ಬೆಂಗಳೂರು ಮೆಟ್ರೋ ವಿಸ್ತೃತ ಮಾರ್ಗ ಜುಲೈನಲ್ಲಿ ಸಂಚಾರಕ್ಕೆ ಆರಂಭ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಬೆಂಗಳೂರು: ನಮ್ಮ ಮೆಟ್ರೋ ರೀಚ್-2 ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಮೆಟ್ರೋ ವಿಸ್ತರಿಸಿದ ಮಾರ್ಗ ಜುಲೈನಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಡಾ. ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಈ ಯೋಜನೆಯಿಂದ ಪ್ರತಿದಿನ 75 ಸಾವಿರ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ಮೆಟ್ರೋ ಮಾರ್ಗ ಒಟ್ಟು 7.53 ಕಿಲೋ ಮೀಟರ್ ಉದ್ದದ ವಿಸ್ತರಣೆಯಾಗಿರಲಿದೆ ಎಂದು ಅವರು ಇಂದು (ಮೇ 25) ತಿಳಿಸಿದ್ದಾರೆ. ನಮ್ಮ ಮೆಟ್ರೋ ರೀಚ್-2ಗೆ 1,560 ಕೋಟಿ ರೂಪಾಯಿ ವೆಚ್ಚವಾಗಿದೆ. ಭೂಸ್ವಾಧೀನಕ್ಕಾಗಿ 360 […]
ಬೆಂಗಳೂರು: ನಮ್ಮ ಮೆಟ್ರೋ ರೀಚ್-2 ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಮೆಟ್ರೋ ವಿಸ್ತರಿಸಿದ ಮಾರ್ಗ ಜುಲೈನಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಡಾ. ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಈ ಯೋಜನೆಯಿಂದ ಪ್ರತಿದಿನ 75 ಸಾವಿರ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ಮೆಟ್ರೋ ಮಾರ್ಗ ಒಟ್ಟು 7.53 ಕಿಲೋ ಮೀಟರ್ ಉದ್ದದ ವಿಸ್ತರಣೆಯಾಗಿರಲಿದೆ ಎಂದು ಅವರು ಇಂದು (ಮೇ 25) ತಿಳಿಸಿದ್ದಾರೆ.
ನಮ್ಮ ಮೆಟ್ರೋ ರೀಚ್-2ಗೆ 1,560 ಕೋಟಿ ರೂಪಾಯಿ ವೆಚ್ಚವಾಗಿದೆ. ಭೂಸ್ವಾಧೀನಕ್ಕಾಗಿ 360 ಕೋಟಿ ರೂಪಾಯಿ ವೆಚ್ಚವಾಗಿದೆ. ಪೂರ್ವ-ಪಶ್ಚಿಮ ಕಾರಿಡಾರ್ ಮಾರ್ಗ 18.1 ಕಿ.ಮೀ. ಹೆಚ್ಚಳವಾಗಿದೆ. ನಾಯಂಡಹಳ್ಳಿ, ರಾಜರಾಜೇಶ್ವರಿನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಸೇರಿದಂತೆ ಒಟ್ಟು 6 ನಿಲ್ದಾಣಗಳಿವೆ ಎಂದು ಮಾಹಿತಿ ಲಭ್ಯವಾಗಿದೆ.
ನಾಯಂಡಹಳ್ಳಿ, ರಾಜರಾಜೇಶ್ವರಿನಗರ, ಜ್ಞಾನಭಾರತಿ ಈ 3 ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್ಗೆ ವ್ಯವಸ್ಥೆ ಇರಲಿದೆ. ಕೆಂಗೇರಿ ನಿಲ್ದಾಣದಲ್ಲಿ 2 ಅಂತಸ್ತಿನಲ್ಲಿ ಪಾರ್ಕಿಂಗ್ ಸೌಲಭ್ಯ ಒದಗಿಸಲಾಗಿದೆ. ಬೈಯ್ಯಪನಹಳ್ಳಿಯಿಂದ ಕೆಂಗೇರಿವರೆಗೆ ಪ್ರಯಾಣ ದರ ₹56 ಆಗಿರಲಿದೆ. ಹಾಗೂ ಕೆಂಗೇರಿಯಿಂದ ಸಿಲ್ಕ್ ಇನ್ಸ್ಟಿಟ್ಯೂಟ್ವರೆಗೆ ನಮ್ಮ ಮೆಟ್ರೋ ಪ್ರಯಾಣ ದರವನ್ನು ₹60 ಎಂದು ನಿಗದಿ ಮಾಡಲಾಗಿದೆ. ಈ ವಿಸ್ತರಣೆಯ ಕಾರ್ಯಾಚರಣೆಯಿಂದ ಪ್ರತಿದಿನ ಸರಾಸರಿ 75,000 ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.
Inspected the Bengaluru Metro’s Phase-2 Purple Line between Mysore Road and Kengeri. The 7.53 km Reach-2 will further enhance connectivity in the city. pic.twitter.com/Wk8Fnmdmxy
— B.S. Yediyurappa (@BSYBJP) May 25, 2021
ಹೊಸ ಮೆಟ್ರೋ ಮಾರ್ಗದ ನಿಲ್ದಾಣಗಳಿವು ಮೆಟ್ರೋ ರೈಲು ಸುರಕ್ಷತಾ ಕಮಿಷನರ್ (CMRS) ರೈಲು ಕಾರಿಡಾರ್ನ್ನು ಮೇ ತಿಂಗಳಲ್ಲಿ ಪರಿಶೀಲಿಸಲಿದ್ದಾರೆ. ಬಳಿಕ, BMRCL ಮೆಟ್ರೋ ಸೇವೆಯನ್ನು ಆರಂಭಿಸಲು ಸಾಧ್ಯವಾಗಲಿದೆ ಎಂದು ಮೂಲಗಳ ಮಾಹಿತಿ ಲಭ್ಯವಾಗಿತ್ತು. ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಪ್ರಯಾಣದ ಸಮಯ 15 ನಿಮಿಷ ಆಗಿರಲಿದೆ. ಈ ವಿಸ್ತೃತ ರಸ್ತೆಯು ಏಳು ನಿಲ್ದಾಣಗಳನ್ನು ಹೊಂದಿರಲಿದೆ. ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್ ನಿಲ್ದಾಣ, ಕೆಂಗೇರಿ ಹಾಗೂ ಚಲ್ಲಘಟ್ಟ ನಿಲ್ದಾಣಗಳನ್ನು ಗುರುತಿಸಲಾಗಿತ್ತು.
ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ ಹಾಗೂ ಜ್ಞಾನಭಾರತಿ ನಿಲ್ದಾಣಗಳಲ್ಲಿ ಪಾರ್ಕಿಂಗ್ ಸೌಲಭ್ಯ ಇರಲಿದೆ. ಕೆಂಗೇರಿ ಬಸ್ ನಿಲ್ದಾಣ ಸಮೀಪದ ಮೆಟ್ರೋ ಸ್ಟೇಷನ್ನಲ್ಲಿ ಎರಡು ಅಂತಸ್ತಿನ ಪಾರ್ಕಿಂಗ್ ಸೌಲಭ್ಯ ಇರಲಿದೆ. ಎಲ್ಲಾ ನಿಲ್ದಾಣಗಳಲ್ಲೂ ಸೋಲಾರ್ ಪ್ಯಾನೆಲ್ಗಳನ್ನು ಅಳವಡಿಸಲಾಗುವುದು ಎಂದು ವ್ಯವಸ್ಥಾಪಕ ನಿರ್ದೇಶಕ ತಿಳಿಸಿದ್ದರು.
ಮೆಟ್ರೋ ರೈಲು ಮಾರ್ಗ ಅಥವಾ ನಿಲ್ದಾಣದ ಕೆಳಗೆ ಮಳೆಗಾಲದ ಸಮಯದಲ್ಲಿ ನೀರು ಸೋರಿಕೆ ಆಗುವುದನ್ನು ತಡೆಗಟ್ಟಲು ವಾಟರ್ಪ್ರೂಫಿಂಗ್ ಕೆಲಸಕ್ಕೆ ಟೆಂಡರ್ ಕರೆಯಲಾಗಿದೆ. ಚಿಕ್ಕಪೇಟೆ ಮತ್ತು ಕೆಆರ್ ಮಾರ್ಕೆಟ್ ಸ್ಟೇಷನ್ಗಳಲ್ಲಿ ₹ 71 ಲಕ್ಷ ಮೌಲ್ಯದ ವಾಟರ್ಪ್ರೂಫಿಂಗ್ ಕೆಲಸ ಆಗಲಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದರು.
ಇದನ್ನೂ ಓದಿ: ಕೊವಿಡ್ ವಾರ್ರೂಂನಲ್ಲಿ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಗೆ ಸ್ವತಃ ಬೆಡ್ ವ್ಯವಸ್ಥೆ ಮಾಡಿದ ಸಿಎಂ ಯಡಿಯೂರಪ್ಪ
ನಮ್ಮ ಮೆಟ್ರೋ ಹಂತ 2ಎ, 2ಬಿ ಯೋಜನೆ ಅನುಮೋದನೆಗೆ ಬೆಂಗಳೂರು ಮಹಾನಗರ ಯೋಜನಾ ಸಮಿತಿ ಸಭೆ
Published On - 7:15 pm, Tue, 25 May 21