AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Warriors: ಇನ್ಮುಂದೆ ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿ.ಪಂ, ತಾ.ಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರೂ ಕೊವಿಡ್ ವಾರಿಯರ್ಸ್​

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದಷ್ಟೇ ಪತ್ರ ಬರೆದು ಮಾಡಿದ್ದ ಮನವಿಗೆ ತಕ್ಷಣವೇ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನೂ ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಮೊದಲ ಡೋಸ್​ ಕೊವಿಡ್ ಲಸಿಕೆ ನೀಡುವಂತೆ ಸೂಚಿಸಿದ್ದಾರೆ.

Covid Warriors: ಇನ್ಮುಂದೆ ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿ.ಪಂ, ತಾ.ಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರೂ ಕೊವಿಡ್ ವಾರಿಯರ್ಸ್​
ಬಿ.ಎಸ್​.ಯಡಿಯೂರಪ್ಪ
guruganesh bhat
|

Updated on:May 29, 2021 | 9:48 PM

Share

ಬೆಂಗಳೂರು: ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿ.ಪಂ, ತಾ.ಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರನ್ನು ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಮೊದಲ ಡೋಸ್​ ಕೊವಿಡ್ ಲಸಿಕೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್​ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು. ಈ ಮೂಲಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿಯನ್ನು ಸಿಎಂ ಯಡಿಯೂರಪ್ಪ ಪುರಸ್ಕರಿಸಿದಂತಾಗಿದೆ.

ಕರ್ನಾಟಕದಲ್ಲಿ ಕೊವಿಡ್ ಪಾಸಿಟಿವಿಟಿ ದರ ಶೇಕಡಾ 10ಕ್ಕಿಂತ ಕಡಿಮೆ ಮಾಡಬೇಕು. ಮರಣ ಪ್ರಮಾಣ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು. ಕೆಲವು ಭಾಗಗಳಲ್ಲಿ ಪ್ರಕರಣ ಕಡಿಮೆ ಆಗುತ್ತಿದೆ ಎಂದು ಯಾವುದೇ ಕಾರಣಕ್ಕೂ ಕೈಕಟ್ಟಿ ಕೂರುವಂತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಕೊವಿಡ್ ಪ್ರಕರಣಗಳ ಪ್ರಮಾಣ ಹೆಚ್ಚುತ್ತಿದೆ. ಈ ಕುರಿತು ಹೆಚ್ಚಿನ ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.

ಐದು ಜಿಲ್ಲಾಡಳಿತಗಳ ಜತೆ ನಡೆಸಿದ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಈ ನಿರ್ದೇಶನ ನೀಡಿದ್ದು, ಮರಣ ಪ್ರಮಾಣ ಶೇ.1.7ರಷ್ಟಿದ್ದು, ಇದನ್ನು ಗಮನಾರ್ಹವಾಗಿ ಕಡಿಮೆ ಮಾಡಬೇಕು. ರಾಜ್ಯದಲ್ಲಿ ಒಟ್ಟು ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಬೆಂಗಳೂರು ನಗರ, ಮೈಸೂರು, ತುಮಕೂರು, ಹಾಸನ, ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು ಶೇಕಡಾ 60 ಪ್ರಕರಣಗಳಿವೆ. ಈ ಭಾಗಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದು ಸೂಚಿಸಿದರು.

ಗ್ರಾಮೀಣ ಭಾಗದಲ್ಲಿ ಹೋಂ ಐಸೋಲೇಷನ್ ಬದಲು ಸೋಂಕಿತರನ್ನು ಕೇರ್ ಸೆಂಟರ್​ಗಳಿಗೆ ದಾಖಲಿಸಬೇಕು. ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯಗಳಾದ ಔಷಧ, ಆಮ್ಲಜನಕ, ಉಪಕರಣ ಸಮರ್ಪಕವಾಗಿ ಹಂಚಿಕೆ ಮಾಡಬೇಕು. ಎಲ್ಲಿಯೂ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಬೇಕು. ಆಶಾ ಕಾರ್ಯಕರ್ತೆಯರ ಬಾಕಿ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಲು ಸೂಚಿಸಿದ ಅವರು, ಎರಡು ಮೂರು ದಿನಗಳಲ್ಲಿಯೇ ಆಶಾ ಕಾರ್ಯಕರ್ತೆಯರ ವೇತನ ದೊರೆಯಲಿದೆ ಎಂದು ತಿಳಿಸಿದರು.

ಇದನ್ನೂ ಓದಿ:  ಕೊವಿಡ್​ನಿಂದ ಅನಾಥರಾದ ಮಕ್ಕಳಿಗೆ ಪಿಎಂ ಕೇರ್ ಫಂಡ್​ನಿಂದ ಪ್ರತಿ ತಿಂಗಳು ಸ್ಟೈಫಂಡ್, ಉಚಿತ ಶಿಕ್ಷಣ ನೀಡಲು ನಿರ್ಧರಿಸಿದ ಕೇಂದ್ರ ಸರ್ಕಾರ

ಕೊವಿಡ್ ಲಸಿಕೆಗೆ ಕಮಿಷನ್ ಆರೋಪ: ಕಮಲ್ ಪಂತ್​ಗೆ ದೂರು; ಕಾಂಗ್ರೆಸ್ ವಿರುದ್ಧ ಹರಿಹಾಯ್ದ ರವಿಸುಬ್ರಹ್ಮಣ್ಯ

(CM BS Yediyurappa directs all local body members including zp to gp are considered as Covid warriors and can take first dose of vaccine)

Published On - 7:14 pm, Sat, 29 May 21

Follow Us
guruganesh bhat
guruganesh bhat
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ