AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಜಿಲ್ಲೆಗಳಾಗಿ ಬಳ್ಳಾರಿ ಜಿಲ್ಲೆ ವಿಭಜನೆಗೆ ಆದೇಶ: ಯಡಿಯೂರಪ್ಪ ಸಂಪುಟ ಸಭೆಯ ಹೈಲೆಟ್ಸ್ ಏನೇನು?

ಗಣಿನಾಡು ಬಳ್ಳಾರಿ ಜಿಲ್ಲೆಯನ್ನು 2 ಜಿಲ್ಲೆಗಳಾಗಿ ವಿಭಜಿಸಿ ಸಂಪುಟ ಸಭೆಯಲ್ಲಿ ಆದೇಶ ಹೊರಡಿಸಲಾಗಿದೆ. ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕುಗಳನ್ನು ಸೇರಿಸಲಾಗಿದೆ ಎಂದು ಸಂಪುಟ ಸಭೆ ಬಳಿಕ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

2 ಜಿಲ್ಲೆಗಳಾಗಿ ಬಳ್ಳಾರಿ ಜಿಲ್ಲೆ ವಿಭಜನೆಗೆ ಆದೇಶ: ಯಡಿಯೂರಪ್ಪ ಸಂಪುಟ ಸಭೆಯ ಹೈಲೆಟ್ಸ್ ಏನೇನು?
ಸಚಿವ ಜೆ.ಸಿ.ಮಾಧುಸ್ವಾಮಿ
ಆಯೇಷಾ ಬಾನು
|

Updated on:Nov 27, 2020 | 12:54 PM

Share

ಬಳ್ಳಾರಿ: ಕರ್ನಾಟಕ ಗೃಹ ಮಂಡಳಿ ಮನವಿಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಗಣಿನಾಡು ಬಳ್ಳಾರಿ ಜಿಲ್ಲೆಯನ್ನು 2 ಜಿಲ್ಲೆಗಳಾಗಿ ವಿಭಜಿಸಿ ಸಂಪುಟ ಸಭೆಯಲ್ಲಿ ಆದೇಶ ಹೊರಡಿಸಲಾಗಿದೆ. ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕುಗಳನ್ನು ಸೇರಿಸಲಾಗಿದೆ ಎಂದು ಸಂಪುಟ ಸಭೆ ಬಳಿಕ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ರು.

ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆ, ಕೊಟ್ಟೂರು, ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ ಸೇರಿದಂತೆ ಒಟ್ಟು 6 ತಾಲೂಕುಗಳನ್ನು ಸೇರಿಸಲಾಗಿದೆ. ಹೊಸಪೇಟೆಯನ್ನು ನೂತನ ಜಿಲ್ಲಾ ಕೇಂದ್ರವಾಗಿ ಘೋಷಿಸಲಾಗಿದೆ.

98 ವಸತಿ ಯೋಜನೆಗಳಿಗೆ ಸಂಪುಟ ಸಭೆಯಲ್ಲಿ ಅನುಮತಿ ಸಿಕ್ಕಿದೆ. ವಸತಿ ಯೋಜನೆಗೆ ₹2,275 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಹಾಗೂ ಎಸ್‌ಸಿ, ಎಸ್‌ಟಿ ಸಂಪುಟ ಉಪಸಮಿತಿಗೆ ಅಧ್ಯಕ್ಷರಾಗಿ ಸಚಿವ ಶ್ರೀರಾಮುಲು ನೇಮಕಗೊಂಡಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಗೋವಿಂದ ಕಾರಜೋಳ ಈಗ ಸದಸ್ಯರಾಗಿದ್ದಾರೆ.

ಕರ್ನಾಟಕ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ತಿದ್ದುಪಡಿ: ಕರ್ನಾಟಕ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ 1:15 ಅನುಪಾತ ನಿಗದಿ ಪಡಿಸಿ ನಿಯಮ ತಿದ್ದುಪಡಿ ಮಾಡಲಾಗಿದೆ. ಮಲ್ಲಸಂದ್ರ, ಮನವರ್ತೆ ಕಾವಲ್ ಗ್ರಾಮ ಪಂಚಾಯಿತಿ, ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಬಿಬಿಎಂಪಿಗೆ ಸೇರ್ಪಡೆ ಮಾಡಲಾಗಿದೆ.

ವೀರಶೈವ ಲಿಂಗಾಯತ ಸಮುದಾಯ ಒಬಿಸಿ ಪಟ್ಟಿಗೆ: ವೀರಶೈವ ಲಿಂಗಾಯತ ಸಮುದಾಯ ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಕೆಲವು ಅಂಶಗಳ ಅಧ್ಯಯನ ನಡೆಸಬೇಕಿದೆ. ಹೀಗಾಗಿ ವರದಿ ಪಡೆದು ಮತ್ತೆ ಸಂಪುಟದಲ್ಲಿ ಚರ್ಚಿಸಬೇಕು. ಈ ಕಾರಣಕ್ಕಾಗಿ ಮುಂದೂಡಿದ್ದೇವೆ. ನಮ್ಮ ಮೇಲೆ ಕೇಂದ್ರದ ಒತ್ತಡ, ಹೈಕಮಾಂಡ್ ಒತ್ತಡವಿಲ್ಲ ಎಂದು ವಿಧಾನಸೌಧದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ-ವಿಜಯನಗರ ತಾಲೂಕುಗಳ ಬಗ್ಗೆ ಡಿ.ಎಮ್. ನಂಜುಂಡಪ್ಪ ಸಮಿತಿ ವರದಿ ಏನು ಹೇಳುತ್ತದೆ? ವಿಜಯನಗರ ಜಿಲ್ಲೆ ಸ್ಥಾಪನೆ: ಸಚಿವ ಆನಂದ್ ಸಿಂಗ್ ಕೊಟ್ಟ ಗುಡ್​ ನ್ಯೂಸ್​ ಏನು?

Published On - 12:42 pm, Fri, 27 November 20

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ