ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ತೀವ್ರತೆ ಮಿತಿ ಮೀರುತ್ತಿದೆ. ದಿನದಿಂದ ದಿನಕ್ಕೆ ಕೊರೊನಾಗೆ ಬಲಿಯಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಹೀಗಾಗಿ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ನಿಯಂತ್ರಣಕ್ಕೆ ಅನುಕೂಲವಾಗುವಂತೆ ರಾಜ್ಯದ ಸಚಿವ ಸಂಪುಟದ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೊವಿಡ್ 19 ಪರಿಹಾರ ನಿಧಿಗೆ ದೇಣಿಗೆಗಾಗಿ ಪಾವತಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.
ಏಪ್ರಿಲ್ 29ರಂದು ಬಿ.ಎಸ್.ಯಡಿಯೂರಪ್ಪ ರಾಜ್ಯದ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಸಚಿವರ ಒಂದು ವರ್ಷದ ವೇತನವನ್ನು ಕೊವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಸಲಹೆ ನೀಡಿದ್ದರು. ಅದರಂತೆಯೇ ಈಗ ಈ ಬಗ್ಗೆ ಸೂಚಿಸಿ ಆದೇಶ ಹೊರಡಿಸಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಅನುಕೂಲವಾಗುವಂತೆ ರಾಜ್ಯ ಸಚಿವ ಸಂಪುಟದ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೊವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಸಿಎಂ ಆದೇಶಿಸಿದ್ದಾರೆ. ಮೇ 1ರಿಂದಲೇ ಈ ಆದೇಶ ಅನ್ವಯವಾಗಿದೆ.
ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ 30 ಕೋಟಿ ರೂ. ದೇಣಿಗೆ ನೀಡಲಿದೆ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ
Published On - 2:01 pm, Thu, 13 May 21