ವಿಜ್ಞಾನಿ ಕಸ್ತೂರಿರಂಗನ್‌ಗೆ ಮೈಸೂರು ಪೇಟ ತೊಡಿಸಿ, ಅಭಿನಂದಿಸಿದ ಸಿಎಂ ಬಿಎಸ್‌ವೈ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷರಾದ ಹಿರಿಯ ವಿಜ್ಞಾನಿ ಕಸ್ತೂರಿರಂಗನ್ ಅವರನ್ನು ಭೇಟಿಯಾಗಿ‌ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಅಭಿನಂದನೆ ಸಲ್ಲಿಸಿದರು. ಇಂದು ಬೆಂಗಳೂರಿನಲ್ಲಿ ಕಸ್ತೂರಿರಂಗನ್‌ ಅವರ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಯಡಿಯೂರಪ್ಪ, ಕಸ್ತೂರಿರಂಗನ್ ಅವರಿಗೆ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿದರಲ್ಲದೇ ಹೂಮಾಲೆ ಹಾಕಿ ಸನ್ಮಾನಿಸುವ ಮೂಲಕ ನೂತನ ರಾಷ್ಟ್ರೀಯ ಶಿಕ್ಷಣ ಕರಡು ನೀತಿ ರೂಪಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿಎಂ ಬಿಎಸ್‌ವೈ ಅವರ ಜೊತೆ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ […]

ವಿಜ್ಞಾನಿ ಕಸ್ತೂರಿರಂಗನ್‌ಗೆ ಮೈಸೂರು ಪೇಟ ತೊಡಿಸಿ, ಅಭಿನಂದಿಸಿದ ಸಿಎಂ ಬಿಎಸ್‌ವೈ
Updated By: ಸಾಧು ಶ್ರೀನಾಥ್​

Updated on: Jul 31, 2020 | 6:20 PM

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷರಾದ ಹಿರಿಯ ವಿಜ್ಞಾನಿ ಕಸ್ತೂರಿರಂಗನ್ ಅವರನ್ನು ಭೇಟಿಯಾಗಿ‌ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಅಭಿನಂದನೆ ಸಲ್ಲಿಸಿದರು.

ಇಂದು ಬೆಂಗಳೂರಿನಲ್ಲಿ ಕಸ್ತೂರಿರಂಗನ್‌ ಅವರ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಯಡಿಯೂರಪ್ಪ, ಕಸ್ತೂರಿರಂಗನ್ ಅವರಿಗೆ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿದರಲ್ಲದೇ ಹೂಮಾಲೆ ಹಾಕಿ ಸನ್ಮಾನಿಸುವ ಮೂಲಕ ನೂತನ ರಾಷ್ಟ್ರೀಯ ಶಿಕ್ಷಣ ಕರಡು ನೀತಿ ರೂಪಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿಎಂ ಬಿಎಸ್‌ವೈ ಅವರ ಜೊತೆ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಮತ್ತು ವಿಧಾನಪರಿಷತ್ ಸದಸ್ಯ ರವಿಕುಮಾರ್ ಉಪಸ್ಥಿತರಿದ್ದರು.