ಇಂದು ಸಿಎಂ ಬೊಮ್ಮಾಯಿ ಹಾವೇರಿ ಜಿಲ್ಲಾ ಪ್ರವಾಸ; ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹಾವೇರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸದಲ್ಲಿದ್ದು, ಇಂದು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಇಂದು ಸಿಎಂ ಬೊಮ್ಮಾಯಿ ಹಾವೇರಿ ಜಿಲ್ಲಾ ಪ್ರವಾಸ; ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ
ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
| Updated By: shivaprasad.hs

Updated on: Mar 26, 2022 | 7:59 AM

ಹಾವೇರಿ: ಇಂದು (ಮಾರ್ಚ್ 26, ಭಾನುವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹಾವೇರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ತಿಮ್ಮಾಪುರದಲ್ಲಿ ಬೆಳಗ್ಗೆ 11 ಗಂಟೆಗೆ ‘ಕಂದಾಯ ದಾಖಲೆ ಮನೆಮನೆಗೆ’ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ. 12 ಗಂಟೆಗೆ ಸವಣೂರು ತಾಲೂಕಿನ ಚಿಲ್ಲೂರುಬಡ್ನಿಗೆ ಸಿಎಂ ಭೇಟಿ ನೀಡಲಿದ್ದು, ಸರ್ಕಾರಿ ಪ್ರೌಢಶಾಲೆ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮನೆಮನೆಗೆ ಕಂದಾಯ ದಾಖಲೆಗಳು ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಸವಣೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಸವಣೂರಿನಿಂದ ಹುಬ್ಬಳ್ಳಿಗೆ ಬೊಮ್ಮಾಯಿ ತೆರಳಲಿದ್ದಾರೆ. ಸಿಎಂ ಜತೆಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಹುಬ್ಬಳ್ಳಿಯಲ್ಲೂ ಹಲವು ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ.

ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ:

ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮೈಸೂರು ಜಿಲ್ಲಾ ಪ್ರವಾಸದಲ್ಲಿದ್ದಾರೆ. 2 ದಿನ ಸಿದ್ದರಾಮನ ಹುಂಡಿ ಜಾತ್ರೆಯಲ್ಲಿ ಅವರು ಭಾಗಿಯಾಗಿದ್ದರು. ಇಂದು ಕೂಡ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಸದ್ಯ ಮೈಸೂರಿನ ಟಿ ಕೆ ಬಡಾವಣೆ ನಿವಾಸದಲ್ಲಿರುವ ಅವರು, ಮಧ್ಯಾಹ್ನ 2 ಗಂಟೆಗೆ ಹುಣಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಹುಣಸೂರಿನ ನೂತನ ಕಾವೇರಿ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಸಂಜೆ 6 ಗಂಟೆಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

ಮಾನಸ ಗಂಗೋತ್ರಿ ವಿಜ್ಞಾನ ಭವನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವಿದ್ದು, ಪ್ರೊ.ಭಗವಾನ್ ಅವರ ಪುಸ್ತಕಗಳನ್ನು ಬಿಡುಗಡೆ ಮಾಡಲಾಗುತ್ತದೆ. ನಂತರ ಮೈಸೂರು ತಾಲ್ಲೂಕು ಇಲವಾಲದಲ್ಲಿ ಬೀದಿ ದೀಪಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದು, ಉದ್ಘಾಟನೆ ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಸಿದ್ದರಾಮಯ್ಯರಿಂದ ಇಂದು ಸ್ಪಷ್ಟನೆ ಸಾಧ್ಯತೆ:

ಸ್ವಾಮೀಜಿಗಳ ವಸ್ತ್ರವನ್ನು ಹಿಜಾಬ್​​ಗೆ ಹೋಲಿಸಿ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಸಂಬಂಧ ಇಂದು ತಮ್ಮ ಹೇಳಿಕೆಯ ಬಗ್ಗೆ ಅವರು ಸ್ಪಷ್ಟನೆ ನೀಡುವ ಸಾಧ್ಯತೆ ಇದೆ. ಈಗಾಗಲೇ ಟ್ವೀಟ್ ಮೂಲಕ ಅವರು ಸ್ಪಷ್ಟನೆ ನೀಡಿದ್ದು, ಇಂದು ಕಾರ್ಯಕ್ರಮದಲ್ಲಿ ಈ ವಿಚಾರ ಪ್ರಸ್ತಾಪವಾಗುವ ಸಾಧ್ಯತೆ ಇದೆ.

ಸಿದ್ದರಾಮನ ಹುಂಡಿಯಲ್ಲಿ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ, ಮುಸ್ಲಿಂರ ದುಪ್ಪಟ್ಟಾಗೆ ಏಕೆ ಅನುಮತಿ ನೀಡುತ್ತಿಲ್ಲ ಎಂದು ಪ್ರಶ್ನಿಸಿದ್ದರು. ಈ ವೇಳೆ ಹಿಂದೂ, ಜೈನ ಮಹಿಳೆಯರು ಸೆರಗು ಹಾಕುವುದು ಹಾಗೂ ಸ್ವಾಮೀಜಿಗಳು ತಲೆ ಮೇಲೆ ವಸ್ತ್ರ ಹಾಕುವುದನ್ನು ಅವರು ಉದಾಹರಣೆ ನೀಡಿದ್ದರು. ಈ ಬಗ್ಗೆ ಸ್ವಾಮೀಜಿಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಬಿಜೆಪಿ ನಾಯಕರಿಂದಲೂ ಸಿದ್ದು ವಿರುದ್ದ ವಾಗ್ದಾಳಿ ನಡೆದಿತ್ತು. ಕಾಂಗ್ರೆಸ್ ನಾಯಕರು ಮೌನಕ್ಕೆ ಶರಣಾಗಿದ್ದರು.

ಇದನ್ನೂ ಓದಿ:

Petrol Diesel Price Hike: ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಏರಿಕೆ; ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ?

ಡಿಜಿಟಲ್ ಚಿನ್ನವನ್ನ ಕಡಿಮೆ ಬೆಲೆಯಲ್ಲಿ ಸುಲಭವಾಗಿ ಕೊಳ್ಳುವುದು ಹೇಗೆ ಗೊತ್ತಾ..! ಇಲ್ಲಿದೆ ಮಾಹಿತಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ