ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್​ಗೆ ಉಚಿತ ಚಿಕಿತ್ಸೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ

BS Yediyurappa Press meet: ಬ್ಲ್ಯಾಕ್​ ಫಂಗಸ್​ಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು (ಮೇ 21) ನಡೆದ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು.

ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್​ಗೆ ಉಚಿತ ಚಿಕಿತ್ಸೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on:Aug 21, 2021 | 10:05 AM

ಬೆಂಗಳೂರು: ಬ್ಲ್ಯಾಕ್​ ಫಂಗಸ್​ಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು (ಮೇ 21) ನಡೆದ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು. ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್​ ಫಂಗಸ್​ಗೆ ಉಚಿತ ಚಿಕಿತ್ಸೆ ನೀಡುತ್ತೇವೆ. ಜನರು ಕಟ್ಟುನಿಟ್ಟಾಗಿ ಲಾಕ್​ಡೌನ್​ ಪಾಲನೆ ಮಾಡಬೇಕು. ಬೆಳಗ್ಗೆ 6ರಿಂದ 10ರವರೆಗೆ ಅಗತ್ಯವಸ್ತು ಖರೀದಿಗೆ ಅವಕಾಶ ನೀಡಿದ್ದೇವೆ. ಅನಗತ್ಯವಾಗಿ ಓಡಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಬ್ಲ್ಯಾಕ್ ಫಂಗಸ್ ಸೋಂಕಿಗೆ ರಾಜ್ಯದಲ್ಲಿ ಔಷಧ ಕೊರತೆ ಇದೆ. ಆದರೆ, ಮುಂದಿನ 2-ರಿಂದ3 ದಿನಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿನ ಔಷಧ ಕರ್ನಾಟಕಕ್ಕೆ ಬರಲಿದೆ. ಔಷಧ ಬರುವ ತನಕ ಇಎನ್‌ಟಿ ಸರ್ಜನ್‌ಗಳಿಂದ ಚಿಕಿತ್ಸೆ ನೀಡಲಾಗುತ್ತದೆ. ಬ್ಲ್ಯಾಕ್ ಫಂಗಸ್ ಒಬ್ಬರಿಂದ ಒಬ್ಬರಿಗೆ ಹರಡುವ ಸೋಂಕು ಅಲ್ಲ. ಹೀಗಾಗಿ, ಈ ಸೋಂಕಿನ ಬಗ್ಗೆ ಯಾವುದೇ ಆತಂಕ, ಅಪಪ್ರಚಾರ ಬೇಡ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇಂದು ತಿಳಿಸಿದ್ದರು.

ಇನ್ನು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜನರು ಕಟ್ಟುನಿಟ್ಟಾಗಿ ಲಾಕ್​ಡೌನ್​ ಪಾಲನೆ ಮಾಡಬೇಕು. ಬೆಳಗ್ಗೆ 6ರಿಂದ 10ರವರೆಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು. ಆದರೆ ಅನಗತ್ಯವಾಗಿ ಓಡಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಸದ್ಯ ಬೆಳಗ್ಗೆ 10 ಗಂಟೆಯ ನಂತರವೂ ಜನರು ಅನಗತ್ಯವಾಗಿ ಓಡಾಡುತ್ತಿರುವುದು ಕಂಡುಬರುತ್ತಿದೆ. ಹೀಗಾದಲ್ಲಿ ಇನ್ನಷ್ಟು ಬಿಗಿಯಾದ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿರುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು. ಜತೆಗೆ ಕರ್ನಾಟಕ ಲಾಕ್​ಡೌನ್ ವಿಸ್ತರಣೆಯ ನಿರ್ಧಾರವನ್ನು ಹಿರಿಯ ಸಚಿವರ ಜಿತೆ ಜೊತೆ ಚರ್ಚೆ ಮಾಡಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಬೆಳಗ್ಗೆ 10 ಕಳೆದರೂ ಓಡಾಡುತ್ತಿರುವುದು ಕಂಡುಬರುತ್ತಿದೆ. ಬೆಳಗ್ಗೆ 9.45ರೊಳಗೆ ಜನರು ತಮ್ಮ ಮನೆ ಸೇರಿಕೊಳ್ಳಬೇಕು. ನಿಯಮ ಉಲ್ಲಂಘಿಸಿದರೆ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಜತೆಗೆ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವ ಬಗ್ಗೆ ನಿರ್ಧರಿಸಿಲ್ಲ ಎಂದು ಸಹ ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಈ 3 ವಿಧಾನಗಳನ್ನು ಅನುಸರಿಸಿದರೆ ಬ್ಲ್ಯಾಕ್​ ಫಂಗಸ್ ಕಾಯಿಲೆಯನ್ನು ತಡೆಗಟ್ಟಬಹುದು: ಡಾ.ರಣ್​ದೀಪ್ ಗುಲೇರಿಯಾ

ಹೋಮ್ ಕ್ವಾರೆಂಟೈನ್ ಆಗಿರುವ ಕೊರೊನಾ ಸೋಂಕಿತರು ಗಮನಿಸಿ: ಬೇಗ ಗುಣವಾಗಲು ಆಯುಷ್-64 ಔಷಧ ಸಹಕಾರಿ; ವಿವರ ಇಲ್ಲಿದೆ (CM BS Yediyurappa announces free treatment for Black Fungus in Karnataka District Hospitals)

Published On - 7:15 pm, Fri, 21 May 21

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್