AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸಚಿವರಿಗೆ ಖಾತೆ ಹಂಚಿಕೆ: ಕೊಟ್ಟ ಮಾತು ಉಳಿಸಿಕೊಂಡ ಬಿಎಸ್​ವೈ

ಬೆಂಗಳೂರು: ಬಹುದಿನಗಳಿಂದ ಎಲ್ಲರೂ ಎದುರು ನೋಡ್ತಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ನೂತನ 10 ಸಚಿವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಜಲಸಂಪನ್ಮೂಲ ಖಾತೆ ಬೇಕು ಎಂದು ಪಟ್ಟು ಹಿಡಿದಿದ್ದ ರಮೇಶ್ ಜಾರಕಿಹೊಳಿ, ಕೊನೆಗೂ ಆ ಖಾತೆಯನ್ನು ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಸಚಿವ ರಮೇಶ್ ಜಾರಕಿಹೊಳಿ​ಗೆ ಬಿಎಸ್​ವೈ ಭರ್ಜರಿ ಗಿಫ್ಟ್ ನೀಡಿದ್ದಾರೆ. ಉಳಿದ ಸಚಿವರೆಲ್ಲರಿಗೂ ತಮ್ಮ ನಿರ್ಧಾರದಂತೆ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ನೂತನ ಸಚಿವರಿಗೆ ಹಂಚಿಕೆಯಾಗಿರುವ ಖಾತೆ ಹೀಗಿದೆ: ಎಸ್.ಟಿ.ಸೋಮಶೇಖರ್‌- ಸಹಕಾರ […]

ನೂತನ ಸಚಿವರಿಗೆ ಖಾತೆ ಹಂಚಿಕೆ: ಕೊಟ್ಟ ಮಾತು ಉಳಿಸಿಕೊಂಡ ಬಿಎಸ್​ವೈ
ಸಾಧು ಶ್ರೀನಾಥ್​
|

Updated on:Feb 10, 2020 | 1:16 PM

Share

ಬೆಂಗಳೂರು: ಬಹುದಿನಗಳಿಂದ ಎಲ್ಲರೂ ಎದುರು ನೋಡ್ತಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ನೂತನ 10 ಸಚಿವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ.

ಜಲಸಂಪನ್ಮೂಲ ಖಾತೆ ಬೇಕು ಎಂದು ಪಟ್ಟು ಹಿಡಿದಿದ್ದ ರಮೇಶ್ ಜಾರಕಿಹೊಳಿ, ಕೊನೆಗೂ ಆ ಖಾತೆಯನ್ನು ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಸಚಿವ ರಮೇಶ್ ಜಾರಕಿಹೊಳಿ​ಗೆ ಬಿಎಸ್​ವೈ ಭರ್ಜರಿ ಗಿಫ್ಟ್ ನೀಡಿದ್ದಾರೆ. ಉಳಿದ ಸಚಿವರೆಲ್ಲರಿಗೂ ತಮ್ಮ ನಿರ್ಧಾರದಂತೆ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ.

ನೂತನ ಸಚಿವರಿಗೆ ಹಂಚಿಕೆಯಾಗಿರುವ ಖಾತೆ ಹೀಗಿದೆ: ಎಸ್.ಟಿ.ಸೋಮಶೇಖರ್‌- ಸಹಕಾರ ಖಾತೆ ಶಿವರಾಮ್ ಹೆಬ್ಬಾರ್- ಕಾರ್ಮಿಕ ಖಾತೆ ಬಿ.ಸಿ.ಪಾಟೀಲ್- ಅರಣ್ಯ ಖಾತೆ ರಮೇಶ್ ಜಾರಕಿಹೊಳಿ- ಜಲಸಂಪನ್ಮೂಲ ಖಾತೆ ಶ್ರೀಮಂತ ಪಾಟೀಲ್- ಜವಳಿ ಖಾತೆ ಡಾ.ಕೆ.ಸುಧಾಕರ್- ವೈದ್ಯಕೀಯ ಶಿಕ್ಷಣ ಇಲಾಖೆ ನಾರಾಯಣಗೌಡ- ಪೌರಾಡಳಿತ, ತೋಟಗಾರಿಕೆ ಇಲಾಖೆ ಭೈರತಿ ಬಸವರಾಜ್- ನಗರಾಭಿವೃದ್ಧಿ ಖಾತೆ ಗೋಪಾಲಯ್ಯ- ಸಣ್ಣ ಕೈಗಾರಿಕೆ ಖಾತೆ ಆನಂದ್‌ ಸಿಂಗ್‌- ಆಹಾರ ಮತ್ತು ನಾಗರಿಕ ಪೂರೈಕೆ

Published On - 1:07 pm, Mon, 10 February 20