AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಿಎಂ ಕೊಟ್ಟ ಸೂಚನೆಗಳೇನು?

ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಿಎಂ ಕೊಟ್ಟ ಸೂಚನೆಗಳೇನು?

ರಮೇಶ್ ಬಿ. ಜವಳಗೇರಾ
|

Updated on: Jun 19, 2026 | 7:08 PM

Share

ವಿಧಾನಸೌಧದಲ್ಲಿಂದು (ಜೂನ್ 19) ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಹಿರಿಯ ಅಧಿಕಾರಿಗಳು ಹಾಗೂ ಸಚಿವರ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೂ ತೊಂದರೆಯಾಗಬಾರದು. ಆದರೆ, ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅನರ್ಹರಿಗೆ ಮಾತ್ರ ತಕ್ಷಣವೇ ಬ್ರೇಕ್ ಹಾಕಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬೆಂಗಳೂರು, (ಜೂನ್ 19): ವಿಧಾನಸೌಧದಲ್ಲಿಂದು (ಜೂನ್ 19) ನಡೆದ ಗ್ಯಾರಂಟಿ ಯೋಜನೆಗಳ (guarantee schemes) ಅನುಷ್ಠಾನದ ಹಿರಿಯ ಅಧಿಕಾರಿಗಳು ಹಾಗೂ ಸಚಿವರ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೂ ತೊಂದರೆಯಾಗಬಾರದು. ಆದರೆ, ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅನರ್ಹರಿಗೆ ಮಾತ್ರ ತಕ್ಷಣವೇ ಬ್ರೇಕ್ ಹಾಕಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮರಣ ಹೊಂದಿದ ಫಲಾನುಭವಿಗಳ ವಿವರಗಳು ಸಕಾಲದಲ್ಲಿ ಸಿಗದೇ ಇರುವುದರಿಂದ, ಮೃತಪಟ್ಟವರ ಖಾತೆಗಳಿಗೂ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವುದು ಪತ್ತೆಯಾಗಿದೆ. ಇನ್ನು ಮುಂದೆ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಿ ಇದಕ್ಕೆ ತಡೆ ಒಡ್ಡಲು ನಿರ್ಧರಿಸಲಾಗಿದೆ. ಗ್ಯಾರಂಟಿ ಯೋಜನೆಯ ಹಣ ಪಡೆಯುವ ಫಲಾನುಭವಿಗಳ ಬ್ಯಾಂಕ್ ಖಾತೆಗಳು ಕರ್ನಾಟಕ ರಾಜ್ಯದಲ್ಲೇ ಇರಬೇಕು. ಆದರೆ, ಬೇರೆ ರಾಜ್ಯಗಳ ಬ್ಯಾಂಕ್ ಖಾತೆಗಳಿಗೆ ಹಣ ಹೋಗುತ್ತಿರುವುದು ಪತ್ತೆಯಾಗಿದ್ದು, ಇತರೆ ರಾಜ್ಯಗಳ ಮತದಾರರು ಇದರ ಲಾಭ ಪಡೆಯುತ್ತಿರುವುದನ್ನು ತಡೆಯಲು ಸೂಚಿಸಿದ್ದಾರೆ. ಏರ್‌ಟೆಲ್ ಪೇಮೆಂಟ್ಸ್ ಬ್ಯಾಂಕ್‌ನಲ್ಲಿ ಯುಪಿಐ (UPI) ಖಾತೆಗಳನ್ನು ಸೃಷ್ಟಿಸಿ ಯೋಜನೆಯ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳನ್ನು ಸಹ ಅಧಿಕಾರಿಗಳು ಸಭೆಯ ಗಮನಕ್ಕೆ ತಂದಿದ್ದಾರೆ.

ಅನರ್ಹರನ್ನು ತಡೆಯುವಾಗ ನಿಜವಾದ ಬಡವರಿಗೆ ಸಮಸ್ಯೆಯಾಗಬಾರದು ಎಂದು ಸಿಎಂ ಡಿಕೆ ಶಿವಕುಮಾರ್‌ ಕೆಲವು ಪ್ರಮುಖ ನಿರ್ದೇಶನಗಳನ್ನು ನೀಡಿದ್ದಾರೆ. ಹಲವು ಫಲಾನುಭವಿಗಳು ಬ್ಯಾಂಕ್ ಸಾಲ ಪಡೆದಿದ್ದು, ಗೃಹಲಕ್ಷ್ಮಿ ಹಣ ಜಮೆಯಾದ ತಕ್ಷಣ ಬ್ಯಾಂಕಿನವರು ಅದನ್ನು ಸಾಲದ ಮೊತ್ತಕ್ಕೆ ಕಡಿತ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಫಲಾನುಭವಿಗಳು ತಮ್ಮ ಖಾತೆಗಳನ್ನು ಬದಲಾಯಿಸುತ್ತಿದ್ದು, ಅಂತಹ ಖಾತೆ ಬದಲಾವಣೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮೆಯಾದ ತಕ್ಷಣ ಫಲಾನುಭವಿಗಳಿಗೆ ವಾಯ್ಸ್ ಮೆಸೇಜ್ ಮೂಲಕ ಮಾಹಿತಿ ನೀಡುವ ತಂತ್ರಜ್ಞಾನ ತರಲು ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us