ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು (ಜೂನ್ 03) ಪ್ರಮಾಣವಚನ ಸ್ವೀಕರಿಸಿದ್ದು, ಇವರ ಜೊತೆ ಓರ್ವ ಡಿಸಿಎಂ ಹಾಗೂ 12 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬಳಿಕ ಡಿಕೆ ಶಿವಕುಮಾರ್ ಅವರು ತಮ್ಮ ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ವೇಳೆ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಸಿಎಂ ಆದ ಬಳಿಕ ವಿದ್ಯಾರ್ಥಿಗಗಳಿಗೆ ಸೇರಿದಂತೆ ಆರು ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ.

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!
Dk Shivakumar

Updated on: Jun 03, 2026 | 9:04 PM

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar)  ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ ಸೇರಿದಂತೆ ಪ್ರಮುಖ ಆರು ಮಹತ್ವದ  ಘೋಷಣೆಗಳನ್ನ ಮಾಡಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಉದ್ಯೋಗದ ಸಮಸ್ಯೆ ನಿವಾರಣೆ, ರಸ್ತೆಗಳ ನಿರ್ಮಾಣಕ್ಕೆ 2000 ಕೋಟಿ ರೂ. ಹಾಗೂ 2,500 ಚ.ಅಡಿ ವಿಸ್ತೀರ್ಣ ಕಟ್ಟಡಕ್ಕೆ ಅರ್ಜಿ ಹಾಕಿದವರಿಗೆ ರಿಲೀಫ್ ನೀಡಿದ್ದಾರೆ. ಇನ್ನು ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ ಮಾಡುವುದಾಗಿ ಡಿಕೆಶಿ ಘೋಷಣೆ ಮಾಡಿದರು.

ಡಿಕೆಶಿಯ ಮೊದಲ ಘೋಷಣೆಗಳು

  • ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
  • ರಸ್ತೆಗಳ ನಿರ್ಮಾಣಕ್ಕೆ 2000 ಕೋಟಿ ರೂ. ಘೋಷಣೆ
  • 2,500 ಚದರ ಅಡಿವರೆಗೂ ಒಸಿ ವಿನಾಯಿತಿ. ಇದರೊಂದಿಗೆ 2,500 ಚ.ಅಡಿ ವಿಸ್ತೀರ್ಣ ಕಟ್ಟಡಕ್ಕೆ ಅರ್ಜಿ ಹಾಕಿದವರಿಗೆ ರಿಲೀಫ್.
  • ಪ್ರತಿ‌ ಪಂಚಾಯತ್ ಗೂ ಭಾರತ್ ಜೋಡೋ ಯುವಕ ಸಂಘ ಸ್ಥಾಪನೆಗೆ 10 ಸಾವಿರ ರೂಪಾಯಿ ಘೋಷಣೆ.
  • ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ private employment exchange centre ಸ್ಥಾಪನೆ.
  • ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ

ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಬಸ್​ ಪಾಸ್​ ನೀಡಲಾಗುವುದು ಎಂದು ಘೋಷಿಸಿದರು.  ಇದರೊಂದಿಗೆ ಬೇರೆ ಊರಿಗೆ ಹೋಗಿ ವ್ಯಾಸಂಗ ಮಾಡುವ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಇನ್ನು  ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ ಮಾಡುವುದಾಗಿ ಡಿಕೆಶಿ ಘೋಷಣೆ ಮಾಡಿದರು.

ಆ ಶುಭ ಗಳಿಗೆ, ಮುಹೂರ್ತ ಬಂತು

ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್ ಶುಭ ಗಳಿಗೆ, ಶುಭ ಮುಹೂರ್ತ ಬರುತ್ತೆ ಎಂದು ಹೇಳುತ್ತಿದ್ದ ಇವತ್ತು ಸಂಜೆ 4.15ಕ್ಕೆ ಆ ಶುಭ ಗಳಿಗೆ, ಮುಹೂರ್ತ ಬಂತು. ಇವತ್ತು ಹೊಸ ದಿನ, ಹೊಸ ಕೆಲಸ, ಅವಕಾಶ ಆರಂಭಿಸುವ ದಿನ. ಇನ್ನೆರಡು ವರ್ಷಗಳಲ್ಲಿ ಹೊಸ ಅವಕಾಶ ಹುಡುಕುತ್ತಿದ್ದೇನೆ. ರಾಜ್ಯ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತೇನೆ. ರೈತರು, ಕಾರ್ಮಿಕರು, ಎಲ್ಲ ವರ್ಗದ ಜನರಿಗೆ ಕಳೆದ 6 ತಿಂಗಳಿಂದ ಕಾರ್ಯಕ್ರಮಗಳನ್ನ ರೂಪಿಸಿದ್ದೇನೆ ಎಂದು ಹೇಳಿದರು. ಈ ಮೂಲಕ ಮಹತ್ವದ ಕಾರ್ಯಮಗಳ ಘೋಷಣೆ ಮಾಡುವ ಸುಳಿವು ನೀಡಿದರು.

,ರಾಜ್ಯದ ಜನ ನನ್ನ ಮೇಲೆ ಅಪಾರ ವಿಶ್ವಾಸ, ನಂಬಿಕೆ ಇಟ್ಟಿದ್ದಾರೆ. ಈ ಹಿಂದೆ ನನ್ನ ವಿರುದ್ಧ ಟೀಕೆಗಳು ಕೂಡ ಬಂದಿವೆ. ನನ್ನ ರಾಜಕೀಯ ಅನುಭವ ಬಳಸಿಕೊಂಡು ಕೆಲಸ ಮಾಡುತ್ತೇನೆ. ಅನೇಕ ರಾಜಕೀಯ ತಂತ್ರಗಳಿಗೂ ನಾನು ಸಿಲುಕಿದ್ದೇನೆ. ತಿಹಾರ್​ ಜೈಲಿಗೂ ಸಹ ಹೋಗಿ ಬಂದಿದ್ದೇನೆ ಎಂದರು.

ಈ ಸಿಎಂ ಕುರ್ಚಿ ನನ್ನದಲ್ಲ, ಇದು ನಾಡಿನ ಜನತೆಯದ್ದು. ಹೈಕಮಾಂಡ್​ ನಾಯಕರು ನನಗೆ ಈ ಅವಕಾಶವನ್ನ ಕೊಟ್ಟಿದ್ದಾರೆ. ಸ್ವಲ್ಪ ತಡವಾಯಿತು ಆದರೂ ಶುಭ ಗಳಿಗೆ ಬಂದಿದ್ದು, ಎಲ್ಲರೂ ಜೊತೆಗೆ ಸೇರಿ ಕೆಲಸ ಮಾಡುತ್ತೇವೆ. ನಾನು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟವನು ನಾನು. ನಮ್ಮ ಸಂಪುಟ ಸರ್ವ ಜನಾಂಗದ ಶಾಂತಿಯ ತೋಟ ಇದ್ದಂತೆ ಎಂದು ಹೇಳಿದರು.

ಎಲ್ಲವೂ ಕಲೆಕ್ಟಿವ್ ಡಿಸಿಷನ್ ಆಗಿರುತ್ತೆ

ಹೈಕಮಾಂಡ್ ಹೇಳಿದರೆ, ವರಿಷ್ಠರು ಹೇಳಿದರೆ ಐದು ನಿಮಿಷವೂ ಕಾಯಲ್ಲ ಎಂದು ಸಿದ್ದರಾಮಯ್ಯ ಹೇಳಿದ್ರು. ಅದರಂತೆ ವರಿಷ್ಠರು ಕೊಟ್ಟ ಸೂಚನೆ ಮೇರೆಗೆ ಅವರೂ ಸ್ಥಾನವನ್ನು ನನಗೆ ಬಿಟ್ಟು ಕೊಟ್ಟಿದ್ದಾರೆ. ಗ್ರಾಮೀಣ ಹಾಗೂ ನಗರದ ಜನರ ಸಮಸ್ಯೆ ನನಗೆ ಗೊತ್ತಿದೆ. ನಾನು ಎಲ್ಲ ಸಮಸ್ಯೆಗಳನ್ನು ಬಲ್ಲೆ. ಮುಂದೆ ಏನೇ ನಿರ್ಧಾರ ತೆಗೆದುಕೊಂಡರೂ ಅದು ನನ್ನ ನಿರ್ಧಾರ ಆಗಿರಲ್ಲ. ಬದಲಾಗಿ ನನ್ನ ಇಡೀ ಸಂಪುಟದ ನಿರ್ಧಾರ ಆಗಿರುತ್ತದೆ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇದೆ. ಎಲ್ಲವೂ ಕಲೆಕ್ಟಿವ್ ಡಿಸಿಷನ್ ಆಗಿರುತ್ತದೆ. ಇವತ್ತು 14 ಜನ ಕ್ಯಾಬಿನೆಟ್ ಗೆ ಸೇರಿದ್ದು, ಸರ್ವ ಜನಾಂಗದ ಶಾಂತಿಯ ತೋಟವನ್ನು ಕ್ಯಾಬಿನೆಟ್ ಬಿಂಬಿಸುತ್ತಿದೆ. ರಾಜ್ಯದಲ್ಲಿ ಉತ್ತಮ ಬಲಿಷ್ಟ ನಾಯಕತ್ವವನ್ನು ಕೊಟ್ಟು ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Published On - 8:34 pm, Wed, 3 June 26

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us