ಯಾದಗಿರಿ ಜಿಲ್ಲಾಸ್ಪತ್ರೆ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ​ ಯಡಿಯೂರಪ್ಪ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 06, 2021 | 6:56 PM

ಶಂಕುಸ್ಥಾಪನೆ ಸಮಾವೇಶದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಬಿಸ್​ವೈ ಜೊತೆ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಹಾಗೂ ಲಕ್ಷಣ ಸವದಿ ಸೇರಿ ಅನೇಕರು ಪಾಲ್ಗೊಂಡಿದ್ದರು.

ಯಾದಗಿರಿ ಜಿಲ್ಲಾಸ್ಪತ್ರೆ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ​ ಯಡಿಯೂರಪ್ಪ
ಆಸ್ಪತ್ರೆ ಉದ್ಘಾಟನಾ ಸನಾರಂಭದಲ್ಲಿ ಯಡಿಯೂರಪ್ಪ
Follow us on

ಯಾದಗಿರಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಯಾದಗಿರಿ ಜಿಲ್ಲಾಸ್ಪತ್ರೆಯನ್ನು ಉದ್ಘಾಟನೆ ಮಾಡಿದರು. ಇದೇ ವೇಳೆ ವಿವಿಧ ಕಾಮಗಾರಿಗಳಿಗೆ ಅವರು ಶಂಕುಸ್ಥಾಪನೆ ಮಾಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶೇಷ ಹೆಲಿಕಾಪ್ಟರ್ ಮೂಲಕ ಯಡಿಯೂರಪ್ಪ ಲ್ಯಾಂಡ್​ ಆದರು. ಬಿ.ಎಸ್.​ ಯಡಿಯೂರಪ್ಪ ಅವರಿಗೆ ಪೊಲೀಸ್ ಸಿಬ್ಬಂದಿ ಗೌರವ ಸಮರ್ಪಣೆ ಮಾಡಿದರು. ನಂತರ ಅವರು ಕ್ರೀಡಾಂಗಣದಿಂದ ನೇರವಾಗಿ ನೂತನವಾಗಿ ನಿರ್ಮಾಣವಾದ ಆಸ್ಪತ್ರೆಗೆ ತೆರಳಿದರು. ಸಾವಿರಾರು ಜನರ ಸಮ್ಮುಖದಲ್ಲಿ ಆಸ್ಪತ್ರೆ ಉದ್ಘಾಟನೆ ಮಾಡಿದರು.

ಶಂಕುಸ್ಥಾಪನೆ ಸಮಾವೇಶದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಬಿಎಸ್​ವೈ ಜೊತೆ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಹಾಗೂ ಲಕ್ಷಣ ಸವದಿ, ಸಚಿವರಾದ ಡಾ. ಸುಧಾಕರ, ಪ್ರಭು ಚೌಹಾಣ್ ಹಾಗೂ ಸ್ಥಳೀಯ ಶಾಸಕರು ಸಾಥ್​ ನೀಡಿದರು.

ರಾಜ್ಯದ 18 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು
ಆರೋಗ್ಯ ಸಚಿವ ಸುಧಾಕರ್​ ರಾಜ್ಯದ 18 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದಿದ್ದಾರೆ. ಈ ವರ್ಷ ನಾಲ್ಕು ಮೆಡಿಕಲ್ ಕಾಲೇಜಿಗೆ ಅಡಿಗಲ್ಲು ಬೀಳುತ್ತಿದೆ ಎಂದು ತಿಳಿಸಿದ್ದಾರೆ.

2 ವರ್ಷಗಳಲ್ಲಿ ಪ್ರತಿ ಜಿಲ್ಲೆಯಲ್ಲೂ ಮೆಡಿಕಲ್ ಕಾಲೇಜು ನಿರ್ಮಾಣ ಆಗಲಿದೆ. 2,500 ವೈದ್ಯರ ನೇರ ನೇಮಕಕ್ಕೆ ಮುಂದಾಗಿದ್ದೇವೆ. ಕೊರೊನಾ ಲಸಿಕೆ ನೀಡುವಲ್ಲೂ ಸರ್ಕಾರ ತಯಾರಾಗಿದೆ ಎಂದು ಅವರು ತಿಳಿಸಿದ್ದಾರೆ.

ಯಾದಗಿರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ಪಡೆಯಲು ಆಪರೇಷನ್ ಕಮಲ? ರಾತ್ರೋರಾತ್ರಿ ಮುಂದೋಯ್ತು ಚುನಾವಣೆ