AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಕೇಂದ್ರ ಬರ ಅಧ್ಯಯನ ತಂಡದಿಂದ ರಾಜ್ಯ ಪ್ರವಾಸ; 3705.30 ಕೋಟಿ ರೂ. ಪರಿಹಾರಕ್ಕೆ ಸಿಎಂ ಮನವಿ

ಇಂದಿನಿಂದ ಕೇಂದ್ರ ಬರ ಅಧ್ಯಯನ ತಂಡದಿಂದ ರಾಜ್ಯ ಪ್ರವಾಸ; 3705.30 ಕೋಟಿ ರೂ. ಪರಿಹಾರಕ್ಕೆ ಸಿಎಂ ಮನವಿ

ರಮೇಶ್ ಬಿ. ಜವಳಗೇರಾ
|

Updated on: Oct 03, 2026 | 3:28 PM

Share

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರದ ಅಂತರ್‌ಸಚಿವಾಲಯ ತಂಡ ಬರ ಅಧ್ಯಯನಕ್ಕೆ ಕರ್ನಾಟಕಕ್ಕೆ ಆಗಮಿಸಿದ್ದು, ಬರ ಅಧ್ಯಯನ ಪ್ರದೇಶಕ್ಕೆ ಭೇಟಿ ನೀಡುವ ಮುನ್ನ ಇಂದು (ಅಕ್ಟೋಬರ್ 03) ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಡಿಕೆ ಶಿಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ಈ ವೇಳೆ ಡಿಕೆ ಶಿವಕುಮಾರ್ ಅವರು NDRF ಮಾನದಂಡಗಳನ್ವಯ ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ ಎಂದು ಮನವಿ ಮಾಡಿದ್ದಾರೆ.

ಬೆಂಗಳೂರು, (ಅಕ್ಟೋಬರ್ 03): ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರದ ಅಂತರ್‌ಸಚಿವಾಲಯ ತಂಡ ಬರ ಅಧ್ಯಯನಕ್ಕೆ ಕರ್ನಾಟಕಕ್ಕೆ ಆಗಮಿಸಿದ್ದು, ಬರ ಅಧ್ಯಯನ ಪ್ರದೇಶಕ್ಕೆ ಭೇಟಿ ನೀಡುವ ಮುನ್ನ ಇಂದು (ಅಕ್ಟೋಬರ್ 03) ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಡಿಕೆ ಶಿಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ಈ ವೇಳೆ ಡಿಕೆ ಶಿವಕುಮಾರ್ ಅವರು NDRF ಮಾನದಂಡಗಳನ್ವಯ ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಯಾವುದೇ ಒತ್ತಡಗಳಿಗೆ ಜಗ್ಗದೆ, ಕೇಂದ್ರ ಸರ್ಕಾರದ ವಿಪತ್ತು ನಿರ್ವಹಣೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಅತ್ಯಂತ ವೈಜ್ಞಾನಿಕವಾಗಿ ಮೌಲ್ಯಮಾಪನ ನಡೆಸಿ ಬರಪೀಡಿತ ತಾಲೂಕುಗಳನ್ನು ಘೋಷಿಸಲಾಗಿದೆ. ಬರದಿಂದಾಗಿ ರಾಜ್ಯದಲ್ಲಿ ಅಂದಾಜು 46,324.50 ಕೋಟಿ ರೂಪಾಯಿ ನಷ್ಟವಾಗಿದೆ. ಹೀಗಾಗಿ ರಾಜ್ಯಕ್ಕೆ ನ್ಯಾಯಸಮ್ಮತ ಪರಿಹಾರ ದೊರಕಿಸಿಕೊಡುವಂತೆ ಕೇಳಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More