ತುಂಬು ಗರ್ಭಿಣಿಯಾದ್ರು ಕೆಲಸಕ್ಕೆ ಹಾಜರಾದ ನರ್ಸ್​ಗೆ ಸಿಎಂ ಹೇಳಿದ್ದೇನು?

ಶಿವಮೊಗ್ಗ: ತುಂಬು ಗರ್ಭಿಣಿಯಾಗಿದ್ದರು ರಜೆಯೇ ತಗೊಳ್ಳದೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸ್​ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. 9 ತಿಂಗಳು ತುಂಬು ಗರ್ಭಿಣಿಯಾಗಿರುವ ಶ್ರೀ ರೂಪ ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿದ್ದಾರೆ. ಇವರು ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ಸಿನಲ್ಲೇ ಪ್ರಯಾಣಿಸಿ ಸೇವೆ ಮಾಡುತ್ತಿದ್ದಾರೆ. 9 ತಿಂಗಳು ಗರ್ಭಿಣಿಯಾಗಿದ್ರೂ ಪ್ರತಿದಿನ ಸುಮಾರು 120 ಕಿ.ಮೀ ಪ್ರಯಾಣ ಮಾಡುವ ಇವರು ಕೊರೊನಾ […]

ತುಂಬು ಗರ್ಭಿಣಿಯಾದ್ರು ಕೆಲಸಕ್ಕೆ ಹಾಜರಾದ ನರ್ಸ್​ಗೆ ಸಿಎಂ ಹೇಳಿದ್ದೇನು?
ಸಾಧು ಶ್ರೀನಾಥ್​

Updated on: May 10, 2020 | 12:21 PM

ಶಿವಮೊಗ್ಗ: ತುಂಬು ಗರ್ಭಿಣಿಯಾಗಿದ್ದರು ರಜೆಯೇ ತಗೊಳ್ಳದೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸ್​ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. 9 ತಿಂಗಳು ತುಂಬು ಗರ್ಭಿಣಿಯಾಗಿರುವ ಶ್ರೀ ರೂಪ ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿದ್ದಾರೆ.

ಇವರು ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ಸಿನಲ್ಲೇ ಪ್ರಯಾಣಿಸಿ ಸೇವೆ ಮಾಡುತ್ತಿದ್ದಾರೆ. 9 ತಿಂಗಳು ಗರ್ಭಿಣಿಯಾಗಿದ್ರೂ ಪ್ರತಿದಿನ ಸುಮಾರು 120 ಕಿ.ಮೀ ಪ್ರಯಾಣ ಮಾಡುವ ಇವರು ಕೊರೊನಾ ವಾರಿಯರ್ಸ್ ಏನು ಅನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಮಾನ್ಯ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು.‌ ಇದರ ಜೊತೆಗೆ ಕೂಡಲೇ ರಜೆ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.

Published On - 11:45 am, Sun, 10 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us