ಬೆಂಗಳೂರು: ಕಳೆದ ಮೂರು ದಿನಗಳಿಂದ ಮುಷ್ಕರ ನಡೆಸುತ್ತಿರುವ ಬಸ್ ಸಿಬ್ಬಂದಿಗಳ 6ನೇ ವೇತನ ಜಾರಿ ಮಾಡಬೇಕು ಎಂಬ ಬೇಡಿಕೆಯನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಖಡಾಖಂಡಿತವಾಗಿ ಹೇಳಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಇಂತಹ ಬೇಡಿಕೆಗಳನ್ನು ಈಡೇರಿಸಲು ಅನುವು ಮಾಡಿಕೊಡುತ್ತಿಲ್ಲ ಎಂಬ ಅರ್ಥದಲ್ಲಿ ಅವರು ಟ್ವೀಟ್ ಮಾಡಿದ್ದಾರೆ. ರಾಜ್ಯದ ಒಟ್ಟು ಆದಾಯದ ಶೇ 85 ರಷ್ಟು ಪಾಲು ವೇತನ, ಭತ್ಯೆ, ಪಿಂಚಣಿ ಮತ್ತಿತರ ಯೋಜನೇತರ ವೆಚ್ಚಗಳಿಗೆ ವ್ಯಯವಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಲ್ಪ ಆದಾಯವಷ್ಟೇ ಲಭ್ಯವಿದೆ. ಬಜೆಟ್ ಅಧಿವೇಶನದಲ್ಲಿ ವಿಪಕ್ಷ ನಾಯಕರು ಪ್ರಸ್ತಾಪಿಸಿದಂತೆ, ಯೋಜನೇತರ ವೆಚ್ಚ ಈಗಾಗಲೇ ಅಧಿಕವಾಗಿದೆ ಎಂದು ಅವರು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಸಕ್ತ ಸಂದರ್ಭಗಳಲ್ಲಿ ಮತ್ತಷ್ಟು ಹೆಚ್ಚು ಅನುದಾನವನ್ನು ಯೋಜನೇತರ ವೆಚ್ಚಗಳಿಗೆ ಒದಗಿಸಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸಾರಿಗೆ ನೌಕರರ ಹಿತರಕ್ಷಣೆ ದೃಷ್ಟಿಯಿಂದ ಅವರಿಗೆ ವೇತನ ನೀಡಲು, ಸರ್ಕಾರ 2,300 ಕೋಟಿ ರೂ. ಗಳ ಅನುದಾನ ನೀಡಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ತಿಳಿಸಿದ್ದಾರೆ. ಅವರ ಟ್ವೀಟ್ ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಕನ್ನಡಿ ಹಿಡಿದಂತಿದೆ ಎಂಬ ಮಾತುಗಳು ಕೇಳಿಬಂದಿವೆ.
’ರಾಜ್ಯದ ಒಟ್ಟು ಆದಾಯದ ಶೇ. 85 ರಷ್ಟು, ವೇತನ, ಭತ್ಯೆ, ಪಿಂಚಣಿ ಮತ್ತಿತರ ಯೋಜನೇತರ ವೆಚ್ಚಗಳಿಗೆ ವ್ಯಯವಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಲ್ಪ ಆದಾಯ ಲಭ್ಯವಿರುತ್ತದೆ. ಬಜೆಟ್ ಅಧಿವೇಶನದಲ್ಲಿ ವಿಪಕ್ಷ ನಾಯಕರು ಪ್ರಸ್ತಾಪಿಸಿದ್ದಂತೆ, ಯೋಜನೇತರ ವೆಚ್ಚ ಈಗಾಗಲೇ ಅಧಿಕವಾಗಿದೆ.’ (1/3)
— CM of Karnataka (@CMofKarnataka) April 9, 2021
ಇಂತಹ ಸವಾಲಿನ ಸಂದರ್ಭಗಳಲ್ಲಿಯೂ ಸಹ ಸಾರಿಗೆ ಸಂಸ್ಥೆಗಳ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಗಾಗಲೇ ಈಡೇರಿಸಿದ್ದು, 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿರುವುದಿಲ್ಲ. ಆದ್ದರಿಂದ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಸಾರಿಗೆ ಸಿಬ್ಬಂದಿಗಳಿಗೆ ಮನವಿ ಮಾಡಿದ್ದಾರೆ.
‘ಪ್ರಸಕ್ತ ಸಂದರ್ಭಗಳಲ್ಲಿ ಮತ್ತಷ್ಟು ಹೆಚ್ಚು ಅನುದಾನವನ್ನು ಯೋಜನೇತರ ವೆಚ್ಚಗಳಿಗೆ ಒದಗಿಸಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸಾರಿಗೆ ನೌಕರರ ಹಿತರಕ್ಷಣೆ ದೃಷ್ಟಿಯಿಂದ ಅವರಿಗೆ ವೇತನ ನೀಡಲು, ಸರ್ಕಾರ 2,300 ಕೋಟಿ ರೂ. ಗಳ ಅನುದಾನ ನೀಡಿದೆ.’ (2/3)
— CM of Karnataka (@CMofKarnataka) April 9, 2021
‘ಸವಾಲಿನ ಸಂದರ್ಭಗಳಲ್ಲಿಯೂ ಸಹ ಸಾರಿಗೆ ಸಂಸ್ಥೆಗಳ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಗಾಗಲೇ ಈಡೇರಿಸಿದ್ದು, 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿರುವುದಿಲ್ಲ. ಆದ್ದರಿಂದ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ’ : ಮುಖ್ಯಮಂತ್ರಿ @BSYBJP. (3/3)
— CM of Karnataka (@CMofKarnataka) April 9, 2021
ಮೂರನೇ ದಿನಕ್ಕೆ ಕಾಲಿಟ್ಟಿದೆ ಸಾರಿಗೆ ಸಿಬ್ಬಂದಿಗಳ ಮುಷ್ಕರ
ಕೆಎಸ್ಆರ್ಟಿಸಿ, ಬಿಎಂಟಿಸಿ ಸಾರಿಗೆ ನೌಕರರು ಮತ್ತು ರಾಜ್ಯ ಸರ್ಕಾರದ ನಡುವಿನ ಮನಸ್ತಾಪದ ತಾಪ ಜನಸಾಮಾನ್ಯರ ಮೇಲೆ ಪರಿಣಾಮ ಬೀರುತ್ತಿದೆ. ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರಿ ಬಸ್ಗಳನ್ನೇ ನೆಚ್ಚಿಕೊಂಡು ಪ್ರತಿನಿತ್ಯ ಪ್ರಯಾಣಿಸುತ್ತಿದ್ದ ಲಕ್ಷಾಂತರ ಮಂದಿ ಸಾರಿಗೆ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ. ಮೂರನೇ ದಿನವಾದ ಇಂದು ಕೂಡಾ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗದೇ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಆದರೆ, ಸರ್ಕಾರ ಹಾಗೂ ಸಾರಿಗೆ ನೌಕರರ ಕಿತ್ತಾಟದಲ್ಲಿ ಜನಸಾಮಾನ್ಯ ಏಟು ತಿನ್ನುವಂತಾಗಿದ್ದು, ಖಾಸಗಿ ವಾಹನಗಳಿಗೆ ಹೆಚ್ಚಿನ ಹಣ ಕೊಟ್ಟು ಹೋಗುವ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದನ್ನೂ ಓದಿ: ಪ್ರತಿದಿನ 1 ಲಕ್ಷ ಜನರಿಗೆ ಕೊವಿಡ್ ಟೆಸ್ಟ್ ಮಾಡುತ್ತೇವೆ; ಆರೋಗ್ಯ ಸಚಿವ ಡಾ ಸುಧಾಕರ್
ಮುಷ್ಕರ ಕೈ ಬಿಡಿ ಇಲ್ಲವಾದ್ರೆ ಮನೆ ಖಾಲಿ ಮಾಡಿ: ಸಾರಿಗೆ ಸಿಬ್ಬಂದಿಗೆ ಹಿರಿಯ ಅಧಿಕಾರಿಗಳಿಂದ ನೋಟಿಸ್
(CM BS Yediyurappa tweets 85 percent income of Karnataka state govt will go for govt. Employees allowance)
Published On - 3:20 pm, Fri, 9 April 21