ಕೋವಿಡ್ ನಿಯಂತ್ರಣ ಬಗ್ಗೆ ಪ್ರಧಾನಿ ಮೋದಿಗೆ ‘ಪಾಸಿಟೀವ್’ ವಿವರಣೆ ನೀಡಿದ ಯಡಿಯೂರಪ್ಪ
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಮಂಗಳಾರದಿಂದಲೇ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರದಾನಿ ಮೋದಿ ಕೋವಿಡ್-19 ಕುರಿತ ಸಂವಾದ ನಡೆಸುತ್ತಿದ್ದಾರೆ. ಇದರಂಗವಾಗಿ ಇಂದು ಸಿಎಂ ಬಿಎಸ್‌ವೈ ಪ್ರಧಾನಿಯೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೈಗೊಂಡ ಕ್ರಮಗಳ ಕುರಿತು ವಿವರಣೆ ನೀಡಿದ್ರು. 5 ಟಿ ತತ್ವದ ಕುರಿತು ಪ್ರಧಾನಿಗೆ ಬಿಎಸ್‌ವೈ ವಿವರಣೆ ಮುಖ್ಯಂತ್ರಿಗಳು ಪ್ರಧಾನಿಯೊಂದಿಗೆ ಹಂಚಿಕೊಂಡ ವಿವರಗಳಲ್ಲಿ, ಕೋವಿಡ್ 19 ನಿಯಂತ್ರಣಕ್ಕೆ ಕೈಗೊಂಡಿರುವ 5 ಟಿ ತತ್ವ ಪ್ರಮುಖವಾಗಿತ್ತು. […]
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಮಂಗಳಾರದಿಂದಲೇ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರದಾನಿ ಮೋದಿ ಕೋವಿಡ್-19 ಕುರಿತ ಸಂವಾದ ನಡೆಸುತ್ತಿದ್ದಾರೆ. ಇದರಂಗವಾಗಿ ಇಂದು ಸಿಎಂ ಬಿಎಸ್‌ವೈ ಪ್ರಧಾನಿಯೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೈಗೊಂಡ ಕ್ರಮಗಳ ಕುರಿತು ವಿವರಣೆ ನೀಡಿದ್ರು.
5 ಟಿ ತತ್ವದ ಕುರಿತು ಪ್ರಧಾನಿಗೆ ಬಿಎಸ್‌ವೈ ವಿವರಣೆ ಮುಖ್ಯಂತ್ರಿಗಳು ಪ್ರಧಾನಿಯೊಂದಿಗೆ ಹಂಚಿಕೊಂಡ ವಿವರಗಳಲ್ಲಿ, ಕೋವಿಡ್ 19 ನಿಯಂತ್ರಣಕ್ಕೆ ಕೈಗೊಂಡಿರುವ 5 ಟಿ ತತ್ವ ಪ್ರಮುಖವಾಗಿತ್ತು. ನಿರಂತರವಾಗಿ ಸೋಂಕಿತರು ಮತ್ತು ಸಂಪರ್ಕಿತರನ್ನು ಪತ್ತೆ ಹಚ್ಚಿ, ಅವರಿಗೆ ಪರೀಕ್ಷೆ ನಡೆಸಿ, ಚಿಕಿತ್ಸೆ ನೀಡುವುದರೊಂದಿಗೆ ತಂತ್ರಜ್ಞಾನದ ಸದ್ಬಳಕೆಯನ್ನ ಹೇಗೆ ಮಾಡಿಕೊಳ್ಳಲಾಗಿದೆ ಎನ್ನೋದನ್ನ ವಿವರಿಸಿದರು.
ಫೀವರ್ ಕ್ಲಿನಿಕ್‌ಗಳ ಕುರಿತು ಮಾಹಿತಿ ಪ್ರಸ್ತುತ ರಾಜ್ಯದಲ್ಲಿ ಒಂದು ಲಕ್ಷ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ. ಇದನ್ನು 2 ಲಕ್ಷಕ್ಕೆ ಹೆಚ್ಚಿಸಲು ಅಗತ್ಯ ಕ್ರಮಗಳನ್ನ ಕೈಗೊಳ್ಳಾಗುತ್ತಿದೆ. 673 ಫೀವರ್ ಕ್ಲಿನಿಕ್ ಗಳನ್ನು ಸ್ಥಾಪಿಸುವ ಮೂಲಕ ಆಸ್ಪತ್ರೆಗಳು ಸೋಂಕು ಹರಡುವ ತಾಣವಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂಬುದರ ಕುರಿತು ಮೋದಿಗೆ ಬಿಎಸ್‌ವೈ ವಿವರಿಸಿದರು.
1.68 ಕೋಟಿ ಕುಟುಂಬಗಳಲ್ಲಿ 1.5 ಕೋಟಿ ಕುಟುಂಬಗಳ ಸಮೀಕ್ಷೆ ನಡೆಸಿದ್ದು, ಕೋವಿಡ್ ಸೋಂಕಿನಿಂದ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವ ವ್ಯಕ್ತಿಗಳ ಮಾಹಿತಿಯನ್ನು ದಾಖಲಿಸಲಾಗಿದೆ. ಇದರಿಂದ ಮುನ್ನೆಚ್ಚರಿಕೆ ವಹಿಸಲು ಹಾಗೂ ಇಂತಹ ವ್ಯಕ್ತಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಪ್ರಧಾನಿಗೆ ವಿವರಿಸಿದರು.
ಪ್ರಯೋಗಾಲಯಗಳ ಹೆಚ್ಚಳ ಕುರಿತು ವಿವರಣೆ ಸೋಂಕು ಪರೀಕ್ಷೆ ನಡೆಸುವ ಪ್ರಯೋಗಾಲಯಗಳ ಸಂಖ್ಯೆಗಳನ್ನ 72ಕ್ಕೆ ಹೆಚ್ಚಿಸಿದ್ದು, ಪರೀಕ್ಷಾ ಸಾಮರ್ಥ್ಯವನ್ನ ದಿನವೊಂದಕ್ಕೆ 15 ಸಾವಿರಕ್ಕೆ ಏರಿಸಲಾಗಿದೆ. ಪ್ರತಿ ದಶಲಕ್ಷ ಜನಸಂಖ್ಯೆಗೆ ರಾಜ್ಯದಲ್ಲಿ 7,500 ಪರೀಕ್ಷೆ ನಡೆಸಲಾಗುತ್ತಿದ್ದು, ಶೇ. 1.6 ರಷ್ಟು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಹಾಗೇನೇ ದೈನಂದಿನ ಬೆಳವಣಿಗೆ ದರ ಶೇಕಡಾ 3.6 ರಷ್ಟಿದೆ ಎಂದು ರಾಜ್ಯದ ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳನ್ನ ತಿಳಿಸಿದರು.
ವಾರ್ ರೂಮ್ ಕುರಿತು ಪ್ರಧಾನಿಗೆ ಮಾಹಿತಿ ವಾರ್ ರೂಂ ಸ್ಥಾಪನೆಯ ಮೂಲಕ ಸೋಂಕು ನಿಯಂತ್ರಣ ಪ್ರಕ್ರಿಯೆಯ ಮೇಲೆ ನಿರಂತರ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಎಲ್ಲ ಭಾಗಗಳಲ್ಲಿಯೂ ಕೋವಿಡ್ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಟೆಲಿ ಐಸಿಯು ವ್ಯವಸ್ಥೆ ರೂಪಿಸಲಾಗಿದೆ. ರಾಜ್ಯದ ತಜ್ಞ ವೈದ್ಯರು ರಾಜ್ಯದ ವಿವಿಧ ಭಾಗಗಳಲ್ಲಿನ ಸೋಂಕಿತರಿಗೆ ನಿರಂತರ ಸಂಪರ್ಕದಲ್ಲಿದ್ದು, ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಲಾಗುತ್ತಿದ್ದಾರೆ ಎಂದು ರಾಜ್ಯದ ಕೋವಿಡ್ ನಿಯಂತ್ರಣ ಮತ್ತು ನಿರ್ವಹಣೆಯ ಕುರಿತು ಪ್ರಧಾನಿಗೆ ಬಿಎಸ್‌ವೈ ವಿಡಿಯೋ ಕಾನ್ಫರೆನ್ಸ್‌ನಲ್ಲಿ ವಿವರಿಸಿದರು.
ವೀರ ಯೋಧರಿಗೆ ಮೌನ ಶ್ರದ್ಧಾಂಜಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಹ ಭಾಗವಹಿಸಿದ್ದರು. ವೀಡಿಯೋ ಕಾನ್ಫರೆನ್ಸ್ ಪ್ರಾರಂಭದಲ್ಲಿ ಲಡಾಖ್ ಭಾಗದಲ್ಲಿ ವೀರ ಮರಣವನ್ನಪ್ಪಿದ ವೀರ ಯೋಧರಿಗೆ 2 ನಿಮಿಷ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
Published On - 6:43 pm, Wed, 17 June 20