Karnataka Lockdown: ಲಾಕ್​ಡೌನ್ ಮಾರ್ಗಸೂಚಿಗೆ ಕ್ಷಣಗಣನೆ: ಶೀಘ್ರದಲ್ಲೇ ಮುಖ್ಯಮಂತ್ರಿಯಿಂದ ವಿವರ ಪ್ರಕಟ

Karnataka Lockdown News: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸುದ್ದಿಗೋಷ್ಠಿ ನಡೆಸಿ ಕರ್ನಾಟಕದಲ್ಲಿ ಲಾಕ್​ಡೌನ್ ಹೇಗಿರಲಿದೆ ಎಂಬುದನ್ನು ವಿವರಿಸಿಲಿದ್ದಾರೆ.

Karnataka Lockdown: ಲಾಕ್​ಡೌನ್ ಮಾರ್ಗಸೂಚಿಗೆ ಕ್ಷಣಗಣನೆ: ಶೀಘ್ರದಲ್ಲೇ ಮುಖ್ಯಮಂತ್ರಿಯಿಂದ ವಿವರ ಪ್ರಕಟ
ಡಿಸಿಎಂ ಅಶ್ವತ್ಥನಾರಾಯಣ
Follow us
guruganesh bhat
|

Updated on:May 07, 2021 | 6:26 PM

ಬೆಂಗಳೂರು: ಇನ್ನೇನು ಕೆಲವೇ ಹೊತ್ತಿನಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆಯಾಗಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾರ್ಗಸೂಚಿ ಪ್ರಕಟಿಸಲಿದ್ದಾರೆ ಎಂದು ವಿಧಾನಸೌಧದಲ್ಲಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದರು. ಸಿಎಂ ಯಡಿಯೂರಪ್ಪ ಎಲ್ಲಾ ಸಚಿವರ ಅಭಿಪ್ರಾಯ ಪಡೆದಿದ್ದಾರೆ. ಅವರೇ ಲಾಕ್​ಡೌನ್ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಏನೆಲ್ಲ ಸುಧಾರಣೆ ಮಾಡಬೇಕು ಎಂಬುದರ ಬಗ್ಗೆ ಚರ್ಚಿಸಿದ್ದೇವೆ ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸುದ್ದಿಗೋಷ್ಠಿ ನಡೆಸಿ ಕರ್ನಾಟಕದಲ್ಲಿ ಲಾಕ್​ಡೌನ್ ಹೇಗಿರಲಿದೆ ಎಂಬುದನ್ನು ವಿವರಿಸಿಲಿದ್ದಾರೆ. ಸುದ್ದಿಗೋಷ್ಠಿಗೆ ಇನ್ನೇನು ಕೆಲವೇ ಕ್ಷಣಗಳಿವೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಲಾಕ್​ಡೌನ್ ಮಾರ್ಗಸೂಚಿ ಸಮೇತ ಸಿಎಂ ಯಡಿಯೂರಪ್ಪ ಅವರ ಮನೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮತ್ತು ಹಿರಿಯ ಅಧಿಕಾರಿಗಳು ಆಗಮಿಸಿದ್ದಾರೆ. ಇನ್ನೇನು ಕೆಲ ಹೊತ್ತಿನಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಲಾಕ್​ಡೌನ ಮತ್ತು ನಿಯಮಾವಳಿ ಪ್ರಕಟಿಸುವ ಸಾಧ್ಯತೆಗಳು ಹೆಚ್ಚಿವೆ.

ಆಕ್ಸಿಜನ್ ಪ್ರಮಾಣ 90ರಷ್ಟು ಕಡಿಮೆ ಇದ್ದರೆ ಮಾತ್ರ ಆಸ್ಪತ್ರೆಗೆ ದಾಖಲು ಮಾಡಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ತಕ್ಷಣ ಅವರನ್ನು ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಗುಣಮಟ್ಟದ ಚಿಕಿತ್ಸೆ ನೀಡದಿರುವ ಬಗ್ಗೆ ದೂರುಗಳು ಬರುತ್ತಿವೆ. ಗುಣಮಟ್ಟದ ಚಿಕಿತ್ಸೆ ನೀಡಲು ಮಾನಿಟರಿಂಗ್, ಆಡಿಟ್ ಮಾಡಲು ಸೂಚನೆ ನೀಡಲಾಗಿದೆ. ರಿಮೋಟ್ ಐಸಿಯೂ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಾವಿನ ಪ್ರಮಾಣ ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಮನೆಯಲ್ಲಿ ಐಸೋಲೇಷನ್ ಇರುವವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಪ್ರಾಥಮಿಕ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ನಡೆಸಲು ಸೂಚನೆ ನೀಡಿದ್ದೇವೆ ಎಂದ ಅವರು, ಕರೊನಾ ಸೋಂಕಿತರಿಗೆ ಪದೇ ಪದೇ ಸಿ.ಟಿ.ಸ್ಕ್ಯಾನ್ ಮಾಡುವುದರಿಂದ ಕ್ಯಾನ್ಸರ್ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿರುವ ಏಮ್ಸ್ ನಿರ್ದೇಶಕರ ವಿಚಾರವನ್ನೂ ಪ್ರಸ್ತಾಪಿಸಿದರು. ಆರ್​ಟಿಪಿಸಿಆರ್ ನೆಗೆಟಿವ್ ಬಂದವರಿಗೆ ಸಿ.ಟಿ.ಸ್ಕ್ಯಾನ್ ಮಾಡಲಾಗುತ್ತಿದೆ. ಸಿ.ಟಿ. ಸ್ಕ್ಯಾನ್ ಬದಲು ರಕ್ತ ಪರೀಕ್ಷೆ ಕೂಡ ಮಾಡಬಹುದು. ಅದರಿಂದಲೂ ವರದಿ ಪಡೆಯಬಹುದು. ಕೇಂದ್ 2 ಲಕ್ಷ 62 ಸಾವಿರ ರೆಮ್​ಡೆಸಿವಿರ್ ಲಸಿಕೆಯನ್ನು ಕರ್ನಾಟಕಕ್ಕೆ ನೀಡಿದೆ. ಈ ಲೆಕ್ಕದಲ್ಲಿ ಪ್ರತಿದಿನ 37 ಸಾವಿರ ಡೋಸ್ ಸಿಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: Shankanada Aravind: ಕನ್ನಡದ ಹಿರಿಯ ನಟ ಶಂಖನಾದ ಅರವಿಂದ್​​ ಕೊವಿಡ್​ಗೆ ಬಲಿ

ಬಳ್ಳಾರಿಯ ವಿವಿಯಿಂದ ಕೊವಿಡ್ ಕೇರ್ ಸೆಂಟರ್; ಕೊರೊನಾ ಸೋಂಕಿತರ ನೆರವಿಗೆ ನಿಂತ ವಿಶ್ವವಿದ್ಯಾಲಯ

(CM BS Yediyurappa will announce lockdown soon says DCM Dr Ashwath Narayan)

Published On - 6:15 pm, Fri, 7 May 21

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ