ಕೊರೊನಾ ಮೂರನೇ ಅಲೆ ಎದುರಿಸಲು ಟಾಸ್ಕ್ ಫೋರ್ಸ್ ಸಮಿತಿ ರಚಿಸುವಂತೆ ಬಿ.ಎಸ್. ಯಡಿಯೂರಪ್ಪ ಆದೇಶ
ಖಾಸಗಿ ಆಸ್ಪತ್ರೆ ಗಳ ಬೆಡ್ ಗಳ ಬಗ್ಗೆ ನಿಗಾ ಇಡಬೇಕು. ಆಕ್ಸಿಜನ್, ರೆಮಿಡಿಸಿವಿರ್ ಹಾಗು ಬೆಡ್ ಸೇರಿದಂತೆ ಇತರೆ ವಿಷಯಗಳಲ್ಲಿ ಅಕ್ರಮ ಉಂಟಾದರೆ ಕೂಡಲೇ ಕ್ರಮ ಕೈಗೊಳ್ಳಲು ಆದೇಶಿಸಿದರು.
ಬೆಂಗಳೂರು: ರಾಜ್ಯದಲ್ಲಿ ಕೊವಿಡ್ ನಿರ್ವಹಣೆ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಮೇ 10) ತಮ್ಮ ಅಧಿಕೃತ ನಿವಾಸದಲ್ಲಿ ಕೊವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜನ ಅನಗತ್ಯವಾಗಿ ಹೊರಗೆ ಓಡಾಡುವುದನ್ನ ತಪ್ಪಿಸಬೇಕು. ಅಗತ್ಯವಿರುವ ರೋಗಿಗಳಿಗೆ ಬೆಡ್ ಹಂಚಿಕೆಗೆ ಕ್ರಮವಹಿಸಿ ಎಂದು ಸೂಚನೆ ನೀಡಿದರು. ಕೊರೊನಾ 3ನೇ ಅಲೆಗೆ ಈಗಿನಿಂದಲೇ ಸಿದ್ದರಾಗಬೇಕಿದ್ದು ಅದಕ್ಕೊಂದು ಟಾಸ್ಕ್ ಫೋರ್ಸ್ ಕಮಿಟಿ ಮಾಡಲು ತಿಳಿಸಿದರು.
ಕೊವಿಡ್ -19 ನಿಯಂತ್ರಿಸಲು ಸಚಿವರುಗಳಿಗೆ ನೀಡಿರುವ ಜವಾಬ್ದಾರಿಯ ಅನುಸಾರ ಎಲ್ಲಿಯೂ ಯಾವುದೇ ರೀತಿಯ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಪ್ರಮುಖವಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದ್ದು ಜನರು ಅನಗತ್ಯವಾಗಿ ಓಡಾಡುವುದನ್ನು ತಪ್ಪಿಸಬೇಕು. ತುರ್ತು ಅಗತ್ಯವಿರುವ ರೋಗಿಗಳಿಗೆ ಬೆಡ್ ಹಂಚಿಕೆಗೆ ಕ್ರಮವಹಿಸುವುದು ಮತ್ತು ರೆಮಿಡಿಸಿವಿರ್ ಡ್ರಗ್ ಪೂರೈಕೆಯನ್ನು ಅಗತ್ಯತೆಗನುಸಾರವಾಗಿ ಸರಬರಾಜು ಮಾಡಲು ಕ್ರಮ ತೆಗೆದುಕೊಳ್ಳಲು ಸೂಚಿಸಿದರು.
ಖಾಸಗಿ ಆಸ್ಪತ್ರೆ ಗಳ ಬೆಡ್ ಗಳ ಬಗ್ಗೆ ನಿಗಾ ಇಡಬೇಕು. ಆಕ್ಸಿಜನ್, ರೆಮಿಡಿಸಿವಿರ್ ಹಾಗು ಬೆಡ್ ಸೇರಿದಂತೆ ಇತರೆ ವಿಷಯಗಳಲ್ಲಿ ಅಕ್ರಮ ಉಂಟಾದರೆ ಕೂಡಲೇ ಕ್ರಮ ಕೈಗೊಳ್ಳಲು ಆದೇಶಿಸಿದರು. ವಾರ್ ರೂಮ್ ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಬೇಕು ಎಂದು ಹೇಳಿದರು.
ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳಿಗೆ ಮತ್ತು ಆಸ್ಪತ್ರೆಗಳಿಗೆ ಆಕ್ಸಿಜನ್ ಜನರೇಟರ್ ಪ್ಲಾಂಟ್ ಹಾಕಲು ಈಗಿನಿಂದಾನೆ ಕೆಲಸ ಶುರು ಮಾಡಲು ಸೂಚನೆ ನೀಡಿದ ಅವರು, ಶಾಸಕರು ಹಾಗು ಸಚಿವರು ತಮ್ಮ ತಮ್ಮ ಕ್ಷೇತ್ರದಲ್ಲೇ ವಾಸ್ತವ್ಯ ಮಾಡಿ ಜಿಲ್ಲೆಗಳ ಕರೋನ ಪರಿಸ್ಥಿತಿ ಹತೋಟಿಗೆ ತರಲು ಶ್ರಮಿಸಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: Covid-19 Karnataka Update: ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 39,305 ಜನರಿಗೆ ಕೊರೊನಾ ಸೋಂಕು ದೃಢ, 596 ಜನರು ನಿಧನ
ಕೊರೊನಾ ಸಂದರ್ಭದಲ್ಲಿ ಸೆಂಟ್ರಲ್ ವಿಸ್ತಾ ಯೋಜನೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕಾರಿಣಿ ನಿರ್ಣಯ
Published On - 8:00 pm, Mon, 10 May 21