ದೆಹಲಿ ಪ್ರವಾಸ ಯಶಸ್ವಿ; ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ: ಸಿಎಂ ಯಡಿಯೂರಪ್ಪ ವಿಶ್ವಾಸ

ನಾನು ಸಿಎಂ ಆಗಿ ಜುಲೈ 26ಕ್ಕೆ 2 ವರ್ಷ ಪೂರ್ಣಗೊಳ್ಳಲಿದೆ. ಬಿಎಲ್​ಪಿ ಸಭೆ ಕರೆದು ಎಲ್ಲರೂ ಒಗ್ಗಟ್ಟಾಗಿ ಹೋಗುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.  

ದೆಹಲಿ ಪ್ರವಾಸ ಯಶಸ್ವಿ; ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ: ಸಿಎಂ ಯಡಿಯೂರಪ್ಪ ವಿಶ್ವಾಸ
ಬಿ ಎಸ್ ಯಡಿಯೂರಪ್ಪ ಮತ್ತು ಅಮಿತ್ ಶಾ ಭೇಟಿ

ಬೆಂಗಳೂರು: ದೆಹಲಿ ಪ್ರವಾಸ ಅತ್ಯಂತ ಯಶಸ್ವಿಯಾಗಿದೆ. ರಾಜ್ಯದಲ್ಲಿ ಮತ್ತೊಮ್ಮೆ ಅತ್ಯಧಿಕ ಮತಗಳ ಅಂತರದಿಂದ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೇಂದ್ರದ ನಾಯಕರ ಅಪೇಕ್ಷೆಯಿದೆ. ಈ ಅಪೇಕ್ಷೆಯಂತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ (BS Yediyurappa)  ದೆಹಲಿ ಪ್ರವಾಸದಿಂದ ರಾಜ್ಯಕ್ಕೆ ಮರಳಿದ ನಂತರ ವಿಶ್ವಾಸ ವ್ಯಕ್ತಪಡಿಸಿದರು. 

ಪಕ್ಷದ ರಾಷ್ಟ್ರೀಯ ವಕ್ತಾರರ ಜತೆ ರಾಜ್ಯದಲ್ಲಿ ಯಾವುದೇ ಪರ್ಯಾಯ ನಾಯಕತ್ವದ ಬಗ್ಗೆ ಚರ್ಚೆಯಾಗಿಲ್ಲ. ಸದ್ಯಕ್ಕೆ ಎಲ್ಲರೂ ಒಗ್ಗಟ್ಟಾಗಿ ಹೋಗಲು ಜವಾಬ್ದಾರಿ ನೀಡಿದ್ದಾರೆ. ಕೆಲವರು ಸುಧಾರಣೆ ಮಾಡಿಕೊಳ್ಳುವುದು ಅವರಿಗೆ ಬಿಟ್ಟಿದ್ದು. ಜುಲೈ 26ರಂದು ಶಾಸಕಾಂಗ ಪಕ್ಷದ ಸಭೆ ಕರೆಯುತ್ತಿದ್ದೇನೆ. ನಾನು ಸಿಎಂ ಆಗಿ ಜುಲೈ 26ಕ್ಕೆ 2 ವರ್ಷ ಪೂರ್ಣಗೊಳ್ಳಲಿದೆ. ಬಿಎಲ್​ಪಿ ಸಭೆ ಕರೆದು ಎಲ್ಲರೂ ಒಗ್ಗಟ್ಟಾಗಿ ಹೋಗುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಸಲಹೆ ನೀಡಿದ್ದಾರೆ
ಅಮಿತ್​ ಶಾ ಬಹಳ ಸಂತಸದಿಂದ ನಮ್ಮ ಜೊತೆ ಮಾತಾಡಿದರು. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಸಲಹೆ ನೀಡಿದರು ಎಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಭೇಟಿ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಭೇಟಿಯಾದಾಗಲೂ ಇದೇ ಮಾತನ್ನು ಹೇಳಿದ್ದರು. ಇಂದು ಜೆ.ಪಿ. ನಡ್ಡಾ, ರಾಜನಾಥ್ ಸಿಂಗ್ ಸಹ ಖುಷಿಯಿಂದ ಮಾತನಾಡಿದರು. ನಮ್ಮ ವರಿಷ್ಠರ ಸಲಹೆಯಂತೆ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಅಮಿತ್ ಶಾ ಭೇಟಿ ಬಳಿಕ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಬಹಳ ಹೊತ್ತು ಅಮಿತ್ ಶಾ ಜೊತೆಗೆ ಚರ್ಚೆ ಮಾಡಿದೆ. ಅವರು ಕೂಡ ಸಂತೋಷದಿಂದ ಮಾತನಾಡಿದ್ದಾರೆ. ಹೆಚ್ಚು ಜವಾಬ್ದಾರಿ ತೆಗೆದುಕೊಂಡು ಪಕ್ಷ ಸಂಘಟನೆ ಮಾಡಬೇಕು. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಹಗಲು ರಾತ್ರಿ ಪಕ್ಷದ ಬೆಳವಣಿಗೆ ಕೆಲಸ ಮಾಡುತ್ತೇನೆ . ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರ್ತೆನೆ. ಕರ್ನಾಟಕದಲ್ಲಿ ಒಳ್ಳೆ ಭವಿಷ್ಯ ಇದೆ ನೀವೂ ಕೆಲಸ ಮಾಡಿ. ಸಂಪೂರ್ಣವಾಗಿ ಜೊತೆಗಿದ್ದೇವೆ ಎಂದು ಅಮಿತ್ ಶಾ ಹೇಳಿರುವ ಬಗ್ಗೆ ಯಡಿಯೂರಪ್ಪ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪಗೆ ಅಮಿತ್ ಶಾ ಬುಲಾವ್ ಹಿನ್ನೆಲೆ, ಅಮಿತ್ ಶಾ ನಿವಾಸಕ್ಕೆ ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದರು. ದೆಹಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ಶಾ ನಿವಾಸಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿದ್ದರು. ಪುತ್ರ ವಿಜಯೇಂದ್ರ ಜತೆ ಅಮಿತ್ ಶಾರನ್ನು ಸಿಎಂ ಯಡಿಯೂರಪ್ಪ ಭೇಟಿಯಾಗಿದ್ದರು.

ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಕ್ಕೆ ವಾಪಸಾಗಿದ್ದಾರೆ. ಮಧ್ಯಾಹ್ನ 2.40ಕ್ಕೆ ವಿಶೇಷ ವಿಮಾನ ಟೇಕಾಫ್ ಆಗಿದೆ. ದೆಹಲಿ ಏರ್​ಪೋರ್ಟ್​ನಿಂದ ಹೊರಟ ಸಿಎಂ ಬಿ.ಎಸ್. ಯಡಿಯೂರಪ್ಪ, ಬೆಂಗಳೂರಿನ ಹೆಚ್.ಎ.ಎಲ್. ಏರ್​ಪೋರ್ಟ್​ಗೆ ಸಂಜೆ 5.15ಕ್ಕೆ ಬಂದಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: 

Big Breaking: ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ; ನಿಗಮದ ಚಟುವಟಿಕೆಗಳಿಗೆ 500 ಕೋಟಿ ಮೀಸಲು

ಯಡಿಯೂರಪ್ಪ ರಾಜೀನಾಮೆ..? ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಯಡಿಯೂರಪ್ಪಗೆ ವಾಪಸ್​ ಬರುವಂತೆ ಅಮಿತ್ ಶಾ ಸೂಚಿಸಿದ್ದೇಕೆ?

(CM BS Yediyurappa says my Delhi Tour is Successful BJP in power once again in Karnataka)

Click on your DTH Provider to Add TV9 Kannada