ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆಗೆ ಸ್ಥಳ ಪರಿಶೀಲಿಸಿದ ಸಿಎಂ ಯಡಿಯೂರಪ್ಪ

Basaveshwara Statue: ವಿಶ್ವ ಗುರು ಬಸವೇಶ್ವರ ಪ್ರತಿಮೆ ಸ್ಥಾಪನೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆಗೆ ಸ್ಥಳ ಪರಿಶೀಲಿಸಿದ ಸಿಎಂ ಯಡಿಯೂರಪ್ಪ
ಬಸವೇಶ್ವರ ಪ್ರತಿಮೆಗೆ ಸ್ಥಳ ಪರಿಶೀಲಿಸಿದ ಸಿಎಂ ಯಡಿಯೂರಪ್ಪ
Updated By: ಆಯೇಷಾ ಬಾನು

Updated on: Jul 06, 2021 | 12:43 PM

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ವಿಶ್ವ ಗುರು ಬಸವೇಶ್ವರ ಪ್ರತಿಮೆ ಸ್ಥಾಪನೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಾಲ್ನಡಿಗೆಯಲ್ಲಿ ತೆರಳಿ ಸ್ಥಳ ವೀಕ್ಷಿಸಿದ್ದಾರೆ. ಸಿಎಂ ಬಿಎಸ್ವೈ ಜೊತೆ ಸಚಿವರಾದ ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಸಿಎಸ್ ರವಿಕುಮಾರ್ ಉಪಸ್ಥಿತರಿದ್ದರು. ಈ ಹಿಂದೆ ಅಂಬೇಡ್ಕರ್ ಮತ್ತು ನೆಹರು ಪ್ರತಿಮೆ ಇದ್ದ ಸ್ಥಳದಲ್ಲಿ ಬಸವೇಶ್ವರ ಪ್ರತಿಮೆ ಸ್ಥಾಪನೆಗೆ ಪರಿಶೀಲನೆ ನಡೆಸಲಾಗುತ್ತಿದೆ.

ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆ ಸ್ಥಾಪನೆಗೆ ರಾಜ್ಯ ಸರ್ಕಾರ ಒಲವು ತೋರಿದ್ದು, ಪ್ರಸ್ತಾವನೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದರು. ಇನ್ನು ಈ ವಿಚಾರವಾಗಿ ಕರ್ನಾಟಕದ ಶಕ್ತಿ ಕೇಂದ್ರ ಹಾಗೂ ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಪ್ರತಿಷ್ಠಾಪಿಸುವ ನಿರ್ಧಾರ ಸೂಕ್ತ ಮತ್ತು ಸ್ವಾಗತಾರ್ಹವಾದುದಾಗಿದೆ ಎಂದು ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದ್ದರು.

12 ಶತಮಾನದಲ್ಲಿ ಕನ್ನಡ ನಾಡಿನಲ್ಲಿ ಜೀವ ತಳೆದ ತತ್ವಜ್ಞಾನಿ, ಬಸವಣ್ಣ ಅಥವಾ ಬಸವೇಶ್ವರರು ಕಾಯಕವೇ ಕೈಲಾಸ ಎಂಬ ತತ್ವವನ್ನು ಪ್ರತಿಪಾದಿಸಿದ್ದಾರೆ. ಅವರ ಜೀವನ, ಸಂದೇಶ ಮತ್ತು ತತ್ವಗಳು ಇಂದಿಗೂ ಆದರ್ಶಪ್ರಾಯವಾಗಿದೆ. ವಚನ ಸಾಹಿತ್ಯದ ಅತ್ಯಂತ ಮಹತ್ವದ ಹೆಸರಾದ ಬಸವೇಶ್ವರರು ಕರ್ನಾಟಕದ ಅಸ್ಮಿತೆಯನ್ನು ವಿಶ್ವದಾದ್ಯಂತ ಸಾರುವಲ್ಲಿ ನೆರವಾಗಿದ್ದಾರೆ.

ಇದನ್ನೂ ಓದಿ: ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ