ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ.. ಶಮನಕ್ಕಾಗಿ ಸಿಎಂ ಬಿಗ್ ಮೀಟಿಂಗ್
ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ. ಹೀಗಾಗಿ ಇಂದು ಬಿಜೆಪಿ ನಾಯಕರ ದಂಡು ಬೆಳಗಾವಿಗೆ ಆಗಮಿಸಲಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬಹಿರಂಗ ಬಳಿಕ ಮೊದಲ ಬಾರಿ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಗೆ ಬರಲಿದ್ದಾರೆ.
ಬೆಳಗಾವಿ: ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ. ಅಸಮಾಧಾನ ಶಮನ ಮಾಡಲು ಇಂದು ಬೆಳಗಾವಿಯಲ್ಲಿ ಸಿಎಂ ವಾಸ್ತವ್ಯ ಮಾಡಲಿದ್ದಾರೆ. ಹಾಗೂ ಇಂದು ಸರಣಿ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಬಿಜೆಿಪಿ ಮುಖಂಡರ ವಿರುದ್ಧ ಟಿಕೆಟ್ ವಂಚಿತರ ಸಿಟ್ಟು ಹೆಚ್ಚಾಗಿದೆ. ಹಲವು ಕಾರಣಕ್ಕೆ ಸ್ಥಳೀಯ ಮುಖಂಡರು ಸಿಟ್ಟಾಗಿದ್ದಾರೆ.
ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನಕ್ಕೆ ಕಾರಣಗಳೇನು ಗೊತ್ತಾ? -ನೆರೆಯ ಜಿಲ್ಲೆಯ ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿಗೆ ಚುನಾವಣಾ ಉಸ್ತುವಾರಿ ಹೊಣೆ ನೀಡಿರುವುದು -ಮಹಿಳಾ ಪ್ರತಿನಿಧಿಯಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಶಶಿಕಲಾ ಜೊಲ್ಲೆರಿಗೆ ಚುನಾವಣಾ ಉಸ್ತುವಾರಿ -ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನಾಯಕರಿಗ್ಯಾರಿಗೂ ಇಲ್ಲ ಚುನಾವಣಾ ಉಸ್ತುವಾರಿ -ಬಿಜೆಿಪಿ ಮುಖಂಡರ ಮೇಲೆ ಟಿಕೆಟ್ ವಂಚಿತರ ಅಸಮಾಧಾನ -ಬೆಳಗಾವಿ ಲೋಕಸಭೆಗೆ ಇದ್ದರು ಬರೋಬ್ಬರಿ 72 ಟಿಕೆಟ್ ಆಕಾಂಕ್ಷಿಗಳು. -ಬಿಜೆಿಪಿ ಮುಖಂಡರ ಮೇಲೆ ಅಸಮಾಧಾನಗೊಂಡಿದ್ದ ಟಿಕೆಟ್ ವಂಚಿತರು -ಚುನಾವಣಾ ವಿಚಾರದಲ್ಲಿ ಬಹುತೇಕ ಜಿಲ್ಲಾ ಬಿಜೆಪಿ ನಾಯಕರು ನ್ಯೂಟ್ರಲ್ ಅನೇಕ ಕಾರಣಗಳಿಂದ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ. ಹೀಗಾಗಿ ಒಂದು ದಿನ ವಾಸ್ತವ್ಯ ಹೂಡಿ ಸಭೆ ನಡೆಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪರಿಗೆ ಜಗದೀಶ್ ಶೆಟ್ಟರ್ ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲೇ ಸಿಎಂ ಬಿಎಸ್‌ವೈ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ವಾಸ್ತವ್ಯ ಹೂಡಲಿದ್ದಾರೆ.
ಇನ್ನು ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ. ಹೀಗಾಗಿ ಇಂದು ಬಿಜೆಪಿ ನಾಯಕರ ದಂಡು ಬೆಳಗಾವಿಗೆ ಆಗಮಿಸಲಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬಹಿರಂಗ ಬಳಿಕ ಮೊದಲ ಬಾರಿ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಗೆ ಬರಲಿದ್ದಾರೆ. ಸಿಎಂ ಬಿಎಸ್‌ವೈ ಜೊತೆ ಬೆಳಗಾವಿಗೆ ಬಾಲಚಂದ್ರ ಜಾರಕಿಹೊಳಿಯವರು ಕೂಡ ಬರುವ ಸಾಧ್ಯತೆ ಇದೆ. ಇನ್ನು ಮಂಗಳಾ ಅಂಗಡಿ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಬಿಎಸ್‌ವೈ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಡಿಸಿಎಂ ಗೋವಿಂದ ಕಾರಜೋಳ, ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಸಂಸದರು ಭಾಗಿಯಾಗುವ ಸಾಧ್ಯತೆ ಇದೆ.
ಮಧ್ಯಾಹ್ನ 1.30ಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸಮ್ಮುಖದಲ್ಲಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ. ಮಂಗಳಾ ಅಂಗಡಿ ನಾಮಪತ್ರ ಸಲ್ಲಿಕೆ ಮುನ್ನ ಟೆಂಪಲ್ ರನ್ ನಡೆಸಲಿದ್ದಾರೆ. ಮಾರುತಿ ದೇವಸ್ಥಾನ, ಗಣಪತಿ ದೇವಸ್ಥಾನ ಸೇರಿ ವಿವಿಧ ದೇಗುಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ನಗರದ ಸರ್ದಾರ್ ಮೈದಾನಕ್ಕೆ ಬೆಳಗ್ಗೆ 10.30ಕ್ಕೆ ಆಗಮಿಸಿ ಅಲ್ಲಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಇದನ್ನೂ ಓದಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್: ದಿ.ಸುರೇಶ್ ಅಂಗಡಿ ಪತ್ನಿಗೆ ಬಿಜೆಪಿ ಟಿಕೆಟ್
Published On - 9:06 am, Tue, 30 March 21