಕೆ ಪ್ರಯತ್ನಿಸಲಾಗಿದೆ ಎಂದು ಆರೋಪಿಸಲಾಗಿತ್ತು.

ಆರ್​ಎಸ್​ಎಸ್ ಕಾರ್ಯಕರ್ತರಿಂದ ಮಾಹಿತಿ ಪಡೆದ ಬ್ಯಾಡರಹಳ್ಳಿ ಪೊಲೀಸರು, ನಾರಾಯಣಸ್ವಾಮಿ ಮನೆಗೆ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ಮಾಡಿದ್ದಾರೆ. ಕಳೆದ ಹತ್ತು ವರ್ಷದಿಂದ ಆ ಮನೆಯಲ್ಲಿ ಕೇವಲ ಪ್ರಾರ್ಥನೆ ಮಾಡಿದ್ದಾರಷ್ಟೇ. ಆದರೆ ಮತಾಂತರ ಮಾಡಿಲ್ಲವೆಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಕೊವಿಡ್ ನಿಯಮ ಉಲ್ಲಂಘಿಸಿ ಪ್ರಾರ್ಥನೆ ಹಿನ್ನೆಲೆ ನಾರಯಣಸ್ವಾಮಿ ವಿರುದ್ಧ ಎನ್​ಡಿಎಮ್​ಎ (NDMA) ಕೇಸ್ ದಾಖಲಿಸಲಾಗಿತ್ತು.

ಇದನ್ನೂ ಓದಿ: 

World Rabies Day 2021: ರೇಬೀಸ್ ರೋಗದ ಕುರಿತಾಗಿ ನೀವು ತಿಳಿಯಬೇಕಾದ ಒಂದಿಷ್ಟು ಮಾಹಿತಿ ಇಲ್ಲಿದೆ

ಸೂರ್ಯ ಮತ್ತು ಚಂದ್ರಗ್ರಹಣಗಳಂದು ಹುಬ್ಬಳ್ಳಿಯ ಈಶ್ವರ ದೇವಸ್ಥಾನದಲ್ಲಿ ವಿಶೇಷ ಹೋಮ ಹವನಗಳು ನಡೆಯುತ್ತವೆ

(CM Basavaraj Bommai says we have a thought on ban and control Religious Conversion in Karnataka)

Published On - 8:40 pm, Tue, 28 September 21

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?