AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟಕ್ಕೆ ಡಜನ್ ಸೂತ್ರ ಪ್ರಕಟಿಸಿದ CM ಯಡಿಯೂರಪ್ಪ

[lazy-load-videos-and-sticky-control id=”4k2tAKeXbiQ”] ಬೆಂಗಳೂರು:ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ,ವೈದ್ಯರ ಕೊರತೆ ನಿವಾರಿಸಲು, ಹುದ್ದೆ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಪ್ರತಿ ವಾರ್ಡಿನಲ್ಲೂ ಸ್ವಯಂ ಸೇವಕರನ್ನು ಗುರುತಿಸಲಾಗಿದೆ ಹಾಗೂ ಅಂಬ್ಯುಲೆನ್ಸ್ ನಿಗದಿ ಪಡಿಸಲಾಗಿದೆ. ಎಂಬಿತ್ಯಾದಿ ಮಾಹಿತಿಯನ್ನು ಇಂದು ನಡೆದ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಅಧಿಕಾರಿಗಳೆದುರು ಬಹಿರಂಗ ಪಡಿಸಿದ್ದಲ್ಲದೆ ಕೆಲವೊಂದು ಸೂಚನೆಗಳನ್ನು ನೀಡಿದ್ದಾರೆ. ಸಿಎಂ ಅಧಿಕಾರಿಗಳಿಗೆ ನೀಡಿದ ಸೂಚನೆಗಳು ಏನೆಂದ್ರೆ 1) ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ, ಕೋವಿಡ್ ಹಾಗೂ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ […]

ಕೊರೊನಾ ಕಾಟಕ್ಕೆ ಡಜನ್ ಸೂತ್ರ ಪ್ರಕಟಿಸಿದ CM ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on:Jul 17, 2020 | 6:54 PM

Share

[lazy-load-videos-and-sticky-control id=”4k2tAKeXbiQ”]

ಬೆಂಗಳೂರು:ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ,ವೈದ್ಯರ ಕೊರತೆ ನಿವಾರಿಸಲು, ಹುದ್ದೆ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಪ್ರತಿ ವಾರ್ಡಿನಲ್ಲೂ ಸ್ವಯಂ ಸೇವಕರನ್ನು ಗುರುತಿಸಲಾಗಿದೆ ಹಾಗೂ ಅಂಬ್ಯುಲೆನ್ಸ್ ನಿಗದಿ ಪಡಿಸಲಾಗಿದೆ. ಎಂಬಿತ್ಯಾದಿ ಮಾಹಿತಿಯನ್ನು ಇಂದು ನಡೆದ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಅಧಿಕಾರಿಗಳೆದುರು ಬಹಿರಂಗ ಪಡಿಸಿದ್ದಲ್ಲದೆ ಕೆಲವೊಂದು ಸೂಚನೆಗಳನ್ನು ನೀಡಿದ್ದಾರೆ.

ಸಿಎಂ ಅಧಿಕಾರಿಗಳಿಗೆ ನೀಡಿದ ಸೂಚನೆಗಳು ಏನೆಂದ್ರೆ 1) ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ, ಕೋವಿಡ್ ಹಾಗೂ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ದೊರಕುವುದನ್ನು ಖಾತರಿ ಪಡಿಸಿಕೊಳ್ಳಿ 2) ರೋಗ ಲಕ್ಷಣ ಇಲ್ಲದ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸದೆ,ಕೋವಿಡ್ ಕೇರ್ ಸೆಂಟರ್ ಗಳಿಗೆ ಅಥವಾ ಹೋಮ್ ಕ್ವಾರಂಟೈನ್ ಮಾಡಿ 3) ತೀವ್ರತರ ರೋಗಲಕ್ಷಣದಿಂದ ಬಳಲುತ್ತಿರುವ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಒದಗಿಸಿ 4) ಆಸ್ಪತ್ರೆಯಲ್ಲಿ ಮೃತರಾದವರಿಗೆ ರ್ಯಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಿ ಶವವನ್ನು ಕೂಡಲೇ ಹಸ್ತಾಂತರಿಸಲು ಅಥವಾ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲು ಕ್ರಮ ವಹಿಸಬೇಕು 5) ಮನೆಯಲ್ಲಿ ಮೃತರಾದವರಿಗೂ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಿ ಮೃತದೇಹವನ್ನು ತುರ್ತಾಗಿ ಅಂತ್ಯಕ್ರಿಯೆ ನಡೆಸಲು‌ ಕ್ರಮ ವಹಿಸಬೇಕು 6) ಖಾಸಗಿ ಆಸ್ಪತ್ರೆಗಳು ಬೆಡ್ ನೀಡದೆ ಇದ್ದರೆ ಕಠಿಣ ಕ್ರಮ ಕೈಗೊಳ್ಳಬೇಕು 7) ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ದಾಖಲಾತಿ ಮತ್ತು ಹಾಸಿಗೆಗಳ ಲಭ್ಯತೆ ಕುರಿತು ಮಾಹಿತಿ ಒದಗಿಸಲು ಸ್ವಯಂ ಸೇವಕರು ಹಾಗು ನೋಡಲ್ ಅಧಿಕಾರಗಳ ನೇಮಕ ಮಾಡಲಾಗುವುದು 8) ಪ್ರತಿ ವಾರ್ಡುಗಳಲ್ಲಿ ಕಲ್ಯಾಣ ಮಂಟಪಗಳನ್ನು ಹಾಗು ವಸತಿ ಗೃಹಳನ್ನು ಗುರುತಿಸಲಾಗಿದ್ದು, ಪ್ರತ್ಯೇಕವಾಗಿ ವಾಸಿಸಲು ಕೊಠಡಿಗಳು ಇಲ್ಲದವರಿಗೆ ಕ್ವಾರಂಟೈನ್ ಮಾಡಲು ಈ ಕಲ್ಯಾಣ ಮಂಟಪಗಳನ್ನು ಬಳಸಿ 9) ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಿ 10) ಜನ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವ ಸಾಧ್ಯತೆಗಳಿರುವ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಿ 11) ಪರೀಕ್ಷೆಯ ಫಲಿತಾಂಶ ದೊರೆತ ಎರಡು ಗಂಟೆಗಳೊಳಗೆ ಹಾಸಿಗೆ ಹಂಚಿಕೆ ಮಾಡಿ,ಅಂಬ್ಯುಲೆನ್ಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಕ್ರಮ ವಹಿಸಬೇಕು. ಈ ವ್ಯವಸ್ಥೆಯನ್ನು ವೀಕೇಂದ್ರೀಕರಿಸಿ, ವಲಯವಾರು, ಮೇಲ್ವಿಚಾರಣೆ ನಡೆಸಬೇಕು 12) ರೋಗ ಲಕ್ಷಣ ಇರುವ, 65 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೊದಲ ಆದ್ಯತೆಯ ಮೇರೆಗೆ ಹಾಸಿಗೆ ಹಂಚಿಕೆ ಮಾಡಬೇಕು. ರೋಗಲಕ್ಷಣ ಇಲ್ಲದವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಬೇಕು.

Published On - 2:39 pm, Fri, 17 July 20