ದೇವನಹಳ್ಳಿ: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರು ಮುಷ್ಕರಕ್ಕೆ ಇಳಿದಿದ್ದಾರೆ. ಇಂದು ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ಕುರಿತಂತೆ ಮುಖ್ಯಂತ್ರಿ ಬಿ.ಎಸ್ ಯಡಿಯೂರಪ್ಪ ಮಾತನಾಡಿ ಸಾರಿಗೆ ನೌಕರರನ್ನು ಮನವೊಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಒಂಬತ್ತು ಬೇಡಿಕೆಗಳಲ್ಲಿ ಎಂಟು ಬೇಡಿಕೆಯನ್ನು ಈಗಾಗಲೇ ಈಡೇರಿಸಲಾಗಿದೆ. ಕೂಡಲೇ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು. ಇಲ್ಲವಾದಲ್ಲಿ ತೀವ್ರವಾದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಸಾರಿಗೆ ನೌಕರರ ಮುಷ್ಕರ; ಬಿ.ಎಸ್ ಯಡಿಯೂರಪ್ಪ ಸಂಜೆ 5 ಗಂಟೆಗೆ ಅಧಿಕಾರಿಗಳ ಜತೆ ಸಭೆ ನಡೆಸುವ ಸಾಧ್ಯತೆ
ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಗೆ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಭೆ ನಡೆಸುವ ಸಾಧ್ಯತೆ ಇದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಬಿಕ್ಕಟ್ಟು ಪರಿಹಾರಕ್ಕೆ ಇರುವ ಅವಕಾಶಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಇದೀಗ ಬೆಳಗಾವಿಯಿಂದ ಬೆಂಗಳೂರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಆಗಮಿಸಿದ್ದಾರೆ.
ಇದನ್ನೂ ಓದಿ: Karnataka Bus Strike Live: ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ, ಪೊಲೀಸರ ಭದ್ರತೆಯೊಂದಿಗೆ ಕೆಲ ಬಸ್ ಸಂಚಾರ
Published On - 1:49 pm, Thu, 8 April 21