ಕೊವಿಡ್ ಹಿನ್ನೆಲೆ ಆರ್ಥಿಕ ಸಂಕಷ್ಟ: ನಿಮ್ಮ ಬೇಡಿಕೆ ಈಡೇರಿಸುವುದು ಕಷ್ಟ- CM ಬಿ ಎಸ್ ಯಡಿಯೂರಪ್ಪ
ಕೊವಿಡ್ ಹಿನ್ನೆಲೆ ಸದ್ಯ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ. ಇಂತಹ ಸಮಯದಲ್ಲಿ ನಿಮ್ಮ ಬೇಡಿಕೆ ಈಡೇರಿಸುವುದು ಕಷ್ಟ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸಾರಿಗೆ ನೌಕರರ ಬೇಡಿಕೆಗಳನ್ನು ತಳ್ಳಿ ಹಾಕಿದ್ದಾರೆ.
ಬೆಂಗಳೂರು: ಕೊವಿಡ್ ಹಿನ್ನೆಲೆ ಸದ್ಯ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ. ಇಂತಹ ಸಮಯದಲ್ಲಿ ನಿಮ್ಮ ಬೇಡಿಕೆ ಈಡೇರಿಸುವುದು ಕಷ್ಟ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಸಾರಿಗೆ ನೌಕರರ ಬೇಡಿಕೆಗಳನ್ನು ತಳ್ಳಿ ಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಾರಿಗೆ ನೌಕರರಿಗೆ ಪ್ರತಿಭಟನೆಯನ್ನು ಕೈ ಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ. ಹಾಗೂ ಕೊವಿಡ್ ಹಿನ್ನೆಲೆ ಸದ್ಯ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ. ಇಂತಹ ಸಮಯದಲ್ಲಿ ನಿಮ್ಮ ಬೇಡಿಕೆ ಈಡೇರಿಸುವುದು ಕಷ್ಟ ಎಂದು ಹೇಳಿದ್ರು.
ತಮ್ಮನ್ನು ಸರ್ಕಾರಿ ನೌಕರನ್ನಾಗಿ ಮಾಡಿ ಎಂದು ಸಾರಿಗೆ ನೌಕರರು ಇಂದು ದಿಡೀರ್ ಪ್ರತಿಭಟನೆಗೆ ಮುಂದಾಗಿದ್ದಾರೆ. ತಮ್ಮ ಕರ್ತವ್ಯಕ್ಕೆ ಗೈರಾಗಿ ಸರ್ಕಾರದ ವಿರುದ್ಧ ಹೋರಾಡುತ್ತಿದ್ದಾರೆ. ಸಾರಿಗೆ ಸಂಚಾರ ಬಂದ್ ಆಗಿದೆ. ರಾಜ್ಯದ ಜನತೆ ಬಸ್ ಸಂಚಾರವಿಲ್ಲದೆ ಸಂಕಷ್ಟದ ಸಮಯವನ್ನು ತಳ್ಳುತ್ತಿದ್ದಾರೆ.
ಮನೆಯಿಂದ ಹೊರಡುವಾಗ ರಾಜಧಾನಿ ಜನರೇ ಎಚ್ಚರ.. ಎಲ್ಲೆಲ್ಲಿ ಸಾರಿಗೆ ಪ್ರತಿಭಟನೆ ಬಿಸಿ ಹೇಗಿದೆ?