ಹಾಸನ: ಕರ್ನಾಟಕ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಮುಂದಿನ ಎರಡು ವರ್ಷ ಕಾಲ ಮುಂದುವರಿಯಲಿದ್ದಾರೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ನಿನ್ನೆಯಷ್ಟೇ ದೆಹಲಿಯಲ್ಲಿ ಸ್ಪಷ್ಟಪಡಿಸಿದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಅವರು ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎರಡು ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಘಂಟಾ ಘೋಷವಾಗಿ ಹೇಳಿದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನಡೆದಿದ್ದ ಚರ್ಚೆಗಳ ವಿಚಾರದ ಬಗ್ಗೆ ಗಮನ ಸೆಳೆದಾಗ ಈ ಬಗ್ಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಈ ಅವಧಿ ಪೂರ್ಣ BSY ಅವರೇ ಇರ್ತಾರೆಂದು ಹೇಳಿದ್ದಾರೆ. ಅವರೇ ಹೀಗೆ ಹೇಳಿದ ಮೇಲೆ ಈ ಪ್ರಶ್ನೆಯೇ ಉದ್ಭವ ಆಗಲ್ಲ. ನಾನು ಭರವಸೆ ಕೊಡ್ತೇನೆ ಇನ್ನೂ 2 ವರ್ಷ ನಾನೇ ಸಿಎಂ ಎಂದು ಹಾಸನದಲ್ಲಿ ಸಭೆಯ ಬಳಿಕ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದರು.
ಮೋದಿ, ಅಮಿತ್ ಶಾ ನನ್ನ ಮೇಲೆ ಪ್ರೀತಿ ವಿಶ್ವಾಸವಿಟ್ಟಿದ್ದಾರೆ…
ಉಸ್ತುವಾರಿಯೇ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಅವರ ನೇತೃತ್ವದಲ್ಲಿ ಒಳ್ಳೆ ಕೆಲಸ ಆಗ್ತಿದೆ, ಆಗಬೇಕೆಂದಿದ್ದಾರೆ. ಹೀಗೆಂದು ಹೇಳಿದ ಮೇಲೆ ನನ್ನ ಜವಾಬ್ದಾರಿ ಜಾಸ್ತಿ ಆಗಿದೆ. ಮೋದಿ, ಅಮಿತ್ ಶಾ ನನ್ನ ಮೇಲೆ ಪ್ರೀತಿ ವಿಶ್ವಾಸವಿಟ್ಟಿದ್ದಾರೆ. ಅದನ್ನು ಉಳಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದೂ ಬಿ.ಎಸ್. ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದರು.
ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಶೀಘ್ರದಲ್ಲೇ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅವರು ನಮ್ಮ ಪಕ್ಷದ ಉಸ್ತುವಾರಿ ಇದಾರೆ. ಹಾಗಾಗಿ ಬರ್ತಾರೆ, ಚರ್ಚೆ ಮಾಡ್ತಾರೆ, ಸಲಹೆ ಕೊಡ್ತಾರೆ ಎಂದು ಯಡಿಯೂರಪ್ಪ ಹೇಳಿದರು.
ಅರುಣ್ ಸಿಂಗ್ ಅವರ ಮಾತಿನಿಂದ ನಿಮಗೆ ಮತ್ತಷ್ಟು ಬಲ ಬಂದಿದೆಯಾ ಎಂಬ ಪ್ರಶ್ನೆಗೆ ಖುಷಿಯಾಗಿ ಉತ್ತರ ನೀಡಿದ ಯಡಿಯೂರಪ್ಪ ಅವರು ನೂರಕ್ಕೆ ನೂರು ರೀ. ನಮ್ಮ ಕರ್ನಾಟಕದ ಉಸ್ತುವಾರಿಯೇ ಯಾವುದೇ ಬದಲಾವಣೆ ಇಲ್ಲಾ ಎಂದು ಹೇಳಿದ್ದಾರಲ್ಲಾ ಎಂದು ಆತ್ಮವಿಶ್ವಾಸದ ನುಡಿಗಳನ್ನಾಡಿದರು. ಅದಕ್ಕೂ ಮುನ್ನ ಹಾಸನ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹಾಸನಕ್ಕೆ ಭೇಟಿ ನೀಡಿದ್ರು. ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳ ಜತೆ ಸಭೆ ನಡೆಸಿ, ಕೊರೊನಾ ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚಿಸಿದರು.
(CM BS Yediyurappa in hassan reiterates he will be the chief minister of karnataka for next 2 years)
ಹಾಸನದಲ್ಲಿ ಶಿಷ್ಟಾಚಾರ ಪಕ್ಕಕ್ಕಿಟ್ಟು ಹೆಚ್ ಡಿ ರೇವಣ್ಣಗೆ ಪಕ್ಕ ಕೂಡಿಸಿಕೊಂಡು, ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದ ಅರುಣ್ ಸಿಂಗ್, ಯಡಿಯೂರಪ್ಪ ಬಗ್ಗೆ ಹೇಳಿದ್ದೇನು?
Published On - 1:23 pm, Fri, 11 June 21