Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಯೋಜನೆ ಸೇರಿದಂತೆ ಅಂತರರಾಜ್ಯ ಜಲವಿವಾದಗಳನ್ನು ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದಾರೆ ಮುಖ್ಯಮಂತ್ರಿ ಬೊಮ್ಮಾಯಿ

ಅಂತರರಾಜ್ಯ ಜಲ ವಿವಾದಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಲು ಸರ್ವಪಕ್ಷಗಳ ಸಭೆ ಕರೆದಿದ್ದೇನೆ, ನಾವು ಹೇಗೆ ಮುಂದುವರಿಯಬೇಕು, ನಮಗಿರುವ ತೊಡಕುಗಳನ್ನು ಹೇಗೆ ನಿವಾರಿಸಿಕೊಳ್ಳಬೇಕು ಅಂತ ವಿರೋಧ ಪಕ್ಷದ ಸಲಹೆ ಸೂಚನೆಗಳನ್ನು ನಾವು ನಿರೀಕ್ಷಿಸುತ್ತಿದ್ದೇವೆ. ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಗಿದೆ, ಎಂದು ಬೊಮ್ಮಾಯಿ ಹೇಳಿದರು.

ಮೇಕೆದಾಟು ಯೋಜನೆ ಸೇರಿದಂತೆ ಅಂತರರಾಜ್ಯ ಜಲವಿವಾದಗಳನ್ನು ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದಾರೆ ಮುಖ್ಯಮಂತ್ರಿ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Jan 22, 2022 | 5:46 PM

ಕಾಂಗ್ರೆಸ್-ಬಿಜೆಪಿ ನಡುವೆ ಮೇಕೆದಾಟು ಯೋಜನೆ (Mekedatu Project) ಪಾದಯಾತ್ರೆ ಸಂಬಂಧಿಸಿದಂತೆ ರಾಜಕೀಯ ದಾಳ-ಪ್ರತಿದಾಳ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ಕೋವಿಡ್ ಮೂರನೇ ಅಲೆ ಶಾಂತಗೊಂಡ ನಂತರ ಕಾಂಗ್ರೆಸ್ ನಾಯಕರು ನಾಲ್ಕು ದಿನಗಳ ತರುವಾಯ ತಾವು ನಿಲ್ಲಿಸಿದ್ದ ರಾಮನಗರದಿಂದಲೇ (Ramanagara) ಪಾದಯಾತ್ರೆ ಮುಂದುವರಿಸುವುದಾಗಿ ಹೇಳುತ್ತಿದ್ದಾರೆ. ಕಾಂಗ್ರೆಸ್ ಪಾದಯಾತ್ರೆಯನ್ನು (Congress Padayatre) ತಡೆಯಲು ವಿಫಲಗೊಂಡ ಕಾರಣ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸರ್ಕಾರ ಮತ್ತೊಮ್ಮೆ ಅಂಥ ಸ್ಥಿತಿ ಎದುರಾಗುವುದು ಬೇಡ ಎಂಬ ದೃಷ್ಟಿಯಿಂದ ಒಂದು ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಿದೆ. ಈ ಸಭೆಯು ಫೆಬ್ರುವರಿ ಮೊದಲವಾರದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಶನಿವಾರ ಅಂತಾರಾಜ್ಯ ಜಲ ವಿವಾದ ಕುರಿತು ಸಭೆಯೊಂದನ್ನು ನಡೆಸಿದ ಬಳಿಕ ಹೊಗೇನಕಲ್ ಕಾವೇರಿ ಎರಡನೇ ಹಂತದ ಪ್ರಾಜೆಕ್ಟ್ ವಿಚಾರವಾಗಿಯೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಹೇಳಿದರು.

‘ರಾಜ್ಯದ ಹಿತದೃಷ್ಟಿಯಿಂದ ನಾವೆಲ್ಲಾ ಒಟ್ಟಾಗಿ ಹೋರಾಡಬೇಕು, ಹಿಂದೆ ನಾವು ವಿರೋಧ ಪಕ್ಷದಲ್ಲಿದ್ದಾಗ ನಾಡಿನ ಜಲ, ನೆಲ ಮತ್ತು ಇನ್ನುಳಿದ ಹೋರಾಟಗಳಲ್ಲಿ ಸರ್ಕಾರದ ಜೊತೆ ನಿಂತಿದ್ದೇವೆ. ಈಗ ಕಾಂಗ್ರೆಸ್ ಮತ್ತು ಜೆಡಿ(ಎಸ್) ಪಕ್ಷದ ನಾಯಕರ ಸರದಿ. ನಾವು ಅವರ ಸಹಕಾರ ಕೋರುತ್ತೇವೆ. ಅಂತರರಾಜ್ಯ ಜಲ ವಿವಾದಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಲು ಸರ್ವಪಕ್ಷಗಳ ಸಭೆ ಕರೆದಿದ್ದೇನೆ, ನಾವು ಹೇಗೆ ಮುಂದುವರಿಯಬೇಕು, ನಮಗಿರುವ ತೊಡಕುಗಳನ್ನು ಹೇಗೆ ನಿವಾರಿಸಿಕೊಳ್ಳಬೇಕು ಅಂತ ವಿರೋಧ ಪಕ್ಷದ ಸಲಹೆ ಸೂಚನೆಗಳನ್ನು ನಾವು ನಿರೀಕ್ಷಿಸುತ್ತಿದ್ದೇವೆ. ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಗಿದೆ,’ ಎಂದು ಬೊಮ್ಮಾಯಿ ಹೇಳಿದರು.

‘ಅಂತರರಾಜ್ಯ ಜಲವಿವಾದಗಳ ಬಗ್ಗೆ ಎಲ್ಲ ಹಿರಿಯ ನ್ಯಾಯವಾದಿಗಳು, ಸಚಿವರ ಜೊತೆ ಚರ್ಚೆ ನಡೆಸಿದ್ದೇನೆ. ಸಭೆಯಲ್ಲಿ ಕೃಷ್ಣಾ, ಮಹಾದಾಯಿ ಯೋಜನೆಗಳ ಬಗ್ಗೆ ಚರ್ಚೆಯಾಗಿದೆ. ನ್ಯಾಯವಾದಿಗಳು ಹಲವಾರು ಕೇಸ್ಗಳ ಬಗ್ಗೆ ತಿಳಿಸಿದ್ದಾರೆ. ಎಲ್ಲ ಜಲವಿವಾದಗಳಿಗೆ ಸಂಬಂಧಿಸಿದಂತೆ ಜನವರಿ ಕೊನೆವಾರದಲ್ಲಿ ಮತ್ತೊಂದು ಸಭೆ ನಡೆಸುತ್ತೇವೆ,’ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸಭೆಯ ಬಳಿಕ ಜಲಸಂಪನ್ಮೂಲ ಸಚಿವ ಕಾರಜೋಳ ಮಾಧ್ಯಮದವರೊಂದಿಗೆ ಮಾತಾಡಿ ಸಭೆಯಲ್ಲಿ ಮುಖ್ಯಮಂತ್ರಿಗಳು ಕೆಲ ಸಲಹೆ ಸೂಚನೆಗಳನ್ನ ನೀಡಿದರು ಎಂದು ಹೇಳಿದರು. ಸುಪ್ರೀಂಕೋರ್ಟ್ನಲ್ಲಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಕೇಸ್ಗಳನ್ನು ಆದಷ್ಟು ಬೇಗ ಇತ್ಯರ್ಥ ಮಾಡಿಕೊಳ್ಳುವ ಬಗ್ಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದ ಗೋವಿಂದ ಕಾರಜೋಳ, ಸರ್ವೋಚ್ಛ ನ್ಯಾಯಾಲಯದಲ್ಲಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಕಾನೂನು ತಂಡದ ಜತೆ ಸಿಎಂ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.

‘ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎಲ್ಲ ವಿವರಗಳನ್ನು ಮುಖ್ಯಮಂತ್ರಿಗಳು ಪಡೆದಿದ್ದಾರೆ. ಫೆ.14ರಂದು ಮತ್ತೆ ಸುಪ್ರೀಂಕೋರ್ಟಿನಲ್ಲಿ ಪ್ರಕರಣದ ವಿಚಾರಣೆ ಇದ್ದು ಆದಕ್ಕೂ ಮುನ್ನ ಮುಖ್ಯಮಂತ್ರಿ ಬೊಮ್ಮಾಯಿ ಮತ್ತೊಮ್ಮೆ ಸಭೆ ನಡೆಸಲಿದ್ದಾರೆ ಎಂದು ಕಾರಜೋಳ ಹೇಳಿದರು. ಮಹದಾಯಿ ಯೋಜನೆ ಪ್ರಕರಣ ಸಹ ಇನ್ನೂ ಇತ್ಯರ್ಥಗೊಂಡಿಲ್ಲ ಅಂತಿಮ ವಿಚಾರಣೆ ಬಾಕಿ ಇದೆ,’ ಅಂತ ಸಚಿವ ಕಾರಜೋಳ ಹೇಳಿದರು.

ಏತನ್ಮಧ್ಯೆ, ಮಾಜಿ ಸಚಿವರ ರಾಮಲಿಂಗಾ ರೆಡ್ಡಿ ಅವರು ಪಾದಯಾತ್ರೆ ನಿಲ್ಲಿಸಲೆಂದೇ ಸರ್ಕಾರ ವಾರಾಂತ್ಯದ ಕರ್ಫ್ಯೂ ಘೋಷಿಸಿತ್ತು ಎಂದು ಹೇಳದ್ದಾರೆ.

‘ವೀಕೆಂಡ್ ಕರ್ಫ್ಯೂ ಜಾರಿಮಾಡಿದ್ದರ ಹಿಂದೆ ಪಾದಯಾತ್ರೆಯನ್ನು ತಡೆಯುವ ದುರುದ್ದೇಶ ಬಿಟ್ಟರೆ ಬೇರೇನೂ ಇರಲಿಲ್ಲ, ಮೇಕೆದಾಟು ಯೋಜನೆ ಆದಷ್ಟು ಬೇಗ ಜಾರಿಯಾಗಬೇಕು ಎಂದು ನಮ್ಮ ಪಕ್ಷ ಬಯಸುತ್ತದೆ,’ ಎಂದು ರೆಡ್ಡಿಯವರು ಬೆಂಗಳೂರಿನಲ್ಲಿ ಶನಿವಾರ ಹೇಳಿದರು.

ಇದನ್ನೂ ಓದಿ:  ಬಿಬಿಎಂಪಿ ಚುನಾವಣೆಗೆ ಬಿಜೆಪಿಯಿಂದ ಸಿದ್ಧತೆ; ಜನವರಿ 25 ರಿಂದ 3 ದಿನಗಳ ಕಾಲ ಸಿಎಂ ಬಸವರಾಜ ಬೊಮ್ಮಾಯಿ ಸಭೆ

Published On - 5:45 pm, Sat, 22 January 22

ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ