ಆಪ್ತ ಸಚಿವರ ಜತೆ ಭೋಜನಕೂಟದಲ್ಲಿ ಸಿಎಂ ಯಡಿಯೂರಪ್ಪ ಮೌನ, ಟೆನ್ಷನ್; ದಿಲ್ಲಿ ಭೇಟಿ ಮುಂದೂಡಿದ ನಳೀನ್ ಕುಮಾರ್ ಕಟೀಲ್

BS Yediyurappa: ನಾಯಕತ್ವ ಬದಲಾವಣೆ ವಿಚಾರವಾಗಿ ಒಂದಷ್ಟು ಟೆನ್ಷನ್ ನಲ್ಲಿ ಇರುವ ರೀತಿಯಲ್ಲೇ ಇರುವ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋ ಬಗ್ಗೆ ಬೇಸರಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆಪ್ತ ಸಚಿವರ ಜತೆ ಭೋಜನಕೂಟದಲ್ಲಿ ಸಿಎಂ ಯಡಿಯೂರಪ್ಪ ಮೌನ, ಟೆನ್ಷನ್; ದಿಲ್ಲಿ ಭೇಟಿ ಮುಂದೂಡಿದ ನಳೀನ್ ಕುಮಾರ್ ಕಟೀಲ್
ಬಿ.ಎಸ್​.ಯಡಿಯೂರಪ್ಪ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 19, 2021 | 4:47 PM

ನಾಯಕತ್ವ ಬದಲಾವಣೆ ವಿಚಾರದ ಒಂದಷ್ಟು ಟೆನ್ಷನ್ ಮಧ್ಯೆಯೇ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಇಂದು ತಮ್ಮ ಆಪ್ತ ಸಚಿವರ ಜತೆ ಭೋಜನಕೂಟದಲ್ಲಿ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದ ಭೋಜನಕೂಟದಲ್ಲಿ ಬಸವರಾಜ ಬೊಮ್ಮಾಯಿ‌, ಆರ್.ಅಶೋಕ್, ವಿ. ಸೋಮಣ್ಣ, ಸತೀಶ್ ರೆಡ್ಡಿ, ಎಂ. ಕೃಷ್ಣಪ್ಪ, ಡಾ.ಸುಧಾಕರ್, ಎಸ್.ಟಿ. ಸೋಮಶೇಖರ್ ಮತ್ತು ಬಿ.ಸಿ.ಪಾಟೀಲ್​ ಪಾಲ್ಗೊಂಡಿದ್ದರು.

ನಾಯಕತ್ವ ಬದಲಾವಣೆ ವಿಚಾರವಾಗಿ ಒಂದಷ್ಟು ಟೆನ್ಷನ್ ನಲ್ಲಿ ಇರುವ ರೀತಿಯಲ್ಲೇ ಇರುವ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋ ಬಗ್ಗೆ ಬೇಸರಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭೋಜನದ ವೇಳೆ ಸಚಿವರ ಜೊತೆ ಪಕ್ಷದ ಬೆಳವಣಿಗೆಗಳ ವಿಚಾರ, ಸರ್ಕಾರದ ವಿಚಾರಗಳ ಬಗ್ಗೆ ಮಾತುಕತೆ ನಡೆಸಿರುವ ಯಡಿಯೂರಪ್ಪ ಕಟೀಲ್ ಆಡಿಯೋ ಬಗ್ಗೆ ಬೇಸರ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.

ಇದರ ಹೊರತಾಗಿ ನಳಿನ್ ಕುಮಾರ್‌ರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರದ ಬಗ್ಗೆ ಸಿಎಂ ಯಡಿಯೂರಪ್ಪ ಮೌನ ವಹಿಸಿದ್ದು, ಆಡಿಯೋ ಬಗ್ಗೆ ಸಾರ್ವಜನಿಕವಾಗಿ ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಆಪ್ತವಲಯದಲ್ಲೂ ಆಡಿಯೋ ಬಗ್ಗೆ ಹೆಚ್ಚಾಗಿ ಏನೂ ಮಾತಾನಾಡಿಲ್ಲ. ಈ ಮಧ್ಯೆ, ನಳಿನ್ ಕುಮಾರ್​ ಅವರು ಪ್ರಸ್ತಾವಿತ ಆಡಿಯೋ ತನಿಖೆಗೆ ಸಿಎಂಗೆ ಪತ್ರ ಬರೆಯುತ್ತೇನೆಂದು ಹೇಳಿರುವುದು ಗಮನಾರ್ಹವಾಗಿದೆ. ಜೊತೆಗೆ ಇಂದು ಸಂಸತ್​ ಮುಂಗಾರು ಅಧಿವೇಶನ ಆರಂಭವಾಗಿದ್ದು, ಕಟೀಲ್​ ದೆಹಲಿಗೆ ತೆರಳಬೇಕಿತ್ತು. ಆದರೆ ಅವರು ದಿಲ್ಲಿ ಭೇಟಿಯನ್ನು ಮುಂದೂಡಿದ್ದಾರೆ.

ಸದ್ಯದ ಬೆಳವಣಿಗೆಗಳನ್ನು ನೋಡಿದರೆ ಸಿಎಂ ಸ್ಥಾನದಲ್ಲಿ ಯಡಿಯೂರಪ್ಪ ಮುಂದುವರಿಕೆ ಬಗ್ಗೆ ಅನಿಶ್ಚಿತತೆ ಮೂಡಲಾರಂಭಿಸಿದ್ದು, ಬೇರೆ ಬೇರೆ ಲೆಕ್ಕಾಚಾರಗಳು ಹುಟ್ಟಿಕೊಳ್ಳಲಾರಂಭಿಸಿವೆ. ಜುಲೈ 26 ರಂದು ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯೇ ಮಹತ್ತರ ಬದಲಾವಣೆ, ಬೆಳವಣಿಗೆಗೆ ನಾಂದಿ ಹಾಡಬಹುದು ಎನ್ನುವ ಮಾತುಗಳಿದ್ದು, ದೆಹಲಿ ಭೇಟಿ ವೇಳೆಯೂ ನಾವು ತಿಳಿಸುತ್ತೇವೆ ಎಂದಷ್ಟೇ ಹೈಕಮಾಂಡ್​ ಮುಖ್ಯಮಂತ್ರಿಗೆ ಹೇಳಿ ಕಳುಹಿಸಿದ್ದಾರೆ ಎಂಬ ಮಾಹಿತಿ ಸಿಎಂ ಆಪ್ತ ಬಳಗದಿಂದ ಲಭ್ಯವಾಗಿದೆ.

(CM BS Yediyurappa meets his ministers over lunch get tensed with alleged katil audio episode)

Published On - 4:39 pm, Mon, 19 July 21

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್