ಕೊರೊನಾ ಸೋಂಕಿಗೆ ತುತ್ತಾಗಿದ್ದ ಬಿ.ಎಸ್​.ಯಡಿಯೂರಪ್ಪ ಮತ್ತು ಮೊಮ್ಮಗಳು ಸೌಂದರ್ಯ ಇಬ್ಬರೂ ಆಸ್ಪತ್ರೆಯಿಂದ ಡಿಸ್ಚಾರ್ಜ್​

|

Updated on: Apr 22, 2021 | 11:26 AM

ಕೊರೊನಾ ಸೋಂಕಿಗೆ ತುತ್ತಾಗಿದ್ದ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ.

ಕೊರೊನಾ ಸೋಂಕಿಗೆ ತುತ್ತಾಗಿದ್ದ ಬಿ.ಎಸ್​.ಯಡಿಯೂರಪ್ಪ ಮತ್ತು ಮೊಮ್ಮಗಳು ಸೌಂದರ್ಯ ಇಬ್ಬರೂ ಆಸ್ಪತ್ರೆಯಿಂದ ಡಿಸ್ಚಾರ್ಜ್​
ಬಿ.ಎಸ್​.ಯಡಿಯೂರಪ್ಪ
Follow us on

ಕೊರೊನಾ ಸೋಂಕಿಗೆ ತುತ್ತಾಗಿದ್ದ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಕೊರೊನಾದಿಂದ ಗುಣಮುಖರಾದ ಕಾರಣ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಜತೆಗೆ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಕೂಡಾ ಸೋಂಕಿನಿಂದ ಚೇತರಿಸಿಕೊಂಡಿದ್ದು ಅವರನ್ನೂ ಡಿಸ್​ಚಾರ್ಜ್​ ಮಾಡಲಾಗಿದೆ. ಡಿಸ್​ಚಾರ್ಜ್​ ಮಾಡಿದ ನಂತರ ಬಿ.ಎಸ್.ಯಡಿಯೂರಪ್ಪ, ಆಸ್ಪತ್ರೆಯಿಂದ ನೇರವಾಗಿ ತಮ್ಮ ಅಧಿಕೃತ ನಿವಾಸ ಕಾವೇರಿಗೆ ತೆರಳಿದ್ದಾರೆ.

ಆಸ್ಪತ್ರೆಯಿಂದ ಮನೆಗೆ ತೆರಳಿದ ಬಳಿಕ ಕೊರೊನಾ ಸೋಂಕಿನ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ರಾಜ್ಯದಲ್ಲಿ ಕೊರೊನಾ ದಿನೇದಿನೆ ಉಲ್ಬಣವಾಗುತ್ತಿದೆ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಳ್ಳಿ. ಅನಗತ್ಯವಾಗಿ ಮನೆಯಿಂದ ಯಾರೂ ಹೊರಗೆ ಬರಬೇಡಿ ಎಂದು ಮನವಿ ಮಾಡಿದ್ದಾರೆ. ಸೋಂಕು ನಿಯಂತ್ರಣಕ್ಕೆ ಸರ್ಕಾರದಿಂದ ಬಿಗಿ ಕ್ರಮ ಕೈಗೊಳ್ಳಲೇಬೇಕಾಗಿದೆ. ರಾಜ್ಯದ ಜನರು ಕೂಡ ಇದಕ್ಕೆ ಸಹಕಾರ ನೀಡಬೇಕು. ಇಂದು ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ಇದೆ. ಕೊವಿಡ್ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಸಚಿವರ ಜತೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಅಲ್ಲದೇ, ನನಗೆ ಈಗ ರೆಸ್ಟ್​ ಬೇಕಾಗಿಲ್ಲ. ಆಸ್ಪತ್ರೆಯಲ್ಲಿ ರೆಸ್ಟ್​ ತೆಗೆದುಕೊಂಡಾಗಿದೆ. ಹಾಗಾಗಿ ಈಗ ವಿಶ್ರಾಂತಿಯ ಮೊರೆ ಹೋಗದೇ ಸಂಜೆಯ ಸಭೆಯಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:
ರಾಜ್ಯದಲ್ಲಿ ರೆಮ್‍ಡೆಸಿವಿರ್ ಇಂಜೆಕ್ಷನ್‍, ಆಮ್ಲಜನಕದ ಕೊರತೆಯಿಲ್ಲ; ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರಿಂದ ಸಿಎಂ ಯಡಿಯೂರಪ್ಪಗೆ ಭರವಸೆ

Published On - 11:08 am, Thu, 22 April 21