AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ, ಅಧಿಕಾರಿಗಳಿಗೆ ಕೊಟ್ಟ ಖಡಕ್ ಸೂಚನೆಗಳೇನು?

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಮರುದಿನವೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದ್ದಾರೆ. ಇಂದು (ಜೂನ್ 04) ವಿಧಾನಸೌಧದಲ್ಲಿ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳ ಸಭೆ ನಡೆಸಿದ ಡಿಕೆ ಶಿವಕುಮಾರ್, ತಮ್ಮ ಆಡಳಿತದ ವೈಖರಿ ಮತ್ತು ನೀತಿಗಳನ್ನು ಅಧಿಕಾರಿಗಳ ಮುಂದೆ ಎಳೆ ಎಳೆಯಾಗಿ ಬಿಚ್ಚಿಡುವ ಮೂಲಕ ಅದಕ್ಕೆ ತಕ್ಕಂತೆ ಜನಪರವಾದ ಕೆಲಸ ಮಾಡಬೇಕೆಂದು ತಮ್ಮದೇ ಶೈಲಿಯಲ್ಲಿ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನ ನೀಡಿದ್ದಾರೆ.

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ, ಅಧಿಕಾರಿಗಳಿಗೆ ಕೊಟ್ಟ ಖಡಕ್ ಸೂಚನೆಗಳೇನು?
Dk Shivakumar
ರಮೇಶ್ ಬಿ. ಜವಳಗೇರಾ
|

Updated on: Jun 04, 2026 | 3:32 PM

Share

ಬೆಂಗಳೂರು, (ಜೂನ್ 04): ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕ್ಷಣದಿಂದಲೂ ಡಿ.ಕೆ. ಶಿವಕುಮಾರ್ (DK Shivakumar) ಅವರ ಪ್ರತಿಯೊಂದು ನಡೆ ಹಾಗೂ ನಿರ್ಧಾರಗಳು ಭಾರೀ ಕುತೂಹಲ ಮೂಡಿಸುತ್ತಿವೆ. ರಾಜಕೀಯ ತಂತ್ರಗಾರಿಕೆಯಲ್ಲಿ ಸೈ ಎನಿಸಿಕೊಂಡಿರುವ ಡಿಕೆಶಿ, ಇದೀಗ ಒಂದೊಳ್ಳೆ ಆಡಳಿತ ನೀಡಲು ತಮ್ಮದೇ ನೀಲನಕ್ಷೆ ಹಾಕಿಕೊಂಡಿದ್ದು, ಅದಕ್ಕೆ ತಕ್ಕಂತೆ ಅಧಿಕಾರಿಗಳನ್ನು ಬಡಿದೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಸಿಎಂ ಆದ ಬಳಿಕೆ ಡಿಕೆ ಶಿವಕುಮಾರ್ ಅವರು ಇಂದು (ಜೂನ್ 04) ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳ ಸಭೆ ನಡೆಸುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಕಾನೂನು ಸುವವ್ಯಸ್ಥೆ ಹಾಗೂ ಭ್ರಷ್ಟಾಚಾರ ಬಗ್ಗೆ ಅಧಿಕಾರಿಗಳಿಗೆ ಖಡಕ್ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಪಾರದರ್ಶಕವಾಗಿ ಕೆಲಸ ಮಾಡುವಂತೆ ಸೂಚನೆ

ಅಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಹೊಂದಿದ್ದೇನೆ. ಅದಕ್ಕೆ ತಕ್ಕಂತೆ ಯಾವುದೇ ಒತ್ತಡಕ್ಕೆ ಮಣಿಯದೆ ಜನರ ಕೆಲಸ ಮಾಡಬೇಕು. ನಮ್ಮ ಸರ್ಕಾರದಲ್ಲಿ ಜಾತಿ, ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ. ಎಲ್ಲಾ ಇಲಾಖೆಗಳ ಬಾಕಿ ಕೆಲಸದ ಪಟ್ಟಿಯನ್ನು 25 ದಿನದೊಳಗೆ ಪಟ್ಟಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸುವ ಮೂಲಕ ಪಾರದರ್ಶಕವಾಗಿ ಕೆಲಸ ಮಾಡುವಂತೆ ತಿಳಿಸಿದ್ದಾರೆ.

ಜನ ಮೆಚ್ಚುವಂತಹ ಆಡಳಿತ ನೀಡುವುದು, ಸಾರ್ವಜನಿಕರ ಸಂಕಷ್ಟಗಳನ್ನು ಬಗೆಹರಿಸುವುದು, ಮತ್ತು ಅಭಿವೃದ್ಧಿಯನ್ನು ಸುಗಮಗೊಳಿಸುವುದು ತಮ್ಮ ಸರ್ಕಾರದ ಮುಖ್ಯ ಉದ್ದೇಶ. ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ಪಾತ್ರವನ್ನು ಅವರು ಮನವರಿಕೆ ಮಾಡಿಕೊಟ್ಟರು. ಯಾವುದೇ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು ಎಂದು ಖಡಕ್ ಆಗಿ ಹೇಳಿದ್ದಾರೆ. ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಹೀಗಾಗಿ ಅಧಿಕಾರಿಗಳು ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಬೇಕು. ಸರ್ಕಾರದ ಯೋಜನೆಗಳು ಸಮರ್ಥವಾಗಿ ಜನರಿಗೆ ತಲುಪಿಸಬೇಕು. ಅಭಿವೃದ್ಧಿ ಹಾದಿಗೆ ಮೆಟ್ಟಿಲಾಗಿ ಮೆಚ್ಚುವಂತೆ ಕೆಲಸ ಮಾಡಬೇಕೆಂದು ನಯವಾಗಿಯೇ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ನಿನ್ನೆ ಅಷ್ಟೇ ಜಾರಿಗೊಳಿಸಿದ ಆರು ಕಲ್ಯಾಣ ಯೋಜನೆಗಳನ್ನು ತಕ್ಷಣ ಜಾರಿಗೊಳಿಸುವಂತೆ ಸೂಚಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು, ರೌಡಿಸಂ, ಡ್ರಗ್ಸ್ ಮತ್ತು ಜೂಜಾಟ ತಡೆಗಟ್ಟಲು ಖಡಕ್ ಸೂಚನೆ ನೀಡಿದ್ದಾರೆ. ಅಲ್ಲದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡಬೇಕೆಂಬುದು ನಮ್ಮ ಗುರಿ

ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡಬೇಕೆಂಬುದು ನಮ್ಮ ಗುರಿಯಾಗಿದ್ದು, ನಾವೆಲ್ಲಾ ಸೇರಿ ಭ್ರಷ್ಟಾಚಾರ ಮುಕ್ತ ಆಡಳಿತ ಕೊಡಬೇಕು. ಯಾವುದೇ ಒತ್ತಡಕ್ಕೆ ಮಣಿಯದೇ ಮಂತ್ರಿಗಳು, ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಎಲ್ಲಾ ಇಲಾಖೆಗಳು 15 ದಿನದಲ್ಲಿ ಆ್ಯಕ್ಷನ್ ಪ್ಲ್ಯಾನ್ ಮಾಡಬೇಕು.ಎಲ್ಲ ಕೆಲಸಗಳನ್ನು ಪಾಸಿಟಿವ್ ಆಗಿ ಕಾರ್ಯನಿರ್ವಹಿಸಬೇಕು. ನನಗೆ ಹಿಸ್ಟರಿ ಬರೆಯೋಕೆ, ಓದೋಕೆ ಇಷ್ಟ ಇಲ್ಲ. ಇತಿಹಾಸ ನಿರ್ಮಾಣ ಮಾಡಬೇಕು, ಸಾಕ್ಷಿ ಗುಡ್ಡೆ ಇರಬೇಕು ಎಂದಿದ್ದಾರೆ.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ