AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಂದೇ ಮಾತರಂ’ ಗೀತೆ ಬಗ್ಗೆ ತಮ್ಮ ಪಕ್ಷದ ನಿಲುವು ಸ್ಪಷ್ಟಪಡಿಸಿದ ಸಿಎಂ, ಕೆಪಿಸಿಸಿ ಅಧ್ಯಕ್ಷ

ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ ಅಧಿಕೃತ ಸರ್ಕಾರಿ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ 'ವಂದೇ ಮಾತರಂ' ಗೀತೆಯನ್ನು ಹಾಡುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಈ ನಿಯಮದ ಪ್ರಕಾರ, ಕಾರ್ಯಕ್ರಮಗಳಲ್ಲಿ ಏಕರೂಪತೆ ಮತ್ತು ಗೌರವ ಕಾಪಾಡಲು ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂದು ಆದೇಶಿಸಿದ್ದು, ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಈ ಸಿಎಂ ಡಿಕೆ ಶಿವಕುಮಾರ್ ತಮ್ಮ ಪಕ್ಷದ ನಿಲುವು ಸ್ಪಷ್ಟಪಡಿಸಿದ್ದಾರೆ.

‘ವಂದೇ ಮಾತರಂ’ ಗೀತೆ ಬಗ್ಗೆ ತಮ್ಮ ಪಕ್ಷದ ನಿಲುವು ಸ್ಪಷ್ಟಪಡಿಸಿದ ಸಿಎಂ, ಕೆಪಿಸಿಸಿ ಅಧ್ಯಕ್ಷ
Bk Hariprasad And Dk Shivakumar
ರಮೇಶ್ ಬಿ. ಜವಳಗೇರಾ
|

Updated on: Sep 11, 2026 | 3:40 PM

Share

ಬೆಂಗಳೂರು, (ಸೆಪ್ಟೆಂಬರ್ 11):‘ವಂದೇ ಮಾತರಂ’ಗೀತೆಯನ್ನು ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ರಾಜ್ಯ ಸರ್ಕಾರದ ಆದೇಶಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಇದಕ್ಕೆ ಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಪ್ರತಿಕ್ರಿಯೆ ತಮ್ಮ ಪಕ್ಷದ ನಿಲುವು ಸ್ಪಷ್ಟಪಡಿಸಿದ್ದಾರೆ. ಇಂದು (ಸೆ.11) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ‘ವಂದೇ ಮಾತರಂ’ ವಿಚಾರದಲ್ಲಿ ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ನಾವೇ ರಾಷ್ಟ್ರಗೀತೆ ತಂದವರು, ಅವರು (ಬಿಜೆಪಿ) ರಾಜಕೀಯ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಪ್ರತಿಕ್ರಿಯಿಸಿದ್ದು, ನಮ್ಮನ್ನು ಜೈಲಿಗೆ ಕಳುಹಿಸಲಿ, ನಮ್ಮನ್ನು ಗಲ್ಲಿಗೆ ಹಾಕಲಿ, ನಾವು ಹೇಳೋದು ವಂದೇ ಮಾತರಂ ಎರಡೇ ಪ್ಯಾರಾ. ಅದು ಈ ದೇಶದ ಏಕತೆಗಾಗಿ ಮಾಡಿರುವ ನಿರ್ಧಾರ. ಸ್ವಾತಂತ್ರ್ಯ ಹೋರಾಟದ ಘೋಷಣೆ ಅದು. ಬ್ರಿಟಿಷರ ಬೂಟು ನೆಕ್ಕುವವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕೇಂದ್ರಕ್ಕೆ ಸೆಡ್ಡು: ವಂದೇ ಮಾತರಂ ಗೀತೆ ಗಾಯನದ ಬಗ್ಗೆ ಕರ್ನಾಟಕ ಸರ್ಕಾರದಿಂದ ಮಹತ್ವದ ಆದೇಶ

ಬೇಕಿದ್ದರೆ ಚಡ್ಡಿ ಹಾಕಿಕೊಂಡು ತಲೆಗೆ ಟೋಪಿ ಹಾಕಿಕೊಂಡು. ದೊಣ್ಣೆ ಹಿಡಿದುಕೊಂಡು ಶಾಖೆಯಲ್ಲಿ ರಾಷ್ಟ್ರಗೀತೆ ಹಾಡಲಿ. ಇವರು ಒಂದೇ ಒಂದು ದಿನ ಜನಗಣಮನ ಹೇಳಲ್ಲ. ಇವರು ಒಂದೇ ಒಂದು ದಿನ ಗಾಂಧಿ ಹೆಸರೂ ಹೇಳಲ್ಲ. ಇವರಿಗೆ ವಂದೇ ಮಾತರಂ ಬಗ್ಗೆ ಮಾತಾಡುವ ಯೋಗ್ಯತೆ ಇಲ್ಲ. ಈ ವಿಚಾರವಾಗಿ ಚರ್ಚೆಗೆ ಬರೋದಾದರೆ ಬರಲಿ. ಇವರು ಬ್ರಿಟಿಷ್‌ ಏಜೆಂಟ್​ಗಳಾಗಿ ಗುಲಾಮರಾಗಿದ್ದರು. ಇವರು ಹೇಗೆ ಅವರ ಬೂಟು ನೆಕ್ತಿದ್ರು ಅಂತ ಹೇಳುತ್ತೇವೆ ಎಂದು ಕಿಡಿಕಾರಿದರು.

ಮೊದಲ ಎರಡು ಚರಣಗಳ ಗಾಯನ!

ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಈ ಮೂಲಕ ಆದೇಶಿಸಲಾಗಿದೆ. ವಿನಾಯಿತಿಗಳು: ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಮಾನ್ಯ ರಾಷ್ಟ್ರಪತಿಗಳು, ಉಪರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಅಧಿಕೃತ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಉಳಿದೆಲ್ಲಾ ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಈ ನಿಯಮ ಅನ್ವಯವಾಗುತ್ತದೆ. ವಿವಿಐಪಿಗಳು ಭಾಗವಹಿಸುವ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರದ ನಿಗದಿತ ಶಿಷ್ಟಾಚಾರಗಳು ಅನ್ವಯವಾಗಲಿವೆ ಎಂದು ರಾಜ್ಯ ಸರ್ಕಾರದ ಆದೇಶದಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ