ಕೊವಿಡ್ ಕಡಿಮೆ ಆಗುತ್ತಿದೆ ಎಂದು ಕೈಕಟ್ಟಿ ಕೂರುವಂತಿಲ್ಲ; ಸಿಎಂ ಯಡಿಯೂರಪ್ಪ ಖಡಕ್ ಸೂಚನೆ

ರಾಜ್ಯದಲ್ಲಿ ಒಟ್ಟು ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಬೆಂಗಳೂರು ನಗರ, ಮೈಸೂರು, ತುಮಕೂರು, ಹಾಸನ, ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು ಶೇಕಡಾ 60 ಪ್ರಕರಣಗಳಿವೆ. ಈ ಭಾಗಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದು ಸೂಚಿಸಿದರು.

ಕೊವಿಡ್ ಕಡಿಮೆ ಆಗುತ್ತಿದೆ ಎಂದು ಕೈಕಟ್ಟಿ ಕೂರುವಂತಿಲ್ಲ; ಸಿಎಂ ಯಡಿಯೂರಪ್ಪ ಖಡಕ್ ಸೂಚನೆ
2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ; ಯಾರನ್ನೂ ಸಿಎಂ ಮಾಡಬೇಕೆಂದು ಸಲಹೆ, ಶಿಫಾರಸು ಮಾಡಲ್ಲ -ಯಡಿಯೂರಪ್ಪ

Updated on: May 29, 2021 | 4:10 PM

ಬೆಂಗಳೂರು: ಕರ್ನಾಟಕದಲ್ಲಿ ಕೊವಿಡ್ ಪಾಸಿಟಿವಿಟಿ ದರ ಶೇಕಡಾ 10ಕ್ಕಿಂತ ಕಡಿಮೆ ಮಾಡಬೇಕು. ಮರಣ ಪ್ರಮಾಣ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು. ಕೆಲವು ಭಾಗಗಳಲ್ಲಿ ಪ್ರಕರಣ ಕಡಿಮೆ ಆಗುತ್ತಿದೆ ಎಂದು ಯಾವುದೇ ಕಾರಣಕ್ಕೂ ಕೈಕಟ್ಟಿ ಕೂರುವಂತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಕೊವಿಡ್ ಪ್ರಕರಣಗಳ ಪ್ರಮಾಣ ಹೆಚ್ಚುತ್ತಿದೆ. ಈ ಕುರಿತು ಹೆಚ್ಚಿನ ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.

ಐದು ಜಿಲ್ಲಾಡಳಿತಗಳ ಜತೆ ನಡೆಸಿದ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಈ ನಿರ್ದೇಶನ ನೀಡಿದ್ದು, ಮರಣ ಪ್ರಮಾಣ ಶೇ.1.7ರಷ್ಟಿದ್ದು, ಇದನ್ನು ಗಮನಾರ್ಹವಾಗಿ ಕಡಿಮೆ ಮಾಡಬೇಕು. ರಾಜ್ಯದಲ್ಲಿ ಒಟ್ಟು ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಬೆಂಗಳೂರು ನಗರ, ಮೈಸೂರು, ತುಮಕೂರು, ಹಾಸನ, ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು ಶೇಕಡಾ 60 ಪ್ರಕರಣಗಳಿವೆ. ಈ ಭಾಗಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದು ಸೂಚಿಸಿದರು.

ಗ್ರಾಮೀಣ ಭಾಗದಲ್ಲಿ ಹೋಂ ಐಸೋಲೇಷನ್ ಬದಲು ಸೋಂಕಿತರನ್ನು ಕೇರ್ ಸೆಂಟರ್​ಗಳಿಗೆ ದಾಖಲಿಸಬೇಕು. ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯಗಳಾದ ಔಷಧ, ಆಮ್ಲಜನಕ, ಉಪಕರಣ ಸಮರ್ಪಕವಾಗಿ ಹಂಚಿಕೆ ಮಾಡಬೇಕು. ಎಲ್ಲಿಯೂ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಬೇಕು. ಆಶಾ ಕಾರ್ಯಕರ್ತೆಯರ ಬಾಕಿ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಲು ಸೂಚಿಸಿದ ಅವರು, ಎರಡು ಮೂರು ದಿನಗಳಲ್ಲಿಯೇ ಆಶಾ ಕಾರ್ಯಕರ್ತೆಯರ ವೇತನ ದೊರೆಯಲಿದೆ ಎಂದು ತಿಳಿಸಿದರು.

ಸ್ಥಳೀಯ ಪಂಚಾಯತ್ ಸದಸ್ಯರನ್ನು ಕೊವಿಡ್ ಸೇನಾನಿಗಳೆಂದು ಪರಿಗಣಿಸಿ

ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿಲ್ಲಾ ಪಂಚಾಯತ್, ತಾಲೂಕಾ ಪಂಚಾಯತ್, ಗ್ರಾಮ ಪಂಚಾಯತ್ ಸದಸ್ಯರುಗಳನ್ನು ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಬೇಕು. ಮತ್ತು ಕೊವಿಡ್ ಮೊದಲ ಡೋಸ್ ಲಸಿಕೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೊವಿಡ್ ಚಿಕಿತ್ಸೆಗೆ ಕ್ರೀಡಾಪಟುಗಳಿಗೆ ಕರ್ನಾಟಕ ಒಲಿಂಪಿಕ್ ಸಂಸ್ಥೆಯಿಂದ ಆರ್ಥಿಕ ನೆರವು

ಕೊರೊನಾದಿಂದ ಪಾಲಕರು ಮೃತಪಟ್ಟು ಅನಾಥರಾದ ಮಕ್ಕಳ ಹೊಣೆಯನ್ನು ಜಿಲ್ಲಾಡಳಿತಗಳಿಗೆ ವಹಿಸಿದ ಸುಪ್ರೀಂಕೋರ್ಟ್

(CM BS Yediyurappa directs try to make Covid positivity rate below 10 percent in Karnataka)