ಅಪೌಷ್ಟಿಕ, ಅನಾರೋಗ್ಯ ಪೀಡಿತ ಮಕ್ಕಳನ್ನು ಗುರುತಿಸಿ; ಅವರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿ: ಬಿ ಎಸ್ ಯಡಿಯೂರಪ್ಪ ಸಲಹೆ
ಆರೋಗ್ಯ ಇಲಾಖೆ ಜೊತೆ ನಿಕಟ ಸಂಪರ್ಕದಲ್ಲಿರುವಂತೆಯೂ ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತರಿಗೆ ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಕೊರೊನಾ 3ನೇ ಅಲೆ ನಿಯಂತ್ರಣಕ್ಕೆ ಶ್ರಮಿಸಬೇಕೆಂದು ಹೇಳಿದ್ದಾರೆ.
ಬೆಂಗಳೂರು: ಕೊವಿಡ್ 3ನೇ ಅಲೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ. ಅಪೌಷ್ಟಿಕ ಮಕ್ಕಳು, ಅನಾರೋಗ್ಯ ಪೀಡಿತ ಮಕ್ಕಳನ್ನ ಗುರುತಿಸಿ. ಅವರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ವಿಡಿಯೋ ಕಾನ್ಫರೆನ್ಸ್ನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲಹೆ ನೀಡಿದ್ದಾರೆ.
ಆರೋಗ್ಯ ಇಲಾಖೆ ಜೊತೆ ನಿಕಟ ಸಂಪರ್ಕದಲ್ಲಿರುವಂತೆಯೂ ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತರಿಗೆ ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಕೊರೊನಾ 3ನೇ ಅಲೆ ನಿಯಂತ್ರಣಕ್ಕೆ ಶ್ರಮಿಸಬೇಕೆಂದು ಹೇಳಿದ್ದಾರೆ. ಕೊರೊನಾ ಸೋಂಕಿನಿಂದ ಪತಿಯನ್ನು ಕಳೆದುಕೊಂಡಿರುವ ಅಂಗನವಾಡಿ ಕಾರ್ಯಕರ್ತೆ ಗಿರಿಜಾಗೆ ಮುಖ್ಯಮಂತ್ರಿ ಸಾಂತ್ವನ ಹೇಳಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಗಿರಿಜಾಗೆ ಸೂಚಿಸಿದ್ದಾರೆ.
ಮಾತೃ ಇಲಾಖೆ ಕರ್ತವ್ಯದ ಜೊತೆ ಇತರೆ ಇಲಾಖೆಗಳ ಕೆಲಸ. ಮತ್ತಿತರೆ ಕೆಲಸಗಳಿಂದ ನಮ್ಮ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ಕಾರ್ಯಕರ್ತೆಯರು ಯಡಿಯೂರಪ್ಪಗೆ ಹೇಳಿದ್ದಾರೆ. ಒತ್ತಡ ನಿವಾರಿಸುವಂತೆ ಸಿಎಂ ಯಡಿಯೂರಪ್ಪಗೆ ಮನವಿ ಸಲ್ಲಿಸಿದ್ದಾರೆ. ಕಾರ್ಯಕರ್ತೆಯರ ಮನವಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ದನಿಗೂಡಿಸಿದ್ದಾರೆ.
ಅದಕ್ಕೆ ಪ್ರತಿಯಾಗಿ, ಆ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಬಗೆಹರಿಸುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಅನ್ಲಾಕ್ ಬಗ್ಗೆ ಚರ್ಚೆ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹೀಗಾಗಿ, ರಾಜ್ಯದಲ್ಲಿ ಅನ್ಲಾಕ್ ಪ್ರಕ್ರಿಯೆ ಬಗ್ಗೆ ಚರ್ಚೆ ಪ್ರಾರಂಭವಾಗಿದೆ. ನಾಳೆ ಸಿಎಂ ಬಿಎಸ್ವೈ ನೇತೃತ್ವದಲ್ಲಿ ಅನ್ಲಾಕ್ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಅನ್ಲಾಕ್ ಪ್ರಕ್ರಿಯೆ ಹಂತ ಹಂತವಾಗಿ ಮಾಡುತ್ತೇವೆ. ಒಂದೇ ಬಾರಿ ಅನ್ಲಾಕ್ ಮಾಡಿದ್ರೆ ಸೋಂಕು ಹೆಚ್ಚಳವಾಗುತ್ತೆ. ಸೋಂಕು ಹೆಚ್ಚಳ ಆಗೋ ಚಟುವಟಿಕೆ ನಿಯಂತ್ರಣ ಮಾಡ್ತೇವೆ. ತಾಂತ್ರಿಕ ಸಲಹಾ ಸಮಿತಿ ವರದಿ ಮೇಲೆ ಅನ್ಲಾಕ್ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸುಧಾಕರ್ ತಿಳಿಸಿದ್ದಾರೆ.
ಅನ್ಲಾಕ್ಗೆ ಶೇಕಡಾ 5ರಷ್ಟು ಸೋಂಕು ಇಳಿಕೆ ಮಾನದಂಡ ಇದೆ. ಶೇ.5ಕ್ಕಿಂತ ಕಡಿಮೆ ಸೋಂಕಿನ ಪ್ರಮಾಣ ಇರುವ ಕಡೆ ಚಿಂತನೆ ಮಾಡಲಾಗಿದೆ. ಈ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ. ಜೊತೆಗೆ, ಖಾಸಗಿ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ದರ ನಿಗದಿ ಮಾಡುವ ಬಗ್ಗೆಯೂ ಚರ್ಚೆ ನಡೆಸಲಾಗುವುದು. ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕೊರೊನಾ ಪಾಸಿಟಿವಿಟಿ ರೇಟ್ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ
ನಿಮ್ಮ ದೇಹದಲ್ಲಿ ಈ ಒಂದೇ ಒಂದು ಅಂಶವಿದ್ದರೂ ಕೊರೊನಾದಿಂದ ಬಚಾವಾಗುವ ಸಾಧ್ಯತೆ ಇದೆ: ಬ್ರಿಟನ್ ತಜ್ಞರ ವರದಿ
Published On - 6:02 pm, Wed, 9 June 21