ಕೈ ಮೀರುತ್ತಿದೆ ಕೊರೊನಾ ಪರಿಸ್ಥಿತಿ.. ಚುನಾವಣೆ ಅವಸರ ಮುಗಿಯುತ್ತಿದ್ದಂತೆ ತಕ್ಷಣವೇ ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ರಾತ್ರಿ ವೇಳೆ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆಯಾದರೂ ಇನ್ನೂ ಬಿಗಿ ಕ್ರಮಗಳ ಅವಶ್ಯಕತೆ ಇದೆ ಎಂದು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಸಭೆ ಮಹತ್ವದ್ದಾಗಿದೆ.

ಕೈ ಮೀರುತ್ತಿದೆ ಕೊರೊನಾ ಪರಿಸ್ಥಿತಿ.. ಚುನಾವಣೆ ಅವಸರ ಮುಗಿಯುತ್ತಿದ್ದಂತೆ ತಕ್ಷಣವೇ ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ
ಸೌಜನ್ಯ : ಅಂತರ್ಜಾಲ
Follow us
Skanda
| Updated By: ಸಾಧು ಶ್ರೀನಾಥ್​

Updated on:Apr 16, 2021 | 10:07 AM

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ. ಕೊರೊನಾ ನಿಯಂತ್ರಣ ಸಂಬಂಧಿತ ಸಭೆಯಲ್ಲಿ ಹಿರಿಯ ಅಧಿಕಾರಿಗಳು, ಸಚಿವರು ಭಾಗಿಯಾಗಲಿದ್ದು, ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ತುರ್ತುಸಭೆ ಕರೆಯಲಾಗಿದೆ. ರಾಜ್ಯದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ನಿರೀಕ್ಷೆಗೂ ಮೀರಿ ಹೆಚ್ಚಾಗುತ್ತಿದ್ದು, ಸಭೆಯ ನಂತರ ಕೆಲ ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ರಾತ್ರಿ ವೇಳೆ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆಯಾದರೂ ಇನ್ನೂ ಬಿಗಿ ಕ್ರಮಗಳ ಅವಶ್ಯಕತೆ ಇದೆ ಎಂದು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಸಭೆ ಮಹತ್ವದ್ದಾಗಿದ್ದು, ಕೊರೊನಾದಿಂದಾಗಿ ಹಲವು ಚಟುವಟಿಕೆಗಳು ಸ್ತಬ್ಧವಾಗುವ ಸಾಧ್ಯತೆ ದಟ್ಟವಾಗಿದೆ.

ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದರಿಂದ ಭಾರತೀಯ ಪುರಾತತ್ವ ಇಲಾಖೆ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳನ್ನೂ ಮೇ.15ರ ತನಕ ಬಂದ್ ಮಾಡಿ ಆದೇಶ ಹೊರಡಿಸಿದೆ. ಕೊರೊನಾ ಎರಡನೇ ಅಲೆಯ ಗಂಭೀರತೆ ಬಗ್ಗೆ ಚರ್ಚೆ ಆಗುತ್ತಿರುವ ಹೊತ್ತಿನಲ್ಲೇ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದ್ದು, ಇನ್ನೂ ಕಠಿಣ ನಿಯಮಗಳು ಜಾರಿಗೊಳ್ಳುವ ಸಾಧ್ಯತೆ ಇದೆ.

ಅಂತೆಯೇ, ನಾಳೆ (ಏಪ್ರಿಲ್​ 17) ಬೆಳಗಾವಿ ಉಪಚುನಾವಣೆ ಮುಕ್ತಾಯವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಕಠಿಣ ನಿಯಮಾವಳಿಗಳನ್ನು ಸರ್ಕಾರ ಜಾರಿಗೊಳಿಸಬಹುದು ಎಂದು ಈ ಹಿಂದೆಯೇ ಅಂದಾಜಿಸಲಾಗಿತ್ತು. ಅಲ್ಲದೇ ಏಪ್ರಿಲ್​ 18ರಂದು ಈ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆಯನ್ನೂ ಕರೆಯಲಾಗಿದ್ದು, ಸಭೆ ಬಳಿಕ ಕಠಿಣ ನಿರ್ಧಾರಗಳ ಬಗ್ಗೆ ಚಿಂತಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತಿಳಿಸಿದ್ದರು.

(CM BS Yediyurappa to conduct meeting today with officials tough rules may start after Karnataka Byelection)

ಇದನ್ನೂ ಓದಿ: India Corona Cases: ಕೊರೊನಾ 2ನೇ ಅಲೆ ಅಬ್ಬರಕ್ಕೆ ತತ್ತರಿಸಿದ ಭಾರತ.. ಇಂದು 2 ಲಕ್ಷ 16 ಸಾವಿರ ಕೇಸ್ ಪತ್ತೆ 

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿಯಂತ್ರಣ ತಪ್ಪಿದ ಕೊರೊನಾ; ಸಮುದಾಯಕ್ಕೆ ಹರಡಿದ ಶಂಕೆ

Published On - 9:12 am, Fri, 16 April 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ