ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಸಲಹೆ ನೀಡಿದ್ದಾರೆ; ಅಮಿತ್ ಶಾ ಭೇಟಿ ಬಳಿಕ ಬಿ ಎಸ್ ಯಡಿಯೂರಪ್ಪ ಹೇಳಿಕೆ
ದೆಹಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ಶಾ ನಿವಾಸಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿದ್ದರು. ಪುತ್ರ ವಿಜಯೇಂದ್ರ ಜತೆ ಅಮಿತ್ ಶಾರನ್ನು ಸಿಎಂ ಯಡಿಯೂರಪ್ಪ ಭೇಟಿಯಾಗಿದ್ದರು.
ದೆಹಲಿ: ಅಮಿತ್ ಶಾ ಬಹಳ ಸಂತಸದಿಂದ ನಮ್ಮ ಜೊತೆ ಮಾತಾಡಿದರು. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಸಲಹೆ ನೀಡಿದರು ಎಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಭೇಟಿ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಭೇಟಿಯಾದಾಗಲೂ ಇದೇ ಮಾತನ್ನು ಹೇಳಿದ್ದರು. ಇಂದು ಜೆ.ಪಿ. ನಡ್ಡಾ, ರಾಜನಾಥ್ ಸಿಂಗ್ ಸಹ ಖುಷಿಯಿಂದ ಮಾತನಾಡಿದರು. ನಮ್ಮ ವರಿಷ್ಠರ ಸಲಹೆಯಂತೆ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಅಮಿತ್ ಶಾ ಭೇಟಿ ಬಳಿಕ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಬಹಳ ಹೊತ್ತು ಅಮಿತ್ ಶಾ ಜೊತೆಗೆ ಚರ್ಚೆ ಮಾಡಿದೆ. ಅವರು ಕೂಡ ಸಂತೋಷದಿಂದ ಮಾತನಾಡಿದ್ದಾರೆ. ಹೆಚ್ಚು ಜವಾಬ್ದಾರಿ ತೆಗೆದುಕೊಂಡು ಪಕ್ಷ ಸಂಘಟನೆ ಮಾಡಬೇಕು. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಹಗಲು ರಾತ್ರಿ ಪಕ್ಷದ ಬೆಳವಣಿಗೆ ಕೆಲಸ ಮಾಡುತ್ತೇನೆ . ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರ್ತೆನೆ. ಕರ್ನಾಟಕದಲ್ಲಿ ಒಳ್ಳೆ ಭವಿಷ್ಯ ಇದೆ ನೀವೂ ಕೆಲಸ ಮಾಡಿ. ಸಂಪೂರ್ಣವಾಗಿ ಜೊತೆಗಿದ್ದೇವೆ ಎಂದು ಅಮಿತ್ ಶಾ ಹೇಳಿರುವ ಬಗ್ಗೆ ಯಡಿಯೂರಪ್ಪ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪಗೆ ಅಮಿತ್ ಶಾ ಬುಲಾವ್ ಹಿನ್ನೆಲೆ, ಅಮಿತ್ ಶಾ ನಿವಾಸಕ್ಕೆ ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದರು. ದೆಹಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ಶಾ ನಿವಾಸಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿದ್ದರು. ಪುತ್ರ ವಿಜಯೇಂದ್ರ ಜತೆ ಅಮಿತ್ ಶಾರನ್ನು ಸಿಎಂ ಯಡಿಯೂರಪ್ಪ ಭೇಟಿಯಾಗಿದ್ದರು.
ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಕ್ಕೆ ವಾಪಸಾಗಿದ್ದಾರೆ. ಮಧ್ಯಾಹ್ನ 2.40ಕ್ಕೆ ವಿಶೇಷ ವಿಮಾನ ಟೇಕಾಫ್ ಆಗಿದೆ. ದೆಹಲಿ ಏರ್ಪೋರ್ಟ್ನಿಂದ ಹೊರಟ ಸಿಎಂ ಬಿ.ಎಸ್. ಯಡಿಯೂರಪ್ಪ, ಬೆಂಗಳೂರಿನ ಹೆಚ್.ಎ.ಎಲ್. ಏರ್ಪೋರ್ಟ್ಗೆ ಸಂಜೆ 5.15ಕ್ಕೆ ಬಂದಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ನರೇಂದ್ರ ಮೋದಿ, ಬಿ ಎಸ್ ಯಡಿಯೂರಪ್ಪ ಭೇಟಿಯನ್ನು ಹಾಲು ಜೇನಿನ ಸಂಗಮ ಎಂದು ವರ್ಣಿಸಿದ ಬಿ ವೈ ವಿಜಯೇಂದ್ರ
Amit Shah: ಅಮಿತ್ ಶಾರನ್ನೇ ಕೇಂದ್ರ ಸಹಕಾರ ಮಂತ್ರಿ ಮಾಡಿದ್ದೇಕೆ? ಸಹಕಾರ ಸಚಿವರಾಗಿ ಅಮಿತ್ ಶಾ ಟಾರ್ಗೆಟ್ ಏನು?
Published On - 3:31 pm, Sat, 17 July 21