RSS ಬ್ಯಾನ್​ ಮಾಡಿ ಅನ್ನೋ ಕಾಂಗ್ರೆಸ್​, ಅಧಿಕಾರದಲ್ಲಿದ್ದಾಗ ಯಾಕೆ ಬ್ಯಾನ್​ ಮಾಡಲಿಲ್ಲ: ಇಬ್ರಾಹಿಂ ಪ್ರಶ್ನೆ

| Updated By: ವಿವೇಕ ಬಿರಾದಾರ

Updated on: Oct 24, 2022 | 3:00 PM

ಮುಸ್ಲಿಂ ಸಮುದಾಯದ ಮೀಸಲಾತಿ ತೆಗೆಯಲು ಸಾಧ್ಯವಿಲ್ಲ. ಸಂವಿಧಾನ ಬದ್ದವಾಗಿ ಮೀಸಲಾತಿ ನೀಡಲಾಗಿದೆ.

RSS ಬ್ಯಾನ್​ ಮಾಡಿ ಅನ್ನೋ ಕಾಂಗ್ರೆಸ್​, ಅಧಿಕಾರದಲ್ಲಿದ್ದಾಗ ಯಾಕೆ ಬ್ಯಾನ್​ ಮಾಡಲಿಲ್ಲ: ಇಬ್ರಾಹಿಂ ಪ್ರಶ್ನೆ
ಸಿಎಮ್ ಇಬ್ರಾಹಿಂ, ಜೆಡಿಎಸ್ ರಾಜ್ಯಾಧ್ಯಕ್ಷ
Follow us on

ವಿಜಯಪುರ: ಆರ್​ಎಸ್​ಎಸ್ ಬ್ಯಾನ್ ಮಾಡಿ ಅನ್ನುವ ಕಾಂಗ್ರೆಸ್, ಅಧಿಕಾರದಲ್ಲಿದ್ದಾಗ ಏನು ಮಾಡಿತು? ಪಿಎಫ್​ಐ ಬ್ಯಾನ್ ಎಂದಾಗ ಸ್ವಾಗತ ಅನ್ನೋರಿಗೆ ರಾಮಸೇನೆ ಯಾಕೆ ನೆನಪಾಗಲಿಲ್ಲ? ರಾಮಸೇನೆಯವರೇನು ಅವರ ಚಿಕ್ಕಪ್ಪನ ಮಕ್ಕಳಾ? ಗುಂಡಾಗಳು (ಹಿಂದೂಗಳು) ಸತ್ತರೆ ಐದು ಲಕ್ಷ ಪರಿಹಾರ ಕೊಡುತ್ತಾರೆ. ನಾವು ಯಾವುದೇ ಧರ್ಮ ನೋಡದೆ ಹಿಂದೂ ಮುಸ್ಲಿಂ ಎಲ್ಲರಿಗೂ ಸಮಾನ ಪರಿಹಾರ ಹಣ ನೀಡಿದ್ದೇವೆ ಎಂದು ಕಾಂಗ್ರೆಸ್​ ವಿರುದ್ಧ ವಿಜಯಪುರದಲ್ಲಿ (Vijaypura) ಜೆಡಿಎಸ್ (JDS) ರಾಜ್ಯಾದ್ಯಕ್ಷ ಸಿ.ಎಂ ಇಬ್ರಾಹಿಂ (CM Ibrahim) ವಾಗ್ದಾಳಿ ಮಾಡಿದ್ದಾರೆ.

ಮೀಸಲಾತಿ ಕೇಳುತ್ತಿರುವವರ ಬಗ್ಗೆ ಸಮೀಕ್ಷೆ ನಡೆಸಬೇಕು

ಇಬ್ರಾಹಿಂ ಇಂದು (ಅ. 24) ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಜೆಡಿಎಸ್​ ಅಭ್ಯರ್ಥ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವೇಳೆ ಮಾತನಾಡಿದ ಅವರು ರಾಜ್ಯ ಸರ್ಕಾರಕ್ಕೆ ದಿಕ್ಕಿಲ್ಲ, ದೆಸೆಯಿಲ್ಲ. ಇವರಿಗೆ ಬದ್ದತೆಯಿದ್ದರೆ ಒಂದು ಕಮೀಟಿ ರಚನೆ ಮಾಡಲ್ಲ. ಮೀಸಲಾತಿ ಬಗ್ಗೆ ಪರಾಮರ್ಶೆ ಆಗಬೇಕು. ಮೀಸಲಾತಿ ಕೇಳುತ್ತಿರುವವರ ಬಗ್ಗೆ ಸಮೀಕ್ಷೆ ನಡೆಸಬೇಕು ಎಂದು ಎಸ್​​.ಸಿ, ಎಸ್​​ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿದ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ಶಾಸಕ ಬಸವನಗೌಡ ಪಾಟೀಲ್​ ಯತ್ನಾಳ ಹೇಳಿಕೆಗೆ ಸಿಎಂ ಇಬ್ರಾಹಿಂ ಟಾಂಗ್

ಮುಸ್ಲೀಂ ಸಮುದಾಯವರ ಮೀಸಲಾತಿ ರದ್ದು ಮಾಡುವ ವಿಚಾರವಾಗಿ ಮಾತನಾಡಿದ ಅವರು ಮುಸ್ಲಿಂ ಸಮುದಾಯದ ಮೀಸಲಾತಿ ತೆಗೆಯಲು ಸಾಧ್ಯವಿಲ್ಲ. ಸಂವಿಧಾನ ಬದ್ದವಾಗಿ ಮೀಸಲಾತಿ ನೀಡಲಾಗಿದೆ. ಇದನ್ನ ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದು ಸಂತಸ ತಂದಿದೆ. ಭಾರತ್ ಜೋಡೋಗಿಂತ ಕಾಂಗ್ರೆಸ್ ಜೋಡೋ ಮಾಡಬೇಕಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಪ್ರಾದೇಶಿಕ ಪಕ್ಷಕ್ಕಿಂತ ವೀಕ್ ಆಗಿದೆ. ಜೆಡಿಎಸ್​​ ಮೊದಲ ಸ್ಥಾನ, ಬಿಜೆಪಿ 2ನೇ ಸ್ಥಾನ, ಕಾಂಗ್ರೆಸ್​ 3ನೇ ಸ್ಥಾನದಲ್ಲಿದೆ. ಈ ಬಾರಿ ಜೆಡಿಎಸ್​ ಪಕ್ಷಕ್ಕೆ ಬಹುಮತ ಸಿಗುವ ನಿರೀಕ್ಷೆ ಇದೆ. ಭಾರತ ಜೋಡೋಕ್ಕಿಂತ ಕಾಂಗ್ರೆಸ್ ಜೋಡೋ ಮಾಡಬೇಕಾಗಿದೆ ಎಂದು ವ್ಯಂಗ್ಯ ಮಾಡಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Mon, 24 October 22