ಸಹಾಯಧನ, ಪಾಲನೆ, ಶಿಕ್ಷಣಕ್ಕೆ ವ್ಯವಸ್ಥೆ; ಕೊರೊನಾದಿಂದ ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಬಾಲಸೇವಾ ಯೋಜನೆ ಘೋಷಣೆ

21 ವರ್ಷ ಪೂರೈಸಿದ ಹೆಣ್ಣುಮಕ್ಕಳಿಗೆ 1 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು. ಮದುವೆ ವೆಚ್ಚ, ಉನ್ನತ ಶಿಕ್ಷಣ, ಸ್ವಉದ್ಯೋಗಕ್ಕೆ ಈ ಮೊತ್ತವನ್ನು ಬಳಸುವಂತೆ ಕ್ರಮ ಕೈಗೊಳ್ಳಲಾಗುವುದು.

ಸಹಾಯಧನ, ಪಾಲನೆ, ಶಿಕ್ಷಣಕ್ಕೆ ವ್ಯವಸ್ಥೆ; ಕೊರೊನಾದಿಂದ ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಬಾಲಸೇವಾ ಯೋಜನೆ ಘೋಷಣೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
TV9 Web
| Updated By: ganapathi bhat

Updated on:Aug 14, 2021 | 1:07 PM

ಬೆಂಗಳೂರು: ಕೊರೊನಾ ಮೊದಲನೇ ಅಲೆ ಇಷ್ಟೊಂದು ಹಾನಿ ಉಂಟುಮಾಡಿರಲಿಲ್ಲ. ಆದರೆ, ಕೊವಿಡ್-19 ಸೋಂಕಿನ ಎರಡನೇ ಅಲೆಯಿಂದಾಗಿ ದೇಶ, ರಾಜ್ಯದಲ್ಲಿ ಬಹಳಷ್ಟು ಸಾವು, ನೋವು ಸಂಭವಿಸಿದೆ. ಅದಕ್ಕೆ ಪರಿಹಾರ ಕ್ರಮವಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಘೋಷಿಸಿದೆ. ಇಂದು (ಮೇ 29) ಕೂಡ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ಎಸ್. ಯಡಿಯೂರಪ್ಪ ಕೊರೊನಾ ಸೋಂಕಿನಿಂದ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಮುಖ್ಯಮಂತ್ರಿ ಬಾಲಸೇವಾ ಯೋಜನೆಯ್ನು ಘೋಷಣೆ ಮಾಡಿದರು.

ಮುಖ್ಯಮಂತ್ರಿ ಬಾಲಸೇವಾ ಯೋಜನೆಯ ಅನುಸಾರ, ಅಪ್ಪ-ಅಮ್ಮ ಕಳೆದುಕೊಂಡ ಮಕ್ಕಳಿಗೆ ಮಾಸಿಕ 3,500 ಸಹಾಯಧನ ನೀಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅನಾಥ ಮಕ್ಕಳ ಪೋಷಣೆಗೆ ಕೇಂದ್ರದಿಂದ ಸಲಹೆ ಬಂದಿದೆ. ಅದರಂತೆ, ಅನಾಥ ಮಕ್ಕಳಿಗಾಗಿ ರಾಜ್ಯ ಸರ್ಕಾರ ಯೋಜನೆ ಘೋಷಿಸಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲು ವ್ಯವಸ್ಥೆ ಮಾಡಲಾಗುವುದು. 10ನೇ ತರಗತಿ ಪೂರೈಸಿದ ಮಕ್ಕಳಿಗೆ ಲ್ಯಾಪ್​ಟಾಪ್​, ಟ್ಯಾಬ್ ವಿತರಿಸಲಾಗುವುದು. ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ನೋಡಿಕೊಳ್ಳಲು ವಿಸ್ತೃತ ಕುಟುಂಬದ ಸದಸ್ಯರು ಇಲ್ಲದಿದ್ದರೆ, ಸಂಬಂಧಿಕರು ಇಲ್ಲದೇ ಹೋದರೆ ಅಂತಹ ಮಕ್ಕಳಿಗೆ ನೋಂದಾಯಿತ ಪಾಲನಾ ಕೇಂದ್ರದಲ್ಲಿ ಆರೈಕೆ ಮಾಡಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.

21 ವರ್ಷ ಪೂರೈಸಿದ ಹೆಣ್ಣುಮಕ್ಕಳಿಗೆ 1 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು. ಮದುವೆ ವೆಚ್ಚ, ಉನ್ನತ ಶಿಕ್ಷಣ, ಸ್ವಉದ್ಯೋಗಕ್ಕೆ ಈ ಮೊತ್ತವನ್ನು ಬಳಸುವಂತೆ ಕ್ರಮ ಕೈಗೊಳ್ಳಲಾಗುವುದು. ಯೋಜನೆ ಬಗ್ಗೆ ವಿಸ್ತೃತವಾದ ವಿವರವನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುವುದು. ಯೋಜನೆಯ ಒಟ್ಟು ಮೊತ್ತ ಇತ್ಯಾದಿ ವಿಚಾರಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಬಿ.ಎಸ್. ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೊರೊನಾ ಲಾಕ್​ಡೌನ್ ಮುಂದುವರಿಕೆ, ನಿಯಮಾವಳಿಗಳಲ್ಲಿ ಬದಲಾವಣೆ, ಸೋಂಕು ತಡೆಗೆ ಹೊಸ ಕ್ರಮ ಅಥವಾ ಮತ್ತೊಂದು ಆರ್ಥಿಕ ಪ್ಯಾಕೇಜ್ ಬಗ್ಗೆ ಮಾಹಿತಿ ಇತ್ಯಾದಿ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿತ್ತು. ಆದರೆ ಆ ಬಗ್ಗೆ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ: ಕೊವಿಡ್ ಕಡಿಮೆ ಆಗುತ್ತಿದೆ ಎಂದು ಕೈಕಟ್ಟಿ ಕೂರುವಂತಿಲ್ಲ; ಸಿಎಂ ಯಡಿಯೂರಪ್ಪ ಖಡಕ್ ಸೂಚನೆ

ಆಶಾ ಕಾರ್ಯಕರ್ತೆಯರ ಕುಟುಂಬಗಳಿಗೆ ಪರಿಹಾರ ನೀಡಿ: ಮುಖ್ಯಮಂತ್ರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

Published On - 7:56 pm, Sat, 29 May 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ