ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಕಾಂಗ್ರೆಸ್ ಗದ್ದಲವೇ ಕೊಲೆಗೆ ಕಾರಣ ಎಂದು ಆರೋಪಿಸಿದ ಸಿಎಂ ಬೊಮ್ಮಾಯಿ
ಶಿವಮೊಗ್ಗದಲ್ಲಿ ನಡೆದ ಭಜರಂಗ ದಳದ ಕಾರ್ಯಕರ್ತ ಹರ್ಷ ಎನ್ನುವ ಯುವಕನ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ ಈಗಾಗಲೇ 3 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವರು ಮಾಹಿತಿ ನೀಡಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಭಜರಂಗ ದಳದ ಕಾರ್ಯಕರ್ತ ಹರ್ಷ ಎನ್ನುವ ಯುವಕನ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ ಈಗಾಗಲೇ 3 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವರು ಮಾಹಿತಿ ನೀಡಿದ್ದಾರೆ. ಹತ್ಯೆ ಬಗ್ಗೆ ಹೇಳಿಕೆ ನೀಡಿದ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ದೂರಿದ್ದಾರೆ. ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಕಾಂಗ್ರೆಸ್ ನಾಯಕರ ಹೇಳಿಕೆಗಳೇ ಕಾರಣ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ದೇಶದ್ರೋಹಿ ಹೇಳಿಕೆ ನೀಡಿದವರನ್ನು ಎನ್‌ಕೌಂಟರ್ ಮಾಡಿ ನನಗೆ ಅಧಿಕಾರ ಮುಖ್ಯವಲ್ಲ, ಹಿಂದುತ್ವ ಮುಖ್ಯವೆಂದ ರೇಣುಕಾಚಾರ್ಯ ಅವರು ಹಿಂದೂ ಕಾರ್ಯಕರ್ತನ ಹತ್ಯೆಯಾದರೆ ನಾನು ಸುಮ್ಮನಿರಲ್ಲ. ಸ್ಥಳೀಯ ಕೆಲ ಪೊಲೀಸರ ಲೋಪದಿಂದ ಈ ಹತ್ಯೆಯಾಗಿದೆ ಎಂದು ಟಿವಿ9ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿಯೂ ಹರ್ಷ ಹತ್ಯೆ ಪ್ರಕರಣ ವಿಚಾರ ಪ್ರಸ್ತಾಪವಾಗಿದ್ದು ವಿರೋಧ ಪಕ್ಷದ ಗದ್ದಲವೇ ಹರ್ಷ ಕೊಲೆಗೆ ಕಾರಣ. ಶಿವಮೊಗ್ಗದಲ್ಲಿ ಷಡ್ಯಂತ್ರದಿಂದ ಹರ್ಷ ಕೊಲೆಯಾಗಿದೆ ಎಂದು ಸಿಎಂ ಬೊಮ್ಮಾಯಿ ಆರೋಪಿಸಿದ್ದಾರೆ. ಕಾಂಗ್ರೆಸ್ ಧರಣಿಯಿಂದ ರಾಜ್ಯದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಮಕ್ಕಳಲ್ಲಿ ಗೊಂದಲ ಸೃಷ್ಟಿ ಆಗುವುದು ಬೇಡ. ಸರ್ಕಾರದ ಮಧ್ಯಂತರ ಆದೇಶವನ್ನು ಪಾಲಿಸಬೇಕು. ಶಾಂತಿ ಕಾಪಾಡುವುದು ಕಾಂಗ್ರೆಸ್ನ ಗಮನದಲ್ಲಿಲ್ಲ. ಪ್ರಕ್ಷುಬ್ದ ವಾತಾವರಣ ಮಾಡುವುದು ಕಾಂಗ್ರೆಸ್ ಉದ್ದೇಶ ಎಂದು ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ ಆರೋಪ ಮಾಡಿದ್ದಾರೆ.
ಈ ನಡುವೆ ಕಾಂಗ್ರಸ್ ನಾಯಕರು ಸರ್ಕಾರ ವಿರುದ್ಧ ಹರಿಹಾಯ್ದಿದಿದ್ದಾರೆ. ವಿಪಕ್ಷ ನಾಯಕ ಸಿದ್ಧರಾಮಯ್ಯ ಸುದ್ದಿಗೋಷ್ಟಿ ನಡೆಸಿ, ಭಾನುವಾರವೇ ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ ಆಗಿದೆ. ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದರ ಹೊಣೆಯನ್ನು ಗೃಹ ಸಚಿವರೇ ಹೊರಬೇಕು. ನಿಷೇಧಾಜ್ಞೆ ಇದ್ದರೂ ಮೆರವಣಿಗೆಗೆ ಹೇಗೆ ಅವಕಾಶ ಕೊಟ್ಟರು. ಸಚಿವರ ಎದುರೇ ಕಲ್ಲುತೂರಾಟ, ಬೆಂಕಿ ಹಚ್ಚಿಸುವುದು ಆಗುತ್ತೆ. ಸರ್ಕಾರದಿಂದಲೇ 144 ಸೆಕ್ಷನ್ ಉಲ್ಲಂಘನೆಯಾಗಿದೆ. ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿಗೆ ಬಿಜೆಪಿ, RSSನವರು ಬಜರಂಗದಳದವರು ಇವರೆಲ್ಲ ರಸ್ತೆಗಿಳಿದು ಹೋರಾಟ ಮಾಡಿದ್ದಾರೆ. ಇದು ನಾಗರಿಕ ಸಮಾಜದ ಲಕ್ಷಣವಾ? ಇದನ್ನು ಗೂಂಡಾಗಳ ಸರ್ಕಾರ ಎಂದು ಕರೆಯಬೇಕು. ಸಚಿವರಿಂದಲೇ ಉಲ್ಲಂಘನೆ ಆಗಿದೆ ಅಂದ್ರೆ ಸರ್ಕಾರವೆಲ್ಲಿದೆ. ಇದೆಲ್ಲದಕ್ಕೂ ಸಚಿವ ಕೆ.ಎಸ್.ಈಶ್ವರಪ್ಪ ಕಾರಣ. ಸಂಸದ ಬಿ.ವೈ.ರಾಘವೇಂದ್ರ ಇದರ ಹೊಣೆ ಹೊರಬೇಕು ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾರೆ.
ಇನ್ನು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್ಗೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಮಾತನಾಡಿ, ಬಿಜೆಪಿಯವರಿಗೆ ಆಡಳಿತ ನಡೆಸುವುದು ಬರುತ್ತಿಲ್ಲ ಹೀಗಾಗಿ ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಗುಪ್ತಚರ ಇಲಾಖೆ ಏನಾಗಿದೆ ಕೊಲೆಯಾದ ಹರ್ಷನ ಜೀವಕ್ಕೆ ಅಪಾಯ ಇತ್ತು ಎಂದು ಅವರ ತಂದೆಯೆ ಹೇಳಿದ್ದಾರೆ. ಇದು ಗೊತ್ತಿದ್ದರು ಪೊಲೀಸ್ ಇಲಾಖೆ ಏನು ಮಾಡುತ್ತಿತ್ತು. ಹಿಂದೂ,ಮುಸ್ಲಿಂ, ಕ್ರೈಸ್ತ ಯಾವ ಧರ್ಮದವರೆ ಆಗಲಿ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಧ್ರುವನಾರಾಯಣ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:
ಬಜರಂಗದಳ ಕಾರ್ಯಕರ್ತ ಹರ್ಷನ ಕಗ್ಗೊಲೆ ಹೇಗಾಯ್ತು? ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದ ಕೊಲೆಯ ಕಂಪ್ಲೀಟ್ ಡಿಟೇಲ್ಸ್